ಸಾಮರ್ಥ್ಯವನ್ನು ಗುರುತಿಸುವ ಯಶಸ್ವಿ ನಾಯಕರು ಬೇಕು: ಜಿ.ಎಸ್.ನಾರಾಯಣ ರಾವ್

KannadaprabhaNewsNetwork |  
Published : Aug 01, 2025, 12:00 AM IST
ಪೊಟೋ: 30ಎಸ್‌ಎಂಜಿಕೆಪಿ01ಶಿವಮೊಗ್ಗದ ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನಲ್ಲಿ ನಿರ್ಮಿಸಿರುವ ನೂತನ ಬಿ-ಬ್ಲಾಕ್ ಕಟ್ಟಡವನ್ನು ಬುಧವಾರ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಲೋಕಾರ್ಪಣೆಗೊಳಿಸಿದರು. | Kannada Prabha

ಸಾರಾಂಶ

ಇನ್ನೊಬ್ಬರ ಸಾಮರ್ಥ್ಯವನ್ನು ಕರಾರುವಕ್ಕಾಗಿ ಗುರುತಿಸಿ ಬೆಳೆಸುವ ಯಶಸ್ವಿ ನಾಯಕರು ವಿದ್ಯಾಸಂಸ್ಥೆಗಳ ಅಭಿವೃದ್ಧಿಗೆ ಅತ್ಯವಶ್ಯಕ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಇನ್ನೊಬ್ಬರ ಸಾಮರ್ಥ್ಯವನ್ನು ಕರಾರುವಕ್ಕಾಗಿ ಗುರುತಿಸಿ ಬೆಳೆಸುವ ಯಶಸ್ವಿ ನಾಯಕರು ವಿದ್ಯಾಸಂಸ್ಥೆಗಳ ಅಭಿವೃದ್ಧಿಗೆ ಅತ್ಯವಶ್ಯಕ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.

ನಗರದ ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನಲ್ಲಿ ನಿರ್ಮಿಸಿರುವ ನೂತನ ಬಿ-ಬ್ಲಾಕ್ ಕಟ್ಟಡವನ್ನು ಬುಧವಾರ ಲೋಕಾರ್ಪಣೆಗೊಳಿಸಿ ಮಾತನಾಡಿ, ಎನ್ಇಎಸ್ ಸಂಸ್ಥೆಯ ವಿವಿಧ ಶಾಲಾ ಕಾಲೇಜುಗಳನ್ನು ಮತ್ತಷ್ಟು ಮೇಲ್ದರ್ಜೆಗೆ ಏರಿಸುವ ಕಾರ್ಯ ನಡೆಯುತ್ತಿದೆ‌. ವಿಶೇಷವಾಗಿ ಅನುದಾನಿತ ಶಾಲೆಗಳನ್ನು ಆಧುನಿಕತೆಗೆ ತಕ್ಕಂತೆ ಉನ್ನತಿಕರಣಗೊಳಿಸುತ್ತಿದ್ದು, ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳು ಇದರ ಲಾಭವನ್ನು ಪಡೆಯುತ್ತಿದ್ದಾರೆ ಎಂದರು.

ಉಪನ್ಯಾಸಕರಲ್ಲಿ ನಿರಂತರ ಕಲಿಕೆ ಎಂಬ ಪ್ರಕ್ರಿಯೆ ರೂಢಿಗತವಾಗಬೇಕು. ಆಗ ಮಾತ್ರ ತರಗತಿಯಲ್ಲಿ ಗುಣಮಟ್ಟದ ಬೋಧನೆಯ ಮೂಲಕ ವಿದ್ಯಾರ್ಥಿಗಳನ್ನು ತಲುಪಲು ಸಾಧ್ಯ. ಪ್ರತಿಯೊಬ್ಬ ವ್ಯಕ್ತಿ ಊಟ ಮಾಡುವಾಗ, ಈ ಅನ್ನದ ತುತ್ತನ್ನು ತಾನು ಯಾರಿಂದಲೂ ಕಸಿದಿಲ್ಲ ಎಂಬ ಆತ್ಮ ತೃಪ್ತಿ ಬೇಕು. ಅದೇ ರೀತಿ ಕಲಿಕೆಯ ಹಪಹಪಿ ಒರುವ ವಿದ್ಯಾರ್ಥಿಗಳಿಗೆ ಉತ್ತಮವಾಗಿ ಕಲಿಸಿದಾಗ ಮಾತ್ರ, ನಿಜವಾದ ವೃತ್ತಿ ಸಾರ್ಥಕತೆ ಸಿಗುತ್ತದೆ‌ ಎಂದು ಹೇಳಿದರು.

ಈ ಹಿನ್ನಲೆಯಲ್ಲಿ ವಿದ್ಯಾಸಂಸ್ಥೆಯ ಗುಣಮಟ್ಟವನ್ನು ಹೆಚ್ಚಿಸಲು ಆದ್ಯತೆ ನೀಡಿ. ಶಿಕ್ಷಕರ ಕಾರ್ಯಕ್ಷಮತೆ ಹೆಚ್ಚಾಗಲಿ, ವಿದ್ಯಾರ್ಥಿಗಳಲ್ಲಿ ಸಂಸ್ಕೃತಿ ಸದಾಚಾರಗಳನ್ನು ಬಿತ್ತುವ ಕಾರ್ಯದಲ್ಲಿ ತೊಡಗಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಕಾಲೇಜು ಬೆಳೆದಂತೆಲ್ಲ ಸವಾಲುಗಳು ಹೆಚ್ಚುತ್ತಿರುತ್ತದೆ. ಈಗಿನ ವಿದ್ಯಾರ್ಥಿಗಳ ಅಪೇಕ್ಷೆ, ಕಲಿಕಾ ಸಾಮರ್ಥ್ಯಗಳು ವ್ಯತ್ಯಾಸಗೊಳ್ಳುತ್ತಲೆ ಇರುತ್ತದೆ. ಅದಕ್ಕೆ ತಕ್ಕಂತೆ ಉಪನ್ಯಾಸಕರು ಉನ್ನತಿಕರಣಗೊಳ್ಳುವ ಸವಾಲಿದೆ. ಹೊಸ ತಾಂತ್ರಿಕ ಮತ್ತು ಬೋಧನಾ ಕೌಶಲ್ಯತೆಗಳ ಉತ್ಖನನ ಉಪನ್ಯಾಸಕರಿಂದ ನಡೆಯಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ ಮಾತನಾಡಿದರು. ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಮೈಲಾರಪ್ಪ, ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಶ್ರೀಕೃಷ್ಣ, ಅನಂತದತ್ತಾ, ಸೀತಾಲಕ್ಷ್ಮೀ, ಮಾಧುರಾವ್, ಸುಧೀರ್, ಎಚ್.ಸಿ.ಶಿವಕುಮಾರ್, ಆಜೀವ ಸದಸ್ಯರಾದ ರುಕ್ಮಿಣಿ ವೇದವ್ಯಾಸ, ಕಿಶೋರ್ ಶೀರನಾಳಿ, ರವೀಂದ್ರ, ವಿಖ್ಯಾತ್, ಗುರುಪ್ರಸಾದ್, ಜಗದೀಶ್, ಕುಲಸಚಿವ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಡಾ.ಎಲ್.ಕೆ.ಅರವಿಂದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಲಕ್ಷ್ಮಣ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ