ಕ್ಷೇತ್ರದ ಅಭಿವೃದ್ಧಿಗೆ ತೊಡಕುಂಟು ಮಾಡುವುದನ್ನು ಸಹಿಸಲ್ಲ : ನಯನಾ ಮೋಟಮ್ಮ

KannadaprabhaNewsNetwork |  
Published : Jan 27, 2025, 12:48 AM IST
ಮುಡಿಗೆರೆ ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕಿ ನಯನಾ ಮೋಟಮ್ಮ ಮಾತನಾಡಿದರು.  | Kannada Prabha

ಸಾರಾಂಶ

ಮೂಡಿಗೆರೆ, ಕೆಲವರು ಆರ್‌ಟಿಐ ಮೂಲಕ ಅರ್ಜಿ ಸಲ್ಲಿಸಿ ಅಧಿಕಾರಿಗಳಿಗೆ ಕೆಲಸ ಮಾಡಲು ಬಿಡದೇ ಕ್ಷೇತ್ರದ ಅಭಿವೃದ್ಧಿಗೆ ತೊಡಕುಂಟು ಮಾಡುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಅಡಚಣೆ ಮಾಡುವ ಯಾವುದೇ ಶಕ್ತಿಗೆ ನಾನು ಬಗ್ಗುವುದಿಲ್ಲ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ ಗಣರಾಜ್ಯೋತ್ಸವ

ಕನ್ನಡಪ್ರಭ ವಾರ್ತೆ, ಮೂಡಿಗೆರೆ

ಕೆಲವರು ಆರ್‌ಟಿಐ ಮೂಲಕ ಅರ್ಜಿ ಸಲ್ಲಿಸಿ ಅಧಿಕಾರಿಗಳಿಗೆ ಕೆಲಸ ಮಾಡಲು ಬಿಡದೇ ಕ್ಷೇತ್ರದ ಅಭಿವೃದ್ಧಿಗೆ ತೊಡಕುಂಟು ಮಾಡುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಅಡಚಣೆ ಮಾಡುವ ಯಾವುದೇ ಶಕ್ತಿಗೆ ನಾನು ಬಗ್ಗುವುದಿಲ್ಲ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು. ಭಾನುವಾರ ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ ಗಣರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕಿನಲ್ಲಿ ಒತ್ತುವರಿ ಸೇರಿದಂತೆ ನಾನಾ ಸಮಸ್ಯೆಗಳಿವೆ. ಈ ಬಗ್ಗೆ ತಲೆ ಕೆಡಿಸಿಕೊಳ್ಳದ ವ್ಯಕ್ತಿಗಳು ಕ್ಷೇತ್ರದ ಅಭಿವೃದ್ಧಿ ಕೆಲಸಕ್ಕೆ ತೊಂದರೆ ಮಾಡುತ್ತಿದ್ದಾರೆ. ಮುಂದಿನ ಅವಧಿಯಲ್ಲಿ ತಾನು ಶಾಸಕರಾಗದಿದ್ದರೂ ಸರಿ. ಸರಕಾರಿ ಆಸ್ತಿಯನ್ನು ಯಾರೂ ಒತ್ತುವರಿ ಮಾಡಲು ಬಿಡುವುದಿಲ್ಲ. ಸರಕಾರಿ ಆಸ್ತಿ ಕಾಪಾಡುವುದು ನನ್ನ ಹಾಗೂ ಅಧಿಕಾರಿಗಳ ಕರ್ತವ್ಯ ಎಂದು ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ಕೇವಲ ದಲಿತ ಸಮುದಾಯಕ್ಕೆ ಸೀಮಿತರಾದವರಲ್ಲ. ಅವರು ಎಲ್ಲಾ ಸಮುದಾಯ ಹಾಗೂ ಈ ದೇಶದ ದೊಡ್ಡ ಆಸ್ತಿ. ಅಂತಹ ಮಹಾನ್ ವ್ಯಕ್ತಿ ಪುತ್ತಳಿಯನ್ನು ಪಟ್ಟಣದಲ್ಲಿ ತನಗರಿವಿಲ್ಲದೇ ಕಾನೂನು ವಿರುದ್ಧ ಕದ್ದು ಮುಚ್ಚಿ ಪ್ರತಿಷ್ಠಾಪಿಸಲು ಹೊರಟಿದ್ದನ್ನು ತಾನು ಸಹಿಸುವುದಿಲ್ಲ. ಅಂತಹ ಮಹಾನ್ ವ್ಯಕ್ತಿ ಪುತ್ತಳಿಯನ್ನು ಮುಂದಿನ ದಿನದಲ್ಲಿ ಗೌರವ ಪೂರ್ವಕವಾಗಿ ಹಾಗೂ ಕಾನೂನು ಬದ್ಧವಾಗಿ ಪ್ರತಿಷ್ಠಾಪಿಸಲು ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು. 2019 ರಲ್ಲಿ ಪ್ರವಾಹದಲ್ಲಿ ಚನ್ನಡ್ಲು ಗ್ರಾಮದ ನಿರಾಶ್ರಿತರಿಗೆ ಹಾಗೂ ಕಳೆದ 25 ವರ್ಷದಿಂದ ಕುಂದೂರು, ಸಾರಗೂಡು, ಬೈರ ಗದ್ದೆ ನಿರಾಶ್ರಿತರಿಗೆ ಹಕ್ಕು ಪತ್ರ ನೀಡಿದ್ದು ತನಗೆ ಅತ್ಯಂತ ಸಂತಸ ತಂದಿದೆ. ಆದರೆ ಮದುಗುಂಡಿ ಮತ್ತು ಮಲೆಮನೆ ನಿರಾಶ್ರಿತರಿಗೆ ನ್ಯಾಯ ಕೊಡಿಸಲು ಸಾಧ್ಯವಾಗದೆ ಇರುವುದು ಬೇಸರವಿದೆ. ಈ ಸಮಸ್ಯೆ ಬಗೆಹರಿಸಲು ಶಕ್ತಿ ಮೀರಿ ಪ್ರಯತ್ನಿ ಸುತ್ತೇನೆಂದ ಅವರು, ಕ್ಷೇತ್ರದಲ್ಲಿ ಹತ್ತಾರು ಅದ್ಭುತ ಪ್ರವಾಸಿ ತಾಣವಿದೆ. ಅವುಗಳ ಉಪಯೋಗಕ್ಕೆ ಅಗತ್ಯ ಕ್ರಮ ಕೈಗೊಳ್ಳ ಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ತಹಸೀಲ್ದಾರ್ ರಾಜಶೇಖರ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಪ.ಪಂ. ಅಧ್ಯಕ್ಷೆ ಗೀತಾ ರಂಜನ್ ಅಜಿತ್ ಕುಮಾರ್, ಉಪಾಧ್ಯಕ್ಷ ರಮೇಶ್, ಸದಸ್ಯರಾದ ಕೆ.ವೆಂಕಟೇಶ್, ಹಂಝಾ, ಕಸಾಪ ಅಧ್ಯಕ್ಷ ಲಕ್ಷ್ಮಣ್‌ಗೌಡ, ಕೆಂಪೇಗೌಡ ಒಕ್ಕಲಿಗರ ವೇದಿಕೆ ಅಧ್ಯಕ್ಷ ಬ್ರಿಜೇಶ್‌ಗೌಡ, ತಾ.ಪಂ. ಇಒ ದಯಾ ವತಿ, ಬಿಇಒ ಮೀನಾಕ್ಷಿ, ಪಿಎಸ್‌ಐ ಶ್ರೀನಾಥ್‌ರೆಡ್ಡಿ ಉಪಸ್ಥಿತರಿದ್ದರು.

26 ಕೆಸಿಕೆಎಂ 4

ಮುಡಿಗೆರೆ ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕಿ ನಯನಾ ಮೋಟಮ್ಮ ಮಾತನಾಡಿದರು. -----------------------

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ