ಗಾಂಧೀಜಿ ಹಾಗೂ ಶಾಸ್ತ್ರಿ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು

KannadaprabhaNewsNetwork |  
Published : Oct 03, 2026, 01:15 AM IST
ಗಾಂಧೀಜಿ, ಶಾಸ್ತ್ರಿ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಶಿವಲಿಂಗೇಗೌಡ | Kannada Prabha

ಸಾರಾಂಶ

ಮಹಾತ್ಮ ಗಾಂಧೀಜಿ ಅವರು ಅಹಿಂಸೆಯ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕು ನೀಡಿದರು. ಅವರ ಸತ್ಯ, ಅಹಿಂಸೆ ಹಾಗೂ ಶಾಂತಿಯ ಸಂದೇಶ ಭಾರತಕ್ಕೆ ಮಾತ್ರ ಸೀಮಿತವಾಗದೆ ವಿಶ್ವದಾದ್ಯಂತ ಪ್ರೇರಣೆಯಾಗಿದೆ. ಗಾಂಧೀಜಿ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿದ್ದು, ಯುವಜನತೆ ಅವುಗಳನ್ನು ಅರಿತು ಮುನ್ನಡೆಯಬೇಕು ಎಂದರು. ಕಸ್ತೂರ ಬಾ ಆಶ್ರಮದ ಆವರಣದಲ್ಲಿರುವ ಗಾಂಧೀಜಿ ಅವರ ಚಿತಾಭಸ್ಮ ಸಮಾಧಿ ಇರುವ ಸ್ಥಳವನ್ನು ಈಗಾಗಲೇ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮೂಲಕ ಪ್ರವಾಸಿ ತಾಣವಾಗಿ ರೂಪಿಸಲಾಗುತ್ತಿದೆ. ಸಮಾಧಿಯ ಮುಂಭಾಗದಲ್ಲಿ ಇಂದಿನಿಂದ ನಿರಂತರವಾಗಿ ಜ್ಯೋತಿ ಬೆಳಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಸರಳತೆ, ತ್ಯಾಗ, ಪ್ರಾಮಾಣಿಕತೆ ಮತ್ತು ದೇಶಸೇವೆಯ ಮೌಲ್ಯಗಳನ್ನು ಇಂದಿನ ಪೀಳಿಗೆ ಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ. ಎಂ. ಶಿವಲಿಂಗೇಗೌಡ ಹೇಳಿದರು.ನಗರದ ಹೊರವಲಯದಲ್ಲಿರುವ ಕಸ್ತೂರಬಾ ಆಶ್ರಮದ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗಾಂಧೀಜಿ ಅವರ ಚಿತಾಭಸ್ಮ ಸಮಾಧಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಮಹಾತ್ಮ ಗಾಂಧೀಜಿ ಅವರು ಅಹಿಂಸೆಯ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕು ನೀಡಿದರು. ಅವರ ಸತ್ಯ, ಅಹಿಂಸೆ ಹಾಗೂ ಶಾಂತಿಯ ಸಂದೇಶ ಭಾರತಕ್ಕೆ ಮಾತ್ರ ಸೀಮಿತವಾಗದೆ ವಿಶ್ವದಾದ್ಯಂತ ಪ್ರೇರಣೆಯಾಗಿದೆ. ಗಾಂಧೀಜಿ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿದ್ದು, ಯುವಜನತೆ ಅವುಗಳನ್ನು ಅರಿತು ಮುನ್ನಡೆಯಬೇಕು ಎಂದರು. ಕಸ್ತೂರ ಬಾ ಆಶ್ರಮದ ಆವರಣದಲ್ಲಿರುವ ಗಾಂಧೀಜಿ ಅವರ ಚಿತಾಭಸ್ಮ ಸಮಾಧಿ ಇರುವ ಸ್ಥಳವನ್ನು ಈಗಾಗಲೇ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮೂಲಕ ಪ್ರವಾಸಿ ತಾಣವಾಗಿ ರೂಪಿಸಲಾಗುತ್ತಿದೆ. ಸಮಾಧಿಯ ಮುಂಭಾಗದಲ್ಲಿ ಇಂದಿನಿಂದ ನಿರಂತರವಾಗಿ ಜ್ಯೋತಿ ಬೆಳಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರು ತಮ್ಮ ಸರಳ ಜೀವನ, ಶಿಸ್ತು ಹಾಗೂ ದೇಶದ ಮೇಲಿನ ಬದ್ಧತೆಯಿಂದ ಜನಮನದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ಸಾರ್ವಜನಿಕ ಜೀವನದಲ್ಲಿರುವವರು ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಶಿವಲಿಂಗೇಗೌಡ ಹೇಳಿದರು.ಕಾರ್ಯಕ್ರಮದಲ್ಲಿ ತಹಸೀಲ್ದಾರ್‌ ಸಂತೋಷ್ ಕುಮಾರ್, ವಿದ್ಯಾಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಆರ್‌. ಅನಂತಕುಮಾರ್‌, ನಗರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅರುಣ್ ಕುಮಾರ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಶೇಖರ್, ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ, ತಾಲೂಕು ಪಂಚಾಯಿತಿ ಸಿಇಒ ಗಂಗಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್, ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕ ಅರುಣ್ ಕುಮಾರ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಂಧೀಜಿ ಬಗ್ಗೆ ಯುವಜನ ತಿಳಿದುಕೊಳ್ಳಬೇಕಿದೆ: ಕೆ. ಷಡಕ್ಷರಿ
ಸುಸ್ಥಿರ ಅಭಿವೃದ್ಧಿಗೆ ಗಾಂಧಿ ತತ್ವಾದರ್ಶಗಳು ಪೂರಕ