ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಹೊರವಲಯದಲ್ಲಿ ಇರುವ ರೋಟರಿ ಬಯೋ ಡೈವರ್ಸಿಟಿ ಪಾರ್ಕಿನಲ್ಲಿ ನಗರದ ಎಂಟು ರೋಟರಿ ಕ್ಲಬ್ ಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಸಸಿಗಳನ್ನು ನೆಡುವುದರ ಮುಖಾಂತರ ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ಜಾಗೃತಿ ಪರಿಸರ ಸಂರಕ್ಷಣೆ ಕೇವಲ ಸಸಿಗಳನ್ನು ನೆಡುವುದು ಮಾತ್ರವಲ್ಲ, ಪ್ರತಿಯೊಂದು ಹಂತದಲ್ಲೂ ಗಾಳಿ, ನೀರು, ಪ್ರಾಣಿ, ಪಕ್ಷಿ ಹಾಗೂ ಶುದ್ಧವಾದ ವಾತಾವರಣ ಎಲ್ಲವೂ ಸಹ ಉತ್ತಮವಾಗಿ ಇರಬೇಕಾದರೆ ಒಳ್ಳೆಯ ಪರಿಸರ ಅತ್ಯಗತ್ಯ ಎಂದರು.
ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ. ತ್ಯಾಜ್ಯ ವಿಲೇವಾರಿ ಹಾಗೂ ಅತಿಯಾದ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದರ ಜೊತೆಗೆ ಪರಿಸರವನ್ನು ನಾವು ಸ್ವಚ್ಛವಾಗಿಟ್ಟುಕೊಳ್ಳಬೇಕು. ಪರಿಸರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಈ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಈ ವರ್ಷದ ಧ್ಯೇಯ ವಾಕ್ಯ ಪ್ಲಾಸ್ಟಿಕ್ ಮಾಲಿನ್ಯಕ್ಕೆ ಅಂತ್ಯ ಹಾಡುವುದು ಆಗಿದೆ. ಈ ನಿಟ್ಟಿನಲ್ಲಿ ನಗರದ ರೋಟರಿ ಸಂಸ್ಥೆಯವರು ತುಂಬಾ ಮಹತ್ತರವಾದ ಹಾಗೂ ಪವಿತ್ರವಾದ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಮಾಜಿ ಜಿಲ್ಲಾ ಗವರ್ನರ್ ಡಾ. ಪಿ.ನಾರಾಯಣ್ ಮಾತನಾಡಿ, ರೋಟರಿ ಸಂಸ್ಥೆಗಳ ಪ್ರಮುಖವಾದ ಯೋಜನೆ ಈ ಬಯೋ ಡೈವರ್ಸಿಟಿ ಪಾರ್ಕ್ ನಲ್ಲಿ ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡುವುದರ ಮುಖಾಂತರ ಎಲ್ಲಾ ಸಂಘ ಸಂಸ್ಥೆಗಳ ನೆರವಿನಿಂದ ಮತ್ತು ಶಾಲಾ ಕಾಲೇಜುಗಳ ಸಹಕಾರದಿಂದ ಈ ಕಾರ್ಯಕ್ರಮ ಯಶಸ್ವಿಯಾಗುತ್ತಿದೆ. ಇನ್ನು ಸರ್ಕಾರದ ಹಾಗೂ ಜಿಲ್ಲಾಡಳಿತದ ಸಾಕಾರ ಅತ್ಯಗತ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗದ ಪ್ರತಿಷ್ಠಿತ ಜ್ಞಾನದೀಪ ವಿದ್ಯಾಸಂಸ್ಥೆ, ಇಂಡೋಕಿಡ್ಸ್ ಶಾಲೆ ಮತ್ತು ಜೈನ ಶಾಲೆಯ ಸುಮಾರು 150 ಮಕ್ಕಳು, ಅಧ್ಯಾಪಕರು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಸಸಿ ನೆಡುವ ಮೂಲಕ ಪರಿಸರದ ಆಚರಣೆಯಲ್ಲಿ ಭಾಗವಹಿಸಿದ್ದರು. ತುಂಗಾ ಮೆಲ್ದಂಡೆ ವಲಯದ ಕಾರ್ಯಪಾಲಕ ಇಂಜಿನಿಯರ್ ಕೃಷ್ಣಪ್ರಸಾದ್ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಉಪಾಧ್ಯಕ್ಷರಾದ ರೋ. ಹೆಚ್.ಎನ್.ಎಸ್.ರಾವ್ ರವರು ಗಣ್ಯರನ್ನು ಸ್ವಾಗತಿಸಿದರು. ನಿಯೋಜಿತ ಅಸಿಸ್ಟೆಂಟ್ ಗವರ್ನರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರೋ. ಕೆ.ಪಿ.ಶೆಟ್ಟಿ ನಿರೂಪಿಸಿದರು.