ವಾರಾಂತ್ಯ: ಗಿರಿ ಪ್ರದೇಶಕ್ಕೆ ಹರಿದು ಬಂದ ಸಾವಿರಾರು ಪ್ರವಾಸಿಗರು

KannadaprabhaNewsNetwork | Published : Jul 14, 2024 1:34 AM

ಸಾರಾಂಶ

ಚಿಕ್ಕಮಗಳೂರು, ವಾರಾಂತ್ಯ ದಲ್ಲಿ ಮುಳ್ಳಯ್ಯನಗಿರಿ ಮತ್ತು ದತ್ತಪೀಠಕ್ಕೆ ಆಗಮಿಸಿದ ಪ್ರವಾಸಿಗರಿಗೆ ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಅವರು ವಾಹನ ತಪಾಸಣೆಯ ಮೂಲಕ ಪ್ರವಾಸಿಗರಿಗೆ ಶಾಕ್ ನೀಡಿದ್ದಾರೆ.

ಟ್ರಾಫಿಕ್ ಜಾಮ್, ವಾಹನ‌ ಕ್ಲಿಯರ್ ಮಾಡಲು ರೋಡಿಗೆ ಇಳಿದ ಎಸ್ಪಿಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುವಾರಾಂತ್ಯ ದಲ್ಲಿ ಮುಳ್ಳಯ್ಯನಗಿರಿ ಮತ್ತು ದತ್ತಪೀಠಕ್ಕೆ ಆಗಮಿಸಿದ ಪ್ರವಾಸಿಗರಿಗೆ ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಅವರು ವಾಹನ ತಪಾಸಣೆಯ ಮೂಲಕ ಪ್ರವಾಸಿಗರಿಗೆ ಶಾಕ್ ನೀಡಿದ್ದಾರೆ.ರಾಜ್ಯದ ನೆಚ್ಚಿನ ಪ್ರವಾಸಿಕೇಂದ್ರದಲ್ಲಿ ಮುಳ್ಳಯ್ಯನಗಿರಿ ಪರ್ವತ ಶ್ರೇಣಿ ಒಂದಾಗಿದ್ದು ವಾರಾಂತ್ಯದಲ್ಲಿ ಸಾವಿರಾರು ಪ್ರವಾಸಿ ಗರು ಇಲ್ಲಿಗೆ ಲಗ್ಗೆ ಇಡುತ್ತಿದ್ದಾರೆ. ಆಗಮಿಸುವ ಪ್ರವಾಸಿಗರು ಪ್ಲಾಸ್ಟಿಕ್ ಬಾಟಲಿ ಸೇರಿದಂತೆ ಅನುಪಯುಕ್ತ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡುವುದರಿಂದ ಪ್ರವಾಸಿ ಕೇಂದ್ರ ಕಸದ ಕೊಂಪೆಯಾಗುತ್ತಿದೆ. ಗಿರಿ ಪ್ರದೇಶದಲ್ಲಿ ಪ್ಲಾಸ್ಟಿಕ್ ಸೇರಿದಂತೆ ಇತರೆ ಅನುಪಯುಕ್ತ ವಸ್ತುಗಳ ಬಳಕೆ ಈಗಾಗಲೇ ನಿಷೇಧಿಸಲಾಗಿದೆ.ಈ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ತಪಾಸಣೆಗೆ ಮುಂದಾಗಿದ್ದು, ನೀರು, ಮದ್ಯದ ಬಾಟಲಿ, ಸಿಗರೇಟ್ ಸೇರಿದಂತೆ ಇತರೆ ವಸ್ತುಗಳನ್ನು ಕೈಮರದಲ್ಲಿನ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿ ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ.ಪ್ರವಾಸಿ ಕೇಂದ್ರಗಳಲ್ಲಿ ಪ್ರವಾಸಿಗರ ಹುಚ್ಚಾಟ, ತರಲೆ, ಕೀಟಲೆ ಹೆಚ್ಚಾದ ಹಿನ್ನಲೆಯಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದು ಈಗಾಗಲೇ ಅನೇಕರ ಮೇಲೆ ಕೇಸ್ ಕೂಡ ದಾಖಲಿಸಲಾಗಿದೆ.ಶನಿವಾರ ಗಿರಿ ಪ್ರದೇಶಕ್ಕೆ ತೆರಳು ಸಾವಿರಾರು ಸಂಖ್ಯೆ ಪ್ರವಾಸಿಗರು‌ ಆಗಮಿಸಿದ್ದು, ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ವಾಹನ ತಪಾಸಣೆಗೆ ಇಳಿದರು.ಮುಳ್ಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ದರ್ಗಾ, ಮಾಣಿಕ್ಯಧಾರ ಹೋಗುವ ಮಾರ್ಗದ ಕೈಮರ ಚಕ್ ಪೋಸ್ಟ್ ನಲ್ಲಿ ಪ್ರವಾಸಿಗರ ವಾಹನಗಳಲ್ಲಿದ್ದ ಸಾವಿರಾರು ರು.ಮೌಲ್ಯದ ಮದ್ಯ ಸೀಜ್ ಮಾಡಿ ಪ್ರಕರಣ ದಾಖಲಿಸುವ ಮೂಲಕ ಪ್ರವಾಸಿಗರ ಬೆವರು ಇಳಿಸುವ ಕೆಲಸ ಮಾಡಿದ್ದಾರೆ. ಒಟ್ಟಾರೆ ಜಿಟಿ ಜಿಟಿ ಮಳೆಯಲ್ಲಿ ನೆನೆದು ಸುಂದರ ಪ್ರವಾಸಿ ತಾಣಗಳಲ್ಲಿ ಕುಳಿತು ಹಾಟ್ ಹಾಟ್ ಆಗಿ ಡ್ರಿಂಕ್ ಮಾಡೋಣ ಅಂತ ಬಂದ ಪ್ರವಾಸಿಗರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಕ್ ನೀಡಿದ್ದಾರೆ.ವಾಹನ ತಪಾಸಣೆ ವೇಳೆಯಲ್ಲಿ ಅಬಕಾರಿ ಇಲಾಖೆ ಇನ್ಸ್ ಸ್ಪೆಕ್ಟರ್ ಮದ್ಯ ವಾಹನದಲ್ಲಿ ತೆಗೆದುಕೊಂಡು ಹೋಗುವ ವೇಳೆಯಲ್ಲಿ ಎಸ್.ಪಿ. ಅವರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ, ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಶನಿವಾರ ಒಂದೇ ದಿನ ಗಿರಿ ಪ್ರದೇಶದಲ್ಲಿ ಸುಮಾರು 2 ಸಾವಿರ ವಾಹನಗಳು ಬಂದು ಹೋಗಿವೆ.ಪೋಟೋ:ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್ ಬಳಿ ಪ್ರವಾಸಿಗರ ವಾಹನಗಳಿಂದ ಟ್ರಾಫಿಕ್ ಜಾಮ್ ಆಗಿದ್ದು ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಅವರು ಟ್ರಾಫಿಕ್ ಕ್ಲಿಯರ್ ಮಾಡಿಸಿದರು.

Share this article