ವಸತಿ ನಿಲಯ ಸ್ವಚ್ಛಗೊಳಿಸಿ ದಾಖಲಾತಿ ಪ್ರಾರಂಭಿಸುತ್ತೇವೆ: ಜಿ. ಯಮುನಾ

KannadaprabhaNewsNetwork |  
Published : Jan 01, 2024, 01:15 AM IST
ಕನ್ನಡಪ್ರಭ ಪತ್ರಿಕೆಯ ವರದಿಯಿಂದ ಎಚ್ಚೆತ್ತ ಸಮಾಜ ಕಲ್ಯಾಣ ಅಧಿಕಾರಿಗಳು. | Kannada Prabha

ಸಾರಾಂಶ

ಕೊರಟಗೆರೆ ತಾಲೂಕಿನ ಹೊಳವನಹಳ್ಳಿಯಲ್ಲಿನ ಮೆಟ್ರಿಕ್‌ ನಂತರ ಬಾಲಕರ ವಿದ್ಯಾರ್ಥಿ ನಿಲಯವನ್ನು ಸ್ವಚ್ಛಗೊಳಿಸಿ ದಾಕಲಾತಿ ಪ್ರಾರಂಭಿಸಲಾಗುವುದು ಎಂದು ಸಮಾಜ ಕಲ್ಯಾಣಾಧಿಕಾರಿ ಜಿ. ಯಮುನಾ ತಿಳಿಸಿದ್ದಾರೆ.

ಎಚ್.ಎನ್. ನಾಗರಾಜು ಹೊಳವನಹಳ್ಳಿ

ಕನ್ನಡಪ್ರಭ ವಾರ್ತೆ ಹೊಳವನಹಳ್ಳಿ

ಜನತಾ ಕಾಲೋನಿಯಲ್ಲಿರುವ ಸರ್ಕಾರಿ ಪೂರ್ವ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯವನ್ನ ಬಳಕೆ ಮಾಡದೆ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟಿತ್ತು. ಕನ್ನಡ ಪ್ರಭ ದಿನ ಪತ್ರಿಕೆಯಲ್ಲಿ ಡಿ.೨೯ ರಂದು ವಿದ್ಯಾರ್ಥಿನಿಲಯ ಅನೈತಿಕ ಚಟುವಟಿಕೆಗಳ ತಾಣ”. ಎಂಬ ಶಿರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿತ್ತು. ಸುದ್ದಿ ಇಂದ ಎಚ್ಚೆತ್ತಕೊಂಡ ಸಮಾಜ ಕಲ್ಯಾಣ ಅಧಿಕಾರಿ ಜಿ. ಯಮುನಾ ಅವರು ಸ್ಥಳಕ್ಕೆ ಭೇಟಿ ನೀಡಿದರು.

ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಪಂಯ ಜನತಾ ಕಾಲೋನಿಯಲ್ಲಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯವನ್ನ ೧೯೯೭ರಲ್ಲಿ ದಿವಂಗತ ಮಾಜಿ ಸಚಿವ ಸಿ. ಚೆನ್ನಿಗಪ್ಪ ಅವರು ಶಾಸಕರಾಗಿದ್ದ ಸಂದರ್ಭದಲ್ಲಿ ಸುಮಾರು ೨ ಕೋಟಿ ವೆಚ್ಚದಲ್ಲಿ ಗ್ರಾಮೀಣ ಬಾಗದ ಎಸ್ಸಿ, ಎಸ್ಟಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಉತ್ತಮವಾದ ಕಟ್ಟಡವನ್ನ ನಿರ್ಮಾಣ ಮಾಡಲಾಗಿತ್ತು.

ಆಗಿನ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ೨೦೧೦ರಿಂದ ಶಾಲಾ ದಾಖಲಾತಿ ಇಲ್ಲ ಎನ್ನವ ಕುಂಟು ನೆಪವೊಡ್ಡಿ ಉತ್ತಮ ಕಟ್ಟಡ ಇರುವ ವಸತಿ ಶಾಲೆಯನ್ನ ಮುಚ್ಚುವಂತೆ ಮಾಡಿದ್ದಾರೆ. ಇತ್ತಿಚೀನ ದಿನಗಳಲ್ಲಿ ಖಾಸಗಿ ಶಾಲೆಗಳ ಹಾವಳಿಯಿಂದಾಗಿ ಸರ್ಕಾರಿ ಶಾಲೆಗಳ ಮುಚ್ಚುವಂತ ಪರಿಸ್ಥಿತಿಗೆ ತಂದಿದ್ದಾರೆ. ಸರ್ಕಾರಿ ಶಾಲೆಗೆ ಯಾವಾಗ ದಾಖಲಾತಿ ಕಡಿಮೆ ಆಗುತ್ತವೋ ಹಾಗ ಇಂತಹ ವಸತಿ ಶಾಲೆಗಳು ಮುಚ್ಚುವಂತ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಉತ್ತಮ ಕಟ್ಟಡದಲ್ಲಿ ಧೂಮಪಾನ, ಮದ್ಯಪಾನ ಸೇರಿದಂತೆ ಅನೈತಿಕ ಚಟುವಟಿಕೆಗಳನ್ನ ನಡೆಯುತ್ತಿದ್ದವು. ಪುಂಡ ಪೋಕರಿಗಳು ಕಿಟಕಿ, ಬಾಗಿಲು ಹಾಗೂ ಮದ್ಯದ ಬಾಟಲುಗಳನ್ನ ಕಿಡಿಗೇಡಿಗಳು ಹೊಡೆದು ಹಾಕಿದ್ದಾರೆ. ನಿರ್ವಹಣೆ ಮಾಡಬೇಕಿದ್ದ ಇಲಾಖೆ ಅಧಿಕಾರಿಗಳು ಮೌನವಹಿಸಿದ್ದರು. ನೂತನವಾಗಿ ಬಂದಿರುವ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಜಿ. ಯಮುನಾ ಬಂದು ಕೆಲವೇ ದಿನಗಳಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ