ಕೆಂಪೇಗೌಡರ ಆದರ್ಶ ನಾವೆಲ್ಲರು ಪಾಲಿಸಬೇಕು: ಕೆ.ರಾಜು

KannadaprabhaNewsNetwork |  
Published : Jun 28, 2025, 12:18 AM IST
27ಕೆಆರ್ ಎಂಎನ್ 1.ಜೆಪಿಜಿರಾಮನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಮುಂಭಾಗ ಆಯೋಜಿಸಿದ್ದ ಧರ್ಮ ರತ್ನಾಕರ ನಾಡಪ್ರಭು ಕೆಂಪೇಗೌಡ ಅವರ 516ನೇ ಜಯಂತಿ ಕಾರ್ಯಕ್ರಮದಲ್ಲಿ ಕೆ.ರಾಜು ಮಾತನಾಡಿದರು. | Kannada Prabha

ಸಾರಾಂಶ

ವೇಗವಾಗಿ ಬೆಳೆಯುತ್ತಿರುವ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಲ್ಲ ಜಾತಿ , ವರ್ಗ , ಪಂಥ , ಧರ್ಮದ ಜನರು ಬದುಕು ಕಟ್ಟಿಕೊಂಡಿದ್ದಾರೆ.

ಸುಸಜ್ಜಿತ ನಗರ ನಿರ್ಮಾಣವಾಗಲು ಕೆಂಪೇಗೌಡರ ವಿವೇಚನೆ ಮತ್ತು ದೂರದೃಷ್ಟಿಯೇ ಕಾರಣ

ಕನ್ನಡಪ್ರಭ ವಾರ್ತೆ ರಾಮನಗರ

ನಾಡಪ್ರಭು ಕೆಂಪೇಗೌಡರು ಒಂದು ಜಾತಿ ವರ್ಗ, ಊರಿಗೆ ಸೀಮಿತವಾಗಿಲ್ಲ. ಅವರ ಆದರ್ಶವನ್ನು ನಾವೆಲ್ಲರೂ ಪಾಲಿಸಿಕೊಂಡು ಮುನ್ನಡೆಯಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ರಾಜು ಹೇಳಿದರು.ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದ ಮುಂಭಾಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆಂಪೇಗೌಡ ಜಯಂತ್ಯುತ್ಸವ ಸಮಿತಿ ಹಾಗೂ ಒಕ್ಕಲಿಗರ ಸಂಘ ಆಯೋಜಿಸಿದ್ದ ಧರ್ಮ ರತ್ನಾಕರ ನಾಡಪ್ರಭು ಕೆಂಪೇಗೌಡ ಅವರ 516ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ವೇಗವಾಗಿ ಬೆಳೆಯುತ್ತಿರುವ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಲ್ಲ ಜಾತಿ , ವರ್ಗ , ಪಂಥ , ಧರ್ಮದ ಜನರು ಬದುಕು ಕಟ್ಟಿಕೊಂಡಿದ್ದಾರೆ. ಅಂತಹ ಸುಂದರ, ಸುಸಜ್ಜಿತ ನಗರ ನಿರ್ಮಾಣವಾಗಲು ಕೆಂಪೇಗೌಡರ ವಿವೇಚನೆ ಮತ್ತು ದೂರದೃಷ್ಟಿಯೇ ಕಾರಣ ಎಂದರು.ಕೆಂಪೇಗೌಡರು ತಮ್ಮ ರಾಜಧಾನಿಯನ್ನು ಯಲಹಂಕದಿಂದ ಬೆಂಗಳೂರಿಗೆ ಸ್ಥಳಾಂತರಿಸಿದರು. ನಗರವನ್ನು ಪ್ರಮುಖ ವಾಣಿಜ್ಯ ಕೇಂದ್ರವನ್ನಾಗಿ ಮಾಡಬೇಕೆಂಬುದು ಅವರ ಮಹದಾಸೆಯಾಗಿತ್ತು. ಅದರಂತೆಯೇ ತಮ್ಮ ಕೋಟೆಯೊಳಗೆ ಆಯಾಯ ಕುಲ ಕುಸುಬುದಾರರಿಗೆ ಅನುಗುಣವಾಗಿ ಪೇಟೆಗಳನ್ನು ಕಟ್ಟಿಕೊಂಡು , ವ್ಯಾಪಾರ ವಹಿವಾಟಿಗೆ ಅನುವು ಮಾಡಿಕೊಟ್ಟಿದ್ದರು ಎಂದು ಹೇಳಿದರು.ಕೆಂಪೇಗೌಡ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಕೆ.ಚಂದ್ರಯ್ಯ ಮಾತನಾಡಿ, ರೈತನ ಮಗ ನಾಡ ಕಟ್ಟಿದ ದೊರೆ ಕೆಂಪೇಗೌಡರು ಬೆಂಗಳೂರು ನಗರ ನಿರ್ಮಾಣ ಹಾಗೂ ಕೋಟೆ ಕತ್ತಲೆ, ಕಲ್ಯಾಣಿ, ಕೆರೆಗಳನ್ನು ಕಟ್ಟಿದ್ದು, ಅವರು ನೀಡಿದ ದಕ್ಷ ಉತ್ತಮ ಆಡಳಿತಗಾರರಾಗಿ ಎಲ್ಲ ಸಮುದಾಯದವರಿಗೆ ಪೇಟೆಗಳನ್ನು ನಿರ್ಮಿಸಿ ಜನರಿಗೆ ನೆರವಾದ ಒಬ್ಬ ಆದರ್ಶ ಪುರುಷ ಎಂದು ಗುಣಗಾನ ಮಾಡಿದರು. ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಹಾಸನ ರಘು, ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸುಷ್ಮಾ, ಎಂ.ಎಚ್.ಪ್ರಕಾಶ್, ಸಾನ್ವಿಸತೀಶ್, ರಾಜು ಪಾದ್ರಳ್ಳಿ, ಮರಸಪ್ಪ ರವಿ, ಕೂ.ಗಿ.ಗಿರಿಯಪ್ಪ, ಪ್ರಕಾಶ್, ಶಿವರಾಜು, ದಿನೇಶ್, ವಿಶಾಲಾಕ್ಷಿ ಸೇರಿದಂತೆ ಹಲವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್, ಕಾರ್ಯದರ್ಶಿ ಶಿವಸ್ವಾಮಿ, ತಾಲೂಕು ಜೆಡಿಎಸ್ ಅಧ್ಯಕ್ಷ ಶಿವಲಿಂಗಯ್ಯ, ಕೆಂಪೇಗೌಡ ಜಯಂತ್ಯುತ್ಸವ ಸಮಿತಿ ಕಾರ್ಯಾಧ್ಯಕ್ಷ ಜಿ.ಟಿ.ಕೃಷ್ಣ, ಕಾರ್ಯದರ್ಶಿ ರವಿ, ಒಕ್ಕಲಿಗರ ಸಂಘದ ಉಪಾಧ್ಯಕ್ಷ ಹೆಚ್.ಪಿ.ನಂಜೇ ಗೌಡ, ಖಜಾಂಚಿ ನಂದೀಶ್, ಉಪನ್ಯಾಸಕ ಅರುಣ್, ಸಮುದಾಯದ ಮುಖಂಡರಾದ ಡಾ.ಭರತ್ ಕೆಂಪಣ್ಣ, ಪದಾಧಿಕಾರಿಗಳಾದ ಕಿರಣ, ಪ್ರಸಾದ್, ಶ್ರೀನಿವಾಸ ಮೂರ್ತಿ, ಬೈರೇಗೌಡ, ಸಿದ್ದರಾಮೇಗೌಡ, ಗೋಪಿ ಶೋಭಾಗೌಡ, ವೆಂಕಟೇಶ್, ಷಡಕ್ಷರಿ, ಜಯಮ್ಮ, ಪಾರ್ವತ್ತಮ್ಮ, ವಾಸು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶ್ರೀವತ್ಸ ಮತ್ತಿತರರು ಉಪಸ್ಥಿತರಿದ್ದರು.

----ಅದ್ಧೂರಿ ಮೆರವಣಿಗೆ :ವೇದಿಕೆ ಕಾರ್ಯಕ್ರಮಕ್ಕೂ ಮುನ್ನಾ ಜಿಲ್ಲಾ ಸಂಕೀರ್ಣದ ಮುಂಭಾಗ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿ, ಸಂಸದ ಡಾ.ಸಿ.ಎನ್.ಮಂಜು ನಾಥ್, ಶಾಸಕ ಎಚ್.ಎ.ಇಕ್ಬಾಲ್ ಹುಸೇನ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಕೆ.ರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ ಮಾಲಾರ್ಪಣೆ ಮಾಡಿದರು.

27ಕೆಆರ್ ಎಂಎನ್ 1.ಜೆಪಿಜಿರಾಮನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಮುಂಭಾಗ ಆಯೋಜಿಸಿದ್ದ ಧರ್ಮ ರತ್ನಾಕರ ನಾಡಪ್ರಭು ಕೆಂಪೇಗೌಡ ಅವರ 516ನೇ ಜಯಂತಿ ಕಾರ್ಯಕ್ರಮದಲ್ಲಿ ಕೆ.ರಾಜು ಮಾತನಾಡಿದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌