ಪಂಪ ಕವಿಯನ್ನು ನಾವು ಸ್ಮರಿಸಬೇಕಿದೆ; ಶಾಸಕ ಶಿವರಾಮ ಹೆಬ್ಬಾರ

KannadaprabhaNewsNetwork |  
Published : Nov 11, 2025, 02:45 AM IST
ಪೊಟೋ10ಎಸ್.ಆರ್.ಎಸ್10  (ಬನವಾಸಿಯ ಮಧುಕೇಶ್ವರ ದೇವಸ್ಥಾನದ ಆವರಣದಲ್ಲಿ ಕದಂಬ ಕನ್ನಡ ಸೇನೆಯ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಶಾಸಕ ಶಿವರಾಮ ಹೆಬ್ಬಾರ ಉದ್ಘಾಟಿಸಿದರು.) | Kannada Prabha

ಸಾರಾಂಶ

ಕನ್ನಡ ನಾಡಿನ ಕಂಪನ್ನು ಹಾಗೂ ಬನವಾಸಿಯ ವೈಭವವನ್ನು ನಾಡಿಗೆ ಸಾರಿದ ಪಂಪ ಕವಿಯನ್ನು ನಾವು ಸ್ಮರಿಸಬೇಕು.

ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ

ಕನ್ನಡಪ್ರಭ ವಾರ್ತೆ ಶಿರಸಿ

ಕನ್ನಡ ನಾಡಿನ ಕಂಪನ್ನು ಹಾಗೂ ಬನವಾಸಿಯ ವೈಭವವನ್ನು ನಾಡಿಗೆ ಸಾರಿದ ಪಂಪ ಕವಿಯನ್ನು ನಾವು ಸ್ಮರಿಸಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.ಸೋಮವಾರ ಬನವಾಸಿಯ ಮಧುಕೇಶ್ವರ ದೇವಸ್ಥಾನದ ಆವರಣದಲ್ಲಿ ಕದಂಬ ಕನ್ನಡ ಸೇನೆಯ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಕನ್ನಡ ನೆಲ, ಜಲಕ್ಕಾಗಿ ಹೋರಾಟ ಮಾಡಬೇಕಾದ ಅನಿವಾರ್ಯತೆ ಬಂದೋದಗಿದೆ. ಕನ್ನಡದ ಭಾಷೆ ಶ್ರೀಮಂತವಾಗಿದ್ದು, ಯಾವ ಭಾಷೆಗೆ ಬಾರದಷ್ಟು ಪ್ರಶಸ್ತಿಗಳು ನಮ್ಮ ಕನ್ನಡ ಭಾಷೆಗೆ ಬಂದಿದೆ. ಇಂತಹ ನಾಡಿನಲ್ಲಿ ನಾವು ಹುಟ್ಟಿದ್ದೇವೆ ಎಂಬುದೇ ನಮಗೆ ಹೆಮ್ಮೆಯ ಸಂಗತಿ ಎಂದ ಅವರು, ಕದಂಬ ರಾಜಮನೆತನವು ಬನವಾಸಿಯನ್ನು ತನ್ನ ರಾಜಧಾನಿಯನ್ನಾಗಿ ಮಾಡಿಕೊಂಡು ವೈಭವದಿಂದ ಆಡಳಿತ ನಡೆಸಿದೆ. ಇಂತಹ ಪುಣ್ಯ ನೆಲದಲ್ಲಿ ಕನ್ನಡದ ಕಾರ್ಯಕ್ರಮಗಳು ನಡೆಯುತ್ತಿವೆ. ಕದಂಬ ಕನ್ನಡ ಸೇನೆಯ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸುತ್ತಿರುವುದು ಸಂತಸದ ಸಂಗತಿ ಎಂದರು.ಕರ್ನಾಟಕದ ಪ್ರತಿ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕನ್ನಡದ ಮೊದಲ ಸಾಮ್ರಾಜ್ಯ ಸ್ಥಾಪಕ ಮಯೂರವರ್ಮನ ಪುತ್ಥಳಿ ಸ್ಥಾಪಿಸುವಂತೆ ಸಂಘಟನೆ ವತಿಯಿಂದ ಶಾಸಕರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಕದಂಬ ಕನ್ನಡ ಸೇನೆಯ ಸಂಸ್ಥಾಪಕ ಅಧ್ಯಕ್ಷ ಕದಂಬ ನಾ.ಅಂಬರೀಷ್ ಪ್ರಾಸ್ತಾವಿಕವಾಗಿ ಮಾತನಾಡಿ, ಕದಂಬ ಕನ್ನಡ ಸೇನೆಗೆ ಇತಿಹಾಸವಿದೆ. ಸಂಘಟನೆ ಹೋರಾಟಕ್ಕೆ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗಿರದೇ, ಸಾಮಾಜಿಕ ಕಾರ್ಯಗಳಲ್ಲೂ ಸಂಘಟನೆ ಕೆಲಸ ಮಾಡುತ್ತಿದೆ. ಕಳೆದ 15 ವರ್ಷಗಳಿಂದ ಸಂಘಟನೆಯು ರಾಜ್ಯಾದ್ಯಂತ ಬಹಳ ಯಶಸ್ವಿಯಾಗಿ ಕೆಲಸ ಮಾಡುತ್ತಿದೆ. ಸುಮಾರು ಎರಡುವರೆ ಸಾವಿರ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಿದ್ದೇವೆ ಎಂದರು.ಈ ಸಂದರ್ಭದಲ್ಲಿ ಹಲವು ಸಾಧಕರಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು.ರಾಜ್ಯಾಧ್ಯಕ್ಷ ಕದಂಬ ಶಿವಕುಮಾರ, ಚಲನಚಿತ್ರ ನಟ ನೀರ್ನಳ್ಳಿ ರಾಮಕೃಷ್ಣ ಹೆಗಡೆ, ಗೌಡಗೆರೆ ಚಾಮುಂಡೇಶ್ವರಿ ದೇವಾಲಯದ ಧರ್ಮದರ್ಶಿ ಮಲ್ಲೇಶ್, ಲೇಖಕ ಸಂತೋಷ ಕುಮಾರ್ ಮೆಹೆಂದೆಳೆ, ಅಖಿಲ ಭಾರತ ಸನಾತನ ಧರ್ಮ ಜಾಗರಣ ಮಂಚ್ ಮುಖ್ಯಸ್ಥ ಡಾ. ಆರ್.ಎಸ್. ರಾಜು, ವೈದ್ಯ ಡಾ. ಲೋಕನಂದ, ಜಿಲ್ಲಾಧ್ಯಕ್ಷ ಸತೀಶ ನಾಯ್ಕ, ತಾಲೂಕಾಧ್ಯಕ್ಷ ವಿನಯ ಗೌಡ, ಮಧುಕೇಶ್ವರ ದೇವಸ್ಥಾನದ ಅಧ್ಯಕ್ಷ ರಾಜಶೇಖರ್ ಒಡೆಯರ್, ಕರ್ನಾಟಕ ಜನತಾ ಪಕ್ಷದ ರಾಜ್ಯಾಧ್ಯಕ್ಷ ಪ್ರವೀಣ ಭಾರಧ್ವಾಜ, ಯಶ್ಮೀತ್ ಗ್ರೂಪ್ ಮಾಲಿಕ ಸಿ‌.ಎಸ್. ವಿಜಯಕುಮಾರ, ಎಸ್.ಬಿ. ಗೌಡ ಸಂತೊಳ್ಳಿ, ದೀಪಕ ಬಂಗ್ಲೆ ಮತ್ತಿತರರು ಇದ್ದರು. ಸ್ವಾತಿ ನಾಯ್ಕ ಪ್ರಾರ್ಥಿಸಿದರು.

PREV

Recommended Stories

ಗೋವಿನಜೋಳ ಖರೀದಿ ಕೇಂದ್ರ ಆರಂಭಿಸಲು ಆಗ್ರಹಿಸಿ ಸರ್ಕಾರಕ್ಕೆ ಮನವಿ
ಪ್ರೇರಣಾ ಸಂಸ್ಥೆ ಜನಸಾಮಾನ್ಯರಿಗೆ ಮರಣಶಾಸನ: ಸುರೇಶ ಭೂಮರಡ್ಡಿ