ಡಿಕೆಶಿ ಸಿಎಂ ಆಗಬೇಕೆಂಬುದು ನಮ್ಮ ಆಸೆ: ಇಕ್ಬಾಲ್

KannadaprabhaNewsNetwork | Updated : Nov 03 2023, 12:31 AM IST

ಸಾರಾಂಶ

ರಾಮನಗರ: ಒಂದೂವರೆ ವರ್ಷದ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಅವರು ಮುಖ್ಯಮಂತ್ರಿ ಆಗಬೇಕು ಅನ್ನುವುದು ನಮ್ಮ ಆಸೆ ಎಂದು ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದರು.
ರಾಮನಗರ: ಒಂದೂವರೆ ವರ್ಷದ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಅವರು ಮುಖ್ಯಮಂತ್ರಿ ಆಗಬೇಕು ಅನ್ನುವುದು ನಮ್ಮ ಆಸೆ ಎಂದು ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಪಕ್ಷದ ಅಧ್ಯಕ್ಷರಾಗಿ ಸಂಘಟನೆ ಮಾಡಿದ್ದಾರೆ. ಶಕ್ತಿ ಮೀರಿ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಹಾಗಾಗಿ ಡಿ.ಕೆ.ಶಿವಕುಮಾರ್ ಗೆ ಅವಕಾಶ ಸಿಗಲೇಬೇಕು. ರಾಜ್ಯದ ಜನತೆ ಕೂಡಾ ಅದನ್ನೇ ಬಯಸಿದ್ದಾರೆ ಎಂದರು. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುವವರು ಕೆಲಸಕ್ಕೆ ಬಾರದವರು ಎಂಬ ಸಿದ್ದರಾಮಯ್ಯರವರ ಮಾತಿಗೆ ಪ್ರತಿಕ್ರಿಯಿಸಿದ ಅವರು, ಇಲ್ಲಿ ಕೆಲಸಕ್ಕೆ ಬಾರದವರು ಯಾರೂ ಇಲ್ಲ. ಎಲ್ಲರೂ ಕೆಲಸಕ್ಕೆ ಬರುವವರೆ. ಅವರನ್ನು ಶಾಸಕ ಅಂತ ಕರೆಯುತ್ತಾರೆ. ಅವರ ಬಗ್ಗೆ ಕೀಳಾಗಿ ಮಾತನಾಡಬಾರದು ಎಂದು ಹೇಳಿದರು.

Share this article