ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಚಿನ್ನದ ಪದಕಗಳನ್ನು ಗೆದ್ದು ಸಾಧನೆ ಮೆರೆದ ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಕೃತಿ ಎನ್.ಪಿ., ದೀಪಿತ್ ಶೆಟ್ಟಿ ಹಾಗೂ ನಿಶ್ಚಿತ್ ಪಿ.ಡಿ. ಅವರನ್ನು ಸಾರ್ವಜನಿಕವಾಗಿ ಸನ್ಮಾನಿಸಿ, ಮೆರವಣಿಗೆಯ ಮೂಲಕ ಶಾಲೆಗೆ ಬರಮಾಡಿಕೊಳ್ಳುವ ಅಪೂರ್ವ ಕಾರ್ಯಕ್ರಮ ಶನಿವಾರ ಮಾಣಿಯಲ್ಲಿ ವಿಜೃಂಭಣೆಯಿಂದ ನಡೆಯಿತು.
ಬಂಟ್ವಾಳ : ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಚಿನ್ನದ ಪದಕಗಳನ್ನು ಗೆದ್ದು ಸಾಧನೆ ಮೆರೆದ ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಕೃತಿ ಎನ್.ಪಿ., ದೀಪಿತ್ ಶೆಟ್ಟಿ ಹಾಗೂ ನಿಶ್ಚಿತ್ ಪಿ.ಡಿ. ಅವರನ್ನು ಸಾರ್ವಜನಿಕವಾಗಿ ಸನ್ಮಾನಿಸಿ, ಮೆರವಣಿಗೆಯ ಮೂಲಕ ಶಾಲೆಗೆ ಬರಮಾಡಿಕೊಳ್ಳುವ ಅಪೂರ್ವ ಕಾರ್ಯಕ್ರಮ ಶನಿವಾರ ಮಾಣಿಯಲ್ಲಿ ವಿಜೃಂಭಣೆಯಿಂದ ನಡೆಯಿತು.ಮಾಣಿ ಜಂಕ್ಷನ್‌ನಲ್ಲಿ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಸಾಧಕ ಕ್ರೀಡಾಪಟು ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಾಯಿತು. ಸತ್ಯಶ್ರೀ ಗೆಳೆಯರ ಬಳಗ ಅಡ್ಲಬೆಟ್ಟು-ಬುಡೋಳಿ, ವಾಲಿಬಾಲ್ ಫ್ರೆಂಡ್ಸ್- ಬಾಲವಿಕಾಸ ಮಾಣಿ, ನಿವೃತ್ತ ಸೈನಿಕರ ಸಂಘ ಬಂಟ್ವಾಳ ತಾಲೂಕು, ಮಾಣಿ ಯುವಕ ಮಂಡಲ, ಯುವವಾಹಿನಿ ಮಾಣಿ ಹಾಗೂ ಬಂಟರ ಸಂಘ ಮಾಣಿ ಹಾಗೂ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ವತಿಯಿಂದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ನಿವೃತ್ತ ಸೈನಿಕ ದಿನೇಶ್ ಬಿ ಮತ್ತು ತೇಜಾಕ್ಷಿ ದಂಪತಿಯ ಪುತ್ರಿ ಕೃತಿ ಎನ್.ಪಿ. ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು, ನ. 19ರಿಂದ 24ರವರೆಗೆ ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಕೃತಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಹಾಗೂ ಸುಚಿತ್ರ ದಂಪತಿ ಪುತ್ರ ದೀಪಿತ್ ಶೆಟ್ಟಿ ಹಾಗೂ ಪ್ರಗತಿಪರ ಕೃಷಿಕರಾದ ಪೂವಪ್ಪ ಪೂಜಾರಿ ಮತ್ತು ರಾಜೇಶ್ವರಿ ದಂಪತಿಯ ಪುತ್ರ ನಿಶ್ಚಿತ್ ಪಿ.ಡಿ. ಅವರು 4×400 ಮೀಟರ್ ರಿಲೇ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಪ್ರಹ್ಲಾದ್ ಜೆ. ಶೆಟ್ಟಿ, ಕಾರ್ಯದರ್ಶಿ ಮಹೇಶ್ ಜೆ. ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ಸುಪ್ರಿಯಾ ಡಿ., ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ್ ಪೂಜಾರಿ ಹಾಗೂ ಸೌಮ್ಯ ಸದಾನಂದ್ ಮತ್ತು ಶಿಕ್ಷಕ ವೃಂದದವರು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಮೌನೇಶ್ ವಿಶ್ವಕರ್ಮ ನಿರ್ವಹಿಸಿದರು.ತೆರೆದ ಜೀಪಿನಲ್ಲಿ ನಡೆದ ಭವ್ಯ ಮೆರವಣಿಗೆಯಲ್ಲಿ ಮಾಡಿ ಬಾಲ ವಿಕಾಸ ಶಾಲೆಯ ಬ್ಯಾಂಡ್ ತಂಡ, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ವಿಶೇಷ ಮೆರುಗು ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.