ಸಮೀಕ್ಷೆ ಸ್ವಾಗತಿಸಿ ಯಶಸ್ಸಿಗೆ ಸಹಕಾರ ನೀಡಿ

KannadaprabhaNewsNetwork |  
Published : Sep 23, 2025, 01:06 AM IST
ಚಾಲನೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಸಿಂದಗಿ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯನ್ನು ನಿಖರವಾಗಿ ದಾಖಲಿಸುವ ಸಲುವಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮುಂದಾಗಿದೆ. ಈ ಸಮೀಕ್ಷೆ ಅಕ್ಟೋಬರ್ 7ರವರೆಗೆ ನಡೆಯಲಿದ್ದು, ಪ್ರತಿಯೊಬ್ಬರೂ ಗಣತಿದಾರರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಸಿಂದಗಿ

ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯನ್ನು ನಿಖರವಾಗಿ ದಾಖಲಿಸುವ ಸಲುವಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮುಂದಾಗಿದೆ. ಈ ಸಮೀಕ್ಷೆ ಅಕ್ಟೋಬರ್ 7ರವರೆಗೆ ನಡೆಯಲಿದ್ದು, ಪ್ರತಿಯೊಬ್ಬರೂ ಗಣತಿದಾರರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಮೀಕ್ಷೆ ಚಾಲನೆ ನೀಡಿ ಮಾತನಾಡಿದರು. ರಾಜ್ಯದ ಅಭಿವೃದ್ಧಿಯ ಪಥದಲ್ಲಿ ಸರ್ಕಾರ ಇಡಬೇಕಾದ ಹೆಜ್ಜೆಗಳನ್ನು ಈ ಸಮೀಕ್ಷೆ ಗುರುತಿಸಲಿದೆ. ಒಟ್ಟಿನಲ್ಲಿ ರಾಜ್ಯದ ಮುಂದಿನ ಪೀಳಿಗೆಗೆ ಅನುಕೂಲವಾದ ಸಮೀಕ್ಷೆಯನ್ನು ಸ್ವಾಗತಿಸಿ ಯಶಸ್ಸಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.ಈ ವೇಳೆ ತಹಸೀಲ್ದಾರ್ ಕರೆಪ್ಪ ಬೆಳ್ಳಿ ಮಾತನಾಡಿ, ಸಮೀಕ್ಷೆಗೆ ಶಾಲಾ ಶಿಕ್ಷಕರನ್ನು ನಿಯೋಜಿಸಲಾಗಿದೆ. ಸಂಪೂರ್ಣವಾಗಿ ತಂತ್ರಜ್ಞಾನ ಆಧಾರಿತವಾಗಿ ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ ಈ ಸಮೀಕ್ಷೆ ನಡೆಯಲಿದೆ. ಸಮೀಕ್ಷೆಯ ದತ್ತಾಂಶ ಸಂಗ್ರಹವು ಶೀಘ್ರವಾಗಿ ನಡೆಯಲಿದೆ. ಪ್ರತಿಮನೆಯನ್ನು ಗುರುತಿಸಲು ವಿದ್ಯುತ್ ಸಂಪರ್ಕದ ಮನೆಗಳಿಗೆ ಈಗಾಗಲೇ ಯುಎಚ್‌ಐಡಿ ಸಂಖ್ಯೆಯನ್ನು ರಾಜ್ಯಾದ್ಯಂತ ಎಸ್ಕಾಂಗಳ ಸಹಾಯದಿಂದ ನೀಡಲಾಗಿದೆ. ಇದರಿಂದಾಗಿ ಯಾವುದೇ ಮನೆಗಳನ್ನು ಬಿಟ್ಟು ಹೋಗುವ ಸಾಧ್ಯತೆಗಳು ವಿರಳ. ಓರ್ವ ಸಮೀಕ್ಷಕ ಅಂದಾಜು 110 ಮನೆಗಳ ಸಮೀಕ್ಷೆ ಮಾಡಲಿದ್ದಾರೆ ಎಂದರು.ಈ ಸಮೀಕ್ಷೆಗೆ ಒಟ್ಟು 513 ಶಿಕ್ಷಕರನ್ನ ನಿಯೋಜಿಸಿದೆ. ಸಿಂದಗಿ ತಾಲೂಕಿಗೆ 320 ಶಿಕ್ಷಕರು ಮತ್ತು ಆಲಮೇಲ ತಾಲೂಕಿಗೆ 393 ಜನ ಶಿಕ್ಷಕರನ್ನ ನೇಮಕ ಮಾಡಲಾಗಿದೆ ಒಟ್ಟು 513 ಶಿಕ್ಷಕರು ಭಾಗವಹಿಸಲಿದ್ದಾರೆ. 26 ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಎಲ್ಲಾ ಗಣತಿದಾರರಿಗೆ ಸೂಕ್ತ ತರಬೇತಿ ನೀಡಲಾಗಿದೆ. ಸಿಂದಗಿ ತಾಲೂಕಿನಲ್ಲಿ ಒಟ್ಟು 35,418 ಮನೆಗಳು ಹಾಗೂ ಆಲಮೇಲ ತಾಲೂಕಿನಲ್ಲಿ ಒಟ್ಟು 20,948 ಮನೆ ಸೇರಿ ಸಿಂದಗಿ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ 56,366 ಮನೆಗಳ ಸಮೀಕ್ಷೆ ನಡೆಯಲಿದೆ. ಗಣತಿದಾರರ ಜೊತೆಗೆ ಆಶಾ ಕಾರ್ಯಕರ್ತೆಯರು ಮಹಿಳಾ ಸ್ವಸಹಾಯ ಸಂಘದವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ್ ಯಡ್ರಾಮಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

PREV

Recommended Stories

ಅಕ್ರಮ ಶಸ್ತ್ರಾಸ್ತ್ರ: ನಿನ್ನೆಯೂ ವಿಚಾರಣೆಗೆ ತಿಮರೋಡಿ ಗೈರು
ಸಿದ್ದು ಆಳ್ವಿಕೆ ಟಿಪ್ಪು ಆಳ್ವಿಕೆ ನಾಚಿಸುವಂತಿದೆ : ಬಿವೈವಿ