ಪ್ರತಿ ವಾರ ಗ್ರಾಪಂ ಮಟ್ಟದಲ್ಲಿ ಜನಸಂಪರ್ಕ ಸಭೆ

KannadaprabhaNewsNetwork |  
Published : Jun 23, 2026, 01:15 AM IST
ಫೋಟೋ 22ಪಿವಿಡಿ3ಜನ ಸಂಪರ್ಕ ಸಭೆಗೂ ಮುನ್ನ ಮಾಜಿ ಸಚಿವ ವೆಂಕಟರಮಣಪ್ಪ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ,ಅಶೀರ್ವಾದ ಪಡೆದ ಶಾಸಕ ಎಚ್‌.ವಿ.ವೆಂಕಟೇಶ್‌,ಫೋಟೋ ಪಾವಗಡ,22ಪಿವಿಡಿ4,22ಪಿವಿಜಿ4ಪಟ್ಟಣದ ಕಚೇರಿ ಅವರಣದಲ್ಲಿ ಏರ್ಪಾಡಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಗ್ರಾಮೀಣ ಜನತೆಯಿಂದ ಶಾಸಕ ಎಚ್‌.ವಿ.ವೆಂಕಟೇಶ್‌ ಅಹವಾಲುಗಳನ್ನು ಸ್ವೀಕರಿಸಿದರು. | Kannada Prabha

ಸಾರಾಂಶ

ಗ್ರಾಮೀಣ ಜನತೆಯ ಕುಂದುಕೊರತೆ ನಿವಾರಿಸುವ ಹಿನ್ನಲೆ ಇನ್ನೂ ಮುಂದೆ ಪ್ರತಿವಾರ ಗ್ರಾಪಂ ಕೇಂದ್ರ ಕಚೇರಿದಲ್ಲಿ ಜನಸಂಪರ್ಕ ಸಭೆ ನಡೆಸುವ ಮೂಲಕ ಸ್ಥಳದಲ್ಲಿಯೇ ಸಮಸ್ಯೆ ನಿವಾರಣೆಗೆ ಒತ್ತು ನೀಡುವುದಾಗಿ ಶಾಸಕ ಹಾಗೂ ತುಮುಲ್‌ ಅಧ್ಯಕ್ಷ ಎಚ್‌.ವಿ.ವೆಂಕಟೇಶ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಪಾವಗಡ

ಗ್ರಾಮೀಣ ಜನತೆಯ ಕುಂದುಕೊರತೆ ನಿವಾರಿಸುವ ಹಿನ್ನಲೆ ಇನ್ನೂ ಮುಂದೆ ಪ್ರತಿವಾರ ಗ್ರಾಪಂ ಕೇಂದ್ರ ಕಚೇರಿದಲ್ಲಿ ಜನಸಂಪರ್ಕ ಸಭೆ ನಡೆಸುವ ಮೂಲಕ ಸ್ಥಳದಲ್ಲಿಯೇ ಸಮಸ್ಯೆ ನಿವಾರಣೆಗೆ ಒತ್ತು ನೀಡುವುದಾಗಿ ಶಾಸಕ ಹಾಗೂ ತುಮುಲ್‌ ಅಧ್ಯಕ್ಷ ಎಚ್‌.ವಿ.ವೆಂಕಟೇಶ್‌ ಹೇಳಿದರು.

ಸೋಮವಾರ ಪಟ್ಟಣದ ಶಾಸಕರ ಕಚೇರಿಯಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಇಲಾಖಾವಾರು ಜನ ಸಾಮಾನ್ಯರ ಸಮಸ್ಯೆ ನಿವಾರಣೆ ಹಿನ್ನಲೆಯಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳ ಜತೆ ತಾಲೂಕು ಕೇಂದ್ರದಲ್ಲಿ ಜನ ಸಂಪರ್ಕ ಸಭೆ ನಡೆಸಿದ್ದು ಜಮೀನು ಹಾಗೂ ನಿವೇಶನಕ್ಕೆ ಸಂಬಂಧಪಟ್ಟಂತೆ 150ಕ್ಕಿಂತ ಹೆಚ್ಚು ಅರ್ಜಿ ಸಲ್ಲಿಕೆಯಾಗಿವೆ. ಗ್ರಾಪಂ ಹಾಗೂ ಇತರೆ ಕಚೇರಿಗಳಿಗೆ ಅಧಿಕಾರಿಗಳ ಭೇಟಿ ನಿರ್ಲಕ್ಷ್ಯ ಹಾಗೂ ಸಾರ್ವಜನಿಕ ಸಮಸ್ಯೆ ನಿವಾರಣೆಯಲ್ಲಿ ವಿಳಂಬದ ಬಗ್ಗೆ ದೂರುಗಳು ಕೇಳಿಬಂದಿವೆ. ಇದಕ್ಕೆ ಮುಖ್ಯವಾಗಿ ಪಿಡಿಒಗಳು ಕೇಂದ್ರ ಸ್ಥಾನದಲ್ಲಿ ಇಲ್ಲದೇ ಇರುವುದು ಗೊತ್ತಾಗಿದೆ. ಗ್ರಾಪಂಗೆ ಬೇಕಾಬಿಟ್ಟಿ ಭೇಟಿ ಹಾಗೂ ಜನತೆಯ ಸಮಸ್ಯೆಗೆ ಸ್ಪಂದಿಸದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ತಾಪಂ ಇಒಗೆ ಖಡಕ್‌ ಆದೇಶ ನೀಡಲಾಗಿದೆ ಎಂದರು.

ಇನ್ನೂ ಮುಂದೆ ತಾಲೂಕಿನ ಪ್ರತಿ ಗ್ರಾಪಂ ಕೇಂದ್ರ ಕಚೇರಿಯಲ್ಲಿ ವಾರಕ್ಕೊಮ್ಮೆ ತಾಲೂಕು ಮಟ್ಟದ ಅಧಿಕಾರಿಗಳ ಜತೆ ಜನ ಸಂಪರ್ಕ ಸಭೆ ಏರ್ಪಾಡಿಸಿ ಅಹವಾಲು ಸ್ವೀರಿಸುವ ಮೂಲಕ ಸ್ಥಳದಲ್ಲಿಯೇ ಸಮಸ್ಯೆ ನಿವಾರಿಸುವುದಾಗಿ ಹೇಳಿದರು. ಈ ವೇಳೆ ತಹಸೀಲ್ದಾರ್ ವೈ.ರವಿ, ತಾಪಂ ಇಒ ಮಧುಸೂದನ್, ಪುರಸಭೆ ಮುಖ್ಯಾಧಿಕಾರಿ ಜಾಫರ್‌ ಷರೀಫ್‌, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಜಯ್‌ಕುಮಾರ್‌ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯೋಧರ ಕಲ್ಯಾಣಕ್ಕೆ ನಿವೃತ್ತ ಶಿಕ್ಷಕಿ ₹10 ಲಕ್ಷ ದೇಣಿಗೆ!
ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂಗೆ ರೈತರ ಮುತ್ತಿಗೆ