ಶಿಗ್ಗಾಂವಿ:ಇಡೀ ಭಾರತವನ್ನು ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡಿಯೇ ಮಾಡುತ್ತೇವೆ. ನಮಗೆ ಇರುವುದು ಇದೊಂದೆ ದೇಶ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರವಾಗಿ ಕುನ್ನೂರಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು. ಶಿಗ್ಗಾಂವಿ-ಸವಣೂರು ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಅವರು ಮಾಡಿರುವ ಅಭಿವೃದ್ಧಿ ಕೆಲಸ ನೋಡಿದರೆ ಯಾರೂ ತಕರಾರು ಮಾಡದೆ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರಿಗೆ ಮತ ಹಾಕಬೇಕು ಎಂದರು.ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಹೊಸದೇನಾದರೂ ಹೇಳಿದ್ದಾರಾ? ದುಂಡಸಿಯಲ್ಲಿ ೧೯ ಎಕರೆ ಜಮೀನು ವಕ್ಫ್ ಆಸ್ತಿ ಮಾಡಿದ್ದಾರೆ. ನಾನು ವಕ್ಫ್ ಬಗ್ಗೆ ಆಗ ಮಾತನಾಡಲು ವಿಶ್ವೇಶ್ವರ್ ಹೆಗಡೆ, ಬೊಮ್ನಾಯಿ ಕಾರಣ ಎಂದರು.ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ವರ್ಷದಲ್ಲಿ ಎಷ್ಟು ಸುಧಾರಣೆ ಮಾಡಿದ್ದಾರೆ. ಈಗ ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ. ಕಾಂಗ್ರೆಸ್‌ನವರು ಸೈನ್ಯಕ್ಕೆ ಎಕೆ ೪೭ ಬಳಕೆ ಮಾಡಲು ಅವಕಾಶ ಕೊಡುತ್ತಿರಲಿಲ್ಲ. ಈಗ ಮೋದಿ ಅವರು ನಮ್ಮ ಸೈನಿಕರಿಗೆ ಎಲ್ಲ ಅವಕಾಶ ಕೊಟ್ಟಿದ್ದಾರೆ. ನೆಹರು ಅವರು ಚೀನಾ ಯುದ್ಧದ ಸಂದರ್ಭದಲ್ಲಿ ನಮ್ಮ ಸೈನಿಕರಿಗೆ ಒಂದು ಚಸ್ಮಾ ಕೊಟ್ಟಿರಲಿಲ್ಲ. ಅವರಿಂದ ನಮ್ಮ ಸೈನಿಕರಿಗೆ ಸಾಕಷ್ಟು ಅನ್ಯಾಯವಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸೋನಿಯಾ ಗಾಂಧಿಗೆ ನಮಸ್ಕಾರ ಮಾಡಿಕೊಂಡು ತಿರುಗಾಡಿದರು. ನಮ್ಮ ಪ್ರಧಾನಿ ನಾನು ಪ್ರಧಾನ ಸೇವಕ ಯಾರೂ ಕಾಲಿಗೆ ಬೀಳಬೇಕಿಲ್ಲ ಎಂದರು. ಬಸವರಾಜ ಬೊಮ್ಮಾಯಿ ಅವರು ಸಿಎಂ ಆದ ಕೂಡಲೇ ನಾನು ಚೀಫ್ ಮಿನಿಸ್ಟರ್ ಅಲ್ಲ, ಕಾಮನ್ ಮ್ಯಾನ್ ಅಂತ ಹೇಳಿದರು ಎಂದರು.ವಕ್ಫ್ ಕಾಯಿದೆ ಎಷ್ಟು ಅಪಾಯಕಾರಿ ಇದೆ ನೋಡಿ, ಅವರು ಮೂವತ್ತು ಪರ್ಸಂಟ್ ಜನಸಂಖ್ಯೆ ಆದರೆ, ನಮ್ಮವರು ಯಾರೂ ಶಾಸಕರಾಗಲು ಸಾಧ್ಯವಿಲ್ಲ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಅವರಿಗೆ ಹೋಲಿಕೆ ಮಾಡಿ ನೋಡಿ, ಅವರ ಅಭ್ಯರ್ಥಿ ಬಗ್ಗೆ ಅಜ್ಜಂಪೀರ್ ಖಾದ್ರಿ ಅವರೇ ಅವನ ಬಣ್ಣ ಬಿಚ್ಚಿದ್ದಾನೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಡಿಕೆಶಿ ನಮ್ಮ ಮುಖಾ ನೋಡಿ ಮತ ಹಾಕಿ ಎನ್ನುತ್ತಾರೆ. ನಾವು ಯಾರ ಮುಖ ನೋಡಿ ಹಾಕಬೇಕು. ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಪಿಎ ಮೂಲಕ ಸರ್ಕಾರಿ ಅಧಿಕಾರಿನ ಕೊಂದಿದ್ದೀರಿ, ತಿಮ್ಮಾಪುರ ₹೯೦೦ ಕೋಟಿ ಲೂಟಿ ಮಾಡಿದ್ದಾರೆ. ನೀವು ಹಿಂಗೆ ಇದ್ದರೆ ಎಲ್ಲ ಆಸ್ತಿ ಹೋಗುತ್ತದೆ. ಎರಡು ಸಾವಿರ ರುಪಾಯಿ ಮಾತ್ರ ಉಳಿಯುತ್ತದೆ ಎಂದರು.ನಾವು ಬಿಜೆಪಿ ಅವಧಿಯಲ್ಲಿ ನನಗೆ ಮಂತ್ರಿ ಸ್ಥಾನ ಬೇಡ ನಮ್ಮ ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿಗಾಗಿ ನಮ್ಮ ಸರ್ಕಾರದ ವಿರುದ್ಧವೇ ಹೋರಾಟ ಮಾಡಿದ್ದೇವು, ಆಗ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಅವರು, ನಮಗೆ ಪ್ರವರ್ಗ ೨ಡಿ ಅಡಿಯಲ್ಲಿ ಮೀಸಲಾತಿ ಅವಕಾಶ ಕಲ್ಪಿಸಿದ್ದರು. ಈ ಸರ್ಕಾರ ಅದನ್ನು ಪಾಲಿಸಲಿಲ್ಲ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜೋರಾಗಿ ಮಾತನಾಡುತ್ತಿದ್ದರು. ಈಗ ಮೀಸಲಾತಿ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ಹೇಳಿದರು. ನಮ್ಮ ಧರ್ಮ, ದೇಶ ಉಳಿಯಬೇಕೆಂದರೆ ಹಿಂದೂಗಳು ಎಲ್ಲರೂ ಒಟ್ಟಾಗಬೇಕು. ಭರತ್ ಬೊಮ್ಮಾಯಿ ಅವರನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್‌ಗೆ ಪಾಠ ಕಲಿಸಬೇಕು ಎಂದು ಹೇಳಿದರು.ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರಗ ಜ್ಞಾನೇಂದ್ರ ಶಿವಾನಂದ ಮ್ಯಾಗೇರಿ, ಗ್ರಾಮದ ಎಲ್.ಆರ್. ಪಾಟೀಲ, ಗಂಗಪ್ಪ ಹುಲ್ಲೂರ ಬಸನಗೌಡ ಬ್ಯಾಹಟ್ಟಿ ಇದ್ದರು.