ಬಿಡಿಸಿಸಿ ಗೆಲ್ಲುತ್ತೇವೆ, ಅಧಿಕಾರದ ಚುಕ್ಕಾಣಿ ಹಿಡಿತೇವೆ

KannadaprabhaNewsNetwork |  
Published : Oct 10, 2025, 01:02 AM IST
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು | Kannada Prabha

ಸಾರಾಂಶ

ನಾವು 13 ಸ್ಥಾನಗಳಿಗೆ ಸ್ಪರ್ಧಿಸಲಿದ್ದೇವೆ. ಆದರೆ, ಅವಿರೋಧ ಆಯ್ಕೆ ನಡೆಯುತ್ತದೆಯೋ? ಇಲ್ಲವೋ ಎಂಬುದು ಅ.11 ರ ಮಧ್ಯಾಹ್ನ 3 ಗಂಟೆವರೆಗೆ ಗೊತ್ತಾಗಲಿದೆ. ನಮ್ಮ 13 ಜನ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಇದೆ. ಗೆಲ್ಲಬೇಕೆಂದೇ ನಾವು ಚುನಾವಣೆಗೆ ಸ್ಪರ್ಧಿಸುತ್ತಿದ್ದೇವೆ. ಗೆಲ್ಲುತ್ತೇವೆ ಎಂಬ ವಿಶ್ವಾಸ ನಮಗಿದೆ. ಬ್ಯಾಂಕಿನ ಆಡಳಿತ ಚುಕ್ಕಾಣಿ ಹಿಡಿಯುವ ಮೂಲಕ ಉತ್ತಮ ಆಡಳಿತ ನಡೆಸುತ್ತೇವೆ ಎಂದು ಅರಬಾವಿ ಶಾಸಕ, ಬೆಮೂಲ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ನಾವು 13 ಸ್ಥಾನಗಳಿಗೆ ಸ್ಪರ್ಧಿಸಲಿದ್ದೇವೆ. ಆದರೆ, ಅವಿರೋಧ ಆಯ್ಕೆ ನಡೆಯುತ್ತದೆಯೋ? ಇಲ್ಲವೋ ಎಂಬುದು ಅ.11 ರ ಮಧ್ಯಾಹ್ನ 3 ಗಂಟೆವರೆಗೆ ಗೊತ್ತಾಗಲಿದೆ. ನಮ್ಮ 13 ಜನ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಇದೆ. ಗೆಲ್ಲಬೇಕೆಂದೇ ನಾವು ಚುನಾವಣೆಗೆ ಸ್ಪರ್ಧಿಸುತ್ತಿದ್ದೇವೆ. ಗೆಲ್ಲುತ್ತೇವೆ ಎಂಬ ವಿಶ್ವಾಸ ನಮಗಿದೆ. ಬ್ಯಾಂಕಿನ ಆಡಳಿತ ಚುಕ್ಕಾಣಿ ಹಿಡಿಯುವ ಮೂಲಕ ಉತ್ತಮ ಆಡಳಿತ ನಡೆಸುತ್ತೇವೆ ಎಂದು ಅರಬಾವಿ ಶಾಸಕ, ಬೆಮೂಲ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೆನಲ್‌ದಿಂದ 16 ಸ್ಥಾನಗಳ ಪೈಕಿ 13 ಸ್ಥಾನಗಳಿಗೆ ಸ್ಪರ್ಧೆ ಮಾಡಲಾಗುವುದು. ಈಗಾಗಲೇ 7 ಜನ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಅ.11 ರಂದು 6 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ನಮ್ಮ ಪೆನಲ್‌ದಿಂದ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಗೆಲ್ಲಬೇಕೆಂದೇ ನಾವು ಸ್ಪರ್ಧೆ ಮಾಡುತ್ತಿದ್ದೇವೆ ಎಂದರು.ಈಗ ನಿಪ್ಪಾಣಿಯಿಂದ ಅಣ್ಣಾಸಾಹೇಬ ಜೊಲ್ಲೆ, ರಾಯಬಾಗದಿಂದ ಅಪ್ಪಾಸಾಹೇಬ ಕುಲಗೋಡು, ಯರಗಟ್ಟಿಯಿಂದ ಶಾಸಕ ವಿಶ್ವಾಸ ವೈದ್ಯ, ಸವದತ್ತಿಯಿಂದ ವಿರುಪಾಕ್ಷ ಮಾಮನಿ, ಬೈಲಹೊಂಗಲದಿಂದ ಮಹಾಂತೇಶ ದೊಡ್ಡಗೌಡ್ರ, ಖಾನಾಪುರದಿಂದ ಅರವಿಂದ ಪಾಟೀಲ ಹಾಗೂ ಕಿತ್ತೂರಿನಿಂದ ವಿಕ್ರಮ ಇನಾಮದಾರ ನಾಮಪತ್ರ ಸಲ್ಲಿಸಿದ್ದಾರೆ. ಇನ್ನೂ 7 ಜನ ಅಭ್ಯರ್ಥಿಗಳು ಅ.11 ರಂದೇ ನಾಮಪತ್ರ ಸಲ್ಲಿಸಲಿದ್ದಾರೆ. ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ಎಲ್ಲರೊಂದಿಗೆ ಮಾತುಕತೆ ನಡೆಸಿ, ಗೋಕಾಕ, ಮೂಡಲಗಿ, ಬೆಳಗಾವಿ, ರಾಮದುರ್ಗ, ಹುಕ್ಕೇರಿ ಹಾಗೂ ಇತರೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದರು.ಜಾರಕಿಹೊಳಿ ಕುಟುಂಬದಿಂದ ಯಾರಾದರೂ ಸ್ಪರ್ಧೆ ಮಾಡುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಬೆಂಗಳೂರಿಗೆ ತೆರಳಿದ್ದಾರೆ. ಅವರು ಬಂದ ಬಳಿಕ ಅವರೊಂದಿಗೆ ಮಾತುಕತೆ ನಡೆಸಿ, ಬಳಿಕ ತೀರ್ಮಾನ ಮಾಡಲಾಗುವುದು. ಹುಕ್ಕೇರಿಯಿಂದ ಸ್ಪರ್ಧೆಗೆ ರಾಜೇಂದ್ರ ಪಾಟೀಲ ಅವರನ್ನು ನಮ್ಮ ಅಭ್ಯರ್ಥಿಯೆಂದು ಘೋಷಿಸಲಾಗಿದೆ. ನಾವು ಅವಿರೋಧ ಆಯ್ಕೆಗೆ ಪ್ರಯತ್ನಿಸುತ್ತಿದ್ದೇವೆ ನಿಜ. ಚುನಾವಣೆಗೂ ಕೂಡ ನಾವು ಸಿದ್ಧ ಇದ್ದೇವೆ. ಕೆಲವು ಕಡೆ ಜಿದ್ದಾಜಿದ್ದಿ ಆಗಬಹುದು. ಕೆಲವೆಡೆ ನಾಮ ಕೇ ವಾಸ್ತೆ ಚುನಾವಣೆ ನಡೆಯಬಹುದು. 20 ವರ್ಷ ಗಟ್ಟಲೇ ಒಂದೊಂದು ತಾಲೂಕಿಗೆ ಚುನಾವಣೆಗೆ ಆಗಿಲ್ಲ. ಚುನಾವಣೆ ನಡೆಯಬೇಕೆಂದು ನಮ್ಮ ಆಶಯವಾಗಿದೆ ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೀಸರ್ ಸೋರಿಕೆ: ತಾಯಿ-ಮಗು ದುರ್ಮರಣ
ದೇವತೆಗಳ ಆರಾಧನೆ ಮೊಕ್ಷಸಾಧನೆ ಮೆಟ್ಟಿಲಿದ್ದಂತೆ: ಶಿರೂರು ಶ್ರೀಗಳು