ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಭಾರತೀಯ ವೈದ್ಯಕೀಯ ಸಂಘ ಒಂದು ದಿನ ರಾಷ್ಟ್ರವ್ಯಾಪಿ ವೈದ್ಯಕೀಯ ಸೇವೆಗಳನ್ನು ಬಂದ್ ಮಾಡಿ ಪ್ರತಿಭಟಿಸುವ ಘೋಷಣೆ ಮಾಡಿದ್ದ ಹಿನ್ನೆಲೆ ವೈದ್ಯಕೀಯ ವ್ಯವಸ್ಥೆ ಅಸ್ತವ್ಯಸ್ತವಾಗುವುದಾಗಿ ತಿಳಿಸಲಾಗಿತ್ತು. ಆದರೆ, ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಇದ್ದ ವೈದ್ಯರು ತಮ್ಮ ಕೈಗೆ ಕಪ್ಪು ಪಟ್ಟಿ ಧರಿಸಿ, ಅಗತ್ಯ ಸೇವೆ ನೀಡಿದರು. ಇದರೊಂದಿಗೆ ಖಾಸಗಿ ವೈದ್ಯಕೀಯ ಸೇವೆಯೂ ಎಂದಿನಂತೆ ನಡೆಯಿತು.
ಸರ್ಕಾರಿ ಆಸ್ಪತ್ರೆಯ ಸ್ತ್ರೀ ರೋಗ ತಜ್ಞರಾದ ಶಿವಪ್ರಸಾದ್ ಮಾತನಾಡಿ, ರೋಗಿಗಳಿಗೆ ತುರ್ತು ಚಿಕಿತ್ಸೆ ಆದೇಶ ನೀಡಲಾಗಿತ್ತು. ಆದರೆ, ಇಲ್ಲಿ ಬಂದ ರೋಗಿಗಳನ್ನು ಹಿಂದಕ್ಕೆ ಕಳುಹಿಸಲು ಸಾಧ್ಯವಾಗದಿದ್ದರಿಂದ, ಎಲ್ಲರಿಗೂ ಚಿಕಿತ್ಸೆ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ತಿಳಿಸಿದರು.