ಕನ್ನಡಪ್ರಭ ವಾರ್ತೆ ಗುಬ್ಬಿ
ಪಟ್ಟಣದ ಮಡಿವಾಳರ ಬೀದಿಯಲ್ಲಿ ಪ್ರತಿಷ್ಠಾಪಿಸಿರುವ ಶ್ರೀ ಮಹೇಶ್ವರಮ್ಮ ದೇವಿಯ ನೂತನ ದೇವಾಲಯ ಲೋಕಾರ್ಪಣೆಯ ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದ ಅವರು, ನಾವು ನಂಬಿಕೆಯಿಂದ ದೇವರನ್ನು ಕಾಣಬಹುದು. ಇಂದಿಗೂ ದೇವರನ್ನು ನೋಡಿಲ್ಲ, ಕೋಟ್ಯಾಂತರ ಜನರು ದೇವರ ಮೇಲೆ ನಂಬಿಕೆ ಇಟ್ಟುಕೊಂಡು ದೇಗುಲಗಳನ್ನು ಕಟ್ಟುತ್ತಾರೆ. ನಮ್ಮ ನಡೆ, ನುಡಿ ಸರಿಯಾಗಿರಬೇಕು. ನಾವು ಮಾಡುವ ಕೆಲಸದಲ್ಲೇ ದೇವರನ್ನು ಕಾಣಬೇಕು. ಸಹಾಯ ಮಾಡಿದವರನ್ನು ದೇವರೆಂದು ಪೂಜಿಸುತ್ತಾರೆ, ಸಹಾಯ ಮಾಡುವುದರಲ್ಲೂ ಸಹ ದೇವರನ್ನು ಕಾಣಬಹುದು ಎಂದು ತಿಳಿಸಿದರು.
ಮಧುಗಿರಿ, ಪಾವಗಡ ತಾಲೂಕಿನ ಪೊಲೀಸ್ ಇಲಾಖೆಗೆ ವಸತಿಗೃಹಗಳನ್ನು ಕೊಟ್ಟಿದ್ದೇನೆ. ಗುಬ್ಬಿ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿ ಹಾಗೂ ಚೇಳೂರು ವಸತಿ ಗೃಹಗಳ ಬಗ್ಗೆ ಪ್ರಸ್ತಾವನೆ ಕೊಟ್ಟರೆ ಮಂಜೂರು ಮಾಡಿಸುತ್ತೇನೆ ಎಂದು ತಿಳಿಸಿದರು.ಕೆಎಸ್ ಆರ್ ಟಿ ಸಿ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ಮಾತನಾಡಿ, ನಾನು ರಾಜಕೀಯಕ್ಕೆ ಬರುವುದಕ್ಕಿಂತ ಮುಂಚೆ ದೇವರನ್ನು ನಂಬುತ್ತಿರಲಿಲ್ಲ, ನಾನು ರಾಜಕೀಯಕ್ಕೆ ಬಂದ ಮೇಲೆ ದೇವಾಲಯಗಳಿಗೆ ಹೆಚ್ಚು ಅನುದಾನ ನೀಡಿದ್ದೇನೆ. ಉತ್ತಮ ಮಾರ್ಗದಲ್ಲಿ ಉತ್ತಮ ಕೆಲಸ ಮಾಡಿದಾಗಲೇ ನಮಗೆ ಒಳ್ಳೆಯದಾಗುತ್ತದೆ. ರಾಜಕೀಯಕ್ಕೆ ಬಂದ ಮೇಲೆ ಬಡವರ ಪರ ಕೆಲಸ- ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದೇನೆ. ಹುಟ್ಟು- ಸಾವು ನಿಶ್ಚಿತ, ನಾವು ಇದ್ದಾಗ ಉತ್ತಮ ಕೆಲಸಗಳನ್ನು ಮಾಡಬೇಕಾಗುತ್ತದೆ. ಉತ್ತಮ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಜನ ಸೇವೆಗೆ ಉತ್ಸುಕರಾಗಿ ಕೆಲಸ ಕಾರ್ಯಗಳನ್ನು ಮಾಡಬೇಕು. ಸ್ಥಳಾವಕಾಶವಿದ್ದರೆ ಸಮುದಾಯ ಭವನದ ನಿರ್ಮಾಣಕ್ಕೆ ಸಹಾಯಧನ ಬಿಡುಗಡೆ ಮಾಡಿಸುತ್ತೇನೆ ಎಂದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, ಭಕ್ತಾದಿಗಳ ಸಹಕಾರದಿಂದ ಮಹೇಶ್ವರಮ್ಮ ದೇವಾಲಯದ ಕಳಸ ಗೋಪುರ ನಿರ್ಮಾಣ ಮಾಡಿ, ಲೋಕಾರ್ಪಣೆ ಮಾಡಿದ್ದು ಇಲ್ಲಿಗೆ ಬರುವ ಭಕ್ತಾದಿಗಳಿಗೆ ಅನುಕೂಲಕ್ಕಾಗಿ ಹಾಗೂ ದಾಸೋಹ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಸಮುದಾಯ ಭವನದ ಅವಶ್ಯಕತೆ ಇರುವುದರಿಂದ ಸಚಿವರು ಹಾಗೂ ಶಾಸಕರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.