ಕನ್ನಡಪ್ರಭ ವಾರ್ತೆ ಗುರುಮಠಕಲ್
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಪ್ರಾದೇಶಿಕ ಅರಣ್ಯ ವಿಭಾಗ ಹಾಗೂ ಪ್ರಾದೇಶಿಕ ಅರಣ್ಯ ವಲಯದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹುಟ್ಟುಹಬ್ಬ ದಿನ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಬೇಕು. ಪ್ರಧಾನಮಂತ್ರಿ ಅವರ ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಮೇಶ ಮಾತನಾಡಿ, ವನ್ಯಜೀವಿಗಳು ಹಾಗೂ ಪರಿಸರ ಸಂರಕ್ಷಿಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ. 1957ರಿಂದ ವನ್ಯಜೀವಿ ಸಪ್ತಾಹ ಆಚರಣೆ ಆರಂಭ, ಪ್ರತಿವರ್ಷ ಅ.2ರಿಂದ 8ರವರೆಗೆ ಆಚರಣೆ, ಮಹಾತ್ಮ ಗಾಂಧೀಜಿ ಅವರ ಜನ್ಮದಿನದಂದು ಅಹಿಂಸೆ ಹಾಗೂ ಜೀವ ಸಂರಕ್ಷಣೆಯ ಮಹತ್ವವನ್ನು ಸಾರುವ ಉದ್ದೇಶದಿಂದ ವನ್ಯಜೀವಿ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಹೇಳಿದರು.ಅರಣ್ಯ ಉಪ ಸಂರಕ್ಷಣಾಧಿಕಾರಿ ಚೇತನ್ ಗಸ್ತಿ, ಕಾಲೇಜಿನ ಪ್ರಾಂಶುಪಾಲ ಡಾ. ಜೆ.ವಿ. ಪುರುಷೋತ್ತಮ ಹಾಗೂ ಪರಿಸರವಾದಿ ಶೈಲೇಂದ್ರ ಕಾವಾಡಿ ಮಾತನಾಡಿದರು. ನಂತರ ವನ್ಯಜೀವಿ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಕಾಲ್ನಡಿಗೆ ಜಾಥಾಕ್ಕೆ ತಹಸೀಲ್ದಾರ್ ಚೆನ್ನಮಲ್ಲಪ್ಪ ಘಂಟಿ ಚಾಲನೆ ನೀಡಿದರು. ವಿದ್ಯಾರ್ಥಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪರಿಸರ ಸಂರಕ್ಷಣೆಯ ಘೋಷಣೆಗಳನ್ನು ಕೂಗುತ್ತಾ ಜಾಥಾ ನಡೆಸಿದರು.
ಸಾಮಾಜಿಕ ಅರಣ್ಯ ಉಪ ಸಂರಕ್ಷಣಾಧಿಕಾರಿ ಮಹ್ಮದ್ ಅಸದ್, ಆರ್‌ಎಫ್ಒಗಳಾದ ರಾಹುಲ್ ಸಾದುರೆ, ಚನ್ನಬಸಪ್ಪ ಕೆ.ಎಎಸ್ಐ ಹುಸೇನಪ್ಪ, ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಸಂಗ್ವಾರ, ಅರಣ್ಯ ಇಲಾಖೆಯ ಅಧಿಕಾರಿಗಳು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಡಾ. ಕೃಷ್ಣ ನಿರೂಪಿಸಿದರು. ಡಿಆರ್‌ಎಫ್ಒ ಭೀಮಶಂಕರ ಸ್ವಾಗತಿಸಿ ವಂದಿಸಿದರು.
9ವೈಡಿಆರ್1