ಡಾ.ಬಿ.ಆರ್.ಅಂಬೇಡ್ಕರ್ ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ : ಭೀಮ ಹೆಜ್ಜೆ ರಥಯಾತ್ರೆಗೆ ಸ್ವಾಗತ, ಬೈಕ್ ರ‍್ಯಾಲಿ

KannadaprabhaNewsNetwork |  
Published : Apr 13, 2025, 02:11 AM ISTUpdated : Apr 13, 2025, 11:59 AM IST
ಫೋಟೊ ಶೀರ್ಷಿಕೆ: 12ಆರ್‌ಎನ್‌ಆರ್6ಬೆಂಗಳೂರಿನಿAದ ನಿಪ್ಪಾಣಿವರೆಗೆ ತೆರಳುತ್ತಿರುವ ಭಾರತೀಯ ಜನತಾ ಪಕ್ಷದ ಭೀಮ ರಥಯಾತ್ರೆಗೆ ರಾಣಿಬೆನ್ನೂರಿನಲ್ಲಿ ಭವ್ಯ ಸ್ವಾಗತ ಕೋರಲಾಯಿತು. ಫೋಟೊ ಶೀರ್ಷಿಕೆ: 12ಆರ್‌ಎನ್‌ಆರ್6ಎಬೆಂಗಳೂರಿನಿAದ ನಿಪ್ಪಾಣಿವರೆಗೆ ತೆರಳುತ್ತಿರುವ ಭಾರತೀಯ ಜನತಾ ಪಕ್ಷದ ಭೀಮ ರಥಯಾತ್ರೆಯೊಂದಿಗೆ ರಾಣಿಬೆನ್ನೂರು ನಗರದಲ್ಲಿ ಬೈಕ್ ರ‍್ಯಾಲಿ ನಡೆಸಲಾಯಿತು.  | Kannada Prabha

ಸಾರಾಂಶ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ನಿಪ್ಪಾಣಿವರೆಗೆ ತೆರಳುತ್ತಿರುವ ರಥಯಾತ್ರೆಗೆ ಶನಿವಾರ ನಗರದ ಹೊರವಲಯದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ರಾಣಿಬೆನ್ನೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ನಿಪ್ಪಾಣಿವರೆಗೆ ತೆರಳುತ್ತಿರುವ ರಥಯಾತ್ರೆಗೆ ಶನಿವಾರ ನಗರದ ಹೊರವಲಯದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ನಂತರ ರಥಯಾತ್ರೆಯೊಂದಿಗೆ ನಗರದ ಸ್ಟೇಷನ್ ರಸ್ತೆಯ ಭಾರತೀಯ ಜನತಾ ಪಕ್ಷದ ಕಚೇರಿವರೆಗೆ ಬೈಕ್ ರ‍್ಯಾಲಿ ನಡೆಸಲಾಯಿತು.

ಈ ಸಮಯದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ಡಾ. ಬಾಬಾ ಸಾಹೇಬ ಅಂಬೇಡ್ಕರ್ ಶೋಷಿತ ವರ್ಗಗಳ ಧ್ವನಿಯಾಗಿದ್ದರು. ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿತು ಎಂದರು.

ಕೋಲಾರದ ಮಾಜಿ ಸಂಸದ ಮುನಿಯಪ್ಪ, ನವೀನ ಕೋಟಗಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ, ಗ್ರಾಮೀಣ ಘಟಕದ ಅಧ್ಯಕ್ಷ ಪರಮೇಶ ಗೂಳಣ್ಣನವರ, ಶಹರ ಘಟಕದ ಅಧ್ಯಕ್ಷ ರಮೇಶ ಗುತ್ತಲ, ನಗರಸಭೆ ಸದಸ್ಯರುಗಳಾದ ಪ್ರಕಾಶ ಪೂಜಾರ, ಗಂಗಮ್ಮ ಹಾವನೂರ, ಮಂಜುಳಾ ಹತ್ತಿ, ಜಿಪಂ ಮಾಜಿ ಅಧ್ಯಕ್ಷ ಮಂಜುನಾಥ ಓಲೇಕಾರ, ಮಾಜಿ ಸದಸ್ಯೆ ಮಂಗಳಗೌರಿ ಪೂಜಾರ, ಮೈಲಪ್ಪ ಗೋಣಿಬಸಮ್ಮನವರ, ಗೀತಾ ಜಂಬಗಿ, ಗದಿಗೆಪ್ಪ ಹೊಟ್ಟಿಗೌಡ್ರ, ಎ.ಬಿ. ಪಾಟೀಲ, ಅಮೋಘ ಬದಾಮಿ ಸೇರಿದಂತೆ ಪಕ್ಷದ ಮುಖಂಡರುಗಳು, ಕಾರ್ಯಕರ್ತರು ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾನೂನಿನ ಜ್ಞಾನ ಪಡೆಯುವುದು ಅರಣ್ಯವಾಸಿಯ ಮೂಲಭೂತ ಕರ್ತವ್ಯ: ರಂಜಿತಾ
ನೋಂದಾಯಿಸಿದ ಎಲ್ಲ ರೈತರ ಮೆಕ್ಕೆಜೋಳ ಖರೀದಿ: ಸೋಮಣ್ಣ ಉಪನಾಳ