ಕನ್ನಡಪ್ರಭವಾರ್ತೆ ಸೋಮವಾರಪೇಟೆ
ನಂತರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನು ಮಾತನಾಡಿ, ಭಾರತದಲ್ಲಿ ಲಿಖಿತ ಸಂವಿಧಾನ ಇದ್ದು ಜನರು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಕರೆ ನೀಡಿದರು. ಐಗೂರು ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಹೆಚ್.ಕೆ.ಉಮೇಶ್ ಮಾತನಾಡಿ, ಸಂವಿಧಾನದಲ್ಲಿ ಸರ್ವರಿಗೂ ಸಮಪಾಲು ಸಮಬಾಳು ನೀತಿ ಇದೆ. ಸಹಬಾಳ್ವೆಯ ಮೂಲಕ ಜೀವನ ನಡೆಸಿದರೆ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸುವುದರೊಂದಿಗೆ ಸಂವಿಧಾನದ ಆಶಯಗಳಿಗೆ ನಾವುಗಳು ಗೌರವ ನೀಡಿದಂತಾಗುತ್ತದೆ ಎಂದರು.
ಗ್ರಾಮ ಪಂಚಾಯಿತಿ ಸದಸ್ಯರು, ಮುಖ್ಯ ಶಿಕ್ಷಕ ಯಶ್ವಂತ್ ಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು ಇದ್ದರು.------
ಸಂವಿಧಾನ ಜಾಗೃತಿ ಜಾಥಾ ಫೆ. 4ರಂದು ಬೆಳಗ್ಗೆ 9 ಕ್ಕೆ ಪಟ್ಟಣಕ್ಕೆ ಆಗಮಿಸಲಿದೆ.ಕಕ್ಕೆಹೊಳೆ ಬಳಿಯಲ್ಲಿ ಜಾಥಾವನ್ನು ಬರಮಾಡಿಕೊಂಡು ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮುಖ್ಯ ರಸ್ತೆಗಳಲ್ಲಿ ಮೆರವಣಿಗೆಯ ನಂತರ ಜೇಸಿ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಸಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.