ಇಂದು ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

KannadaprabhaNewsNetwork |  
Published : Jun 02, 2025, 12:46 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ನಗರದ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆಯಾಗಿ ಬಂದಿರುವ ಮತ್ತು ವಿವಿಧ ನ್ಯಾಯಾಲಯಗಳಿಗೆ ವರ್ಗಾವಣೆ ಹೊಂದಿರುವ ನ್ಯಾಯಾಧೀಶರಿಗೆ ಜಿಲ್ಲಾ ವಕೀಲರ ಸಂಘದಿಂದ ಜೂ.2ರಂದು ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿರುವ ವಕೀಲರ ಸಾಂಸ್ಕೃತಿಕ ಸಭಾ ಭವನದಲ್ಲಿ ಸ್ವಾಗತ ಸಮಾರಂಭ ಆಯೋಜಿಸಿದೆ.

- ದಾವಣಗೆರೆ ಜಿಲ್ಲಾ ವಕೀಲರ ಸಾಂಸ್ಕೃತಿಕ ಸಭಾ ಭವನದಲ್ಲಿ ಆಯೋಜನೆ

- - -

ದಾವಣಗೆರೆ: ನಗರದ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆಯಾಗಿ ಬಂದಿರುವ ಮತ್ತು ವಿವಿಧ ನ್ಯಾಯಾಲಯಗಳಿಗೆ ವರ್ಗಾವಣೆ ಹೊಂದಿರುವ ನ್ಯಾಯಾಧೀಶರಿಗೆ ಜಿಲ್ಲಾ ವಕೀಲರ ಸಂಘದಿಂದ ಜೂ.2ರಂದು ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿರುವ ವಕೀಲರ ಸಾಂಸ್ಕೃತಿಕ ಸಭಾ ಭವನದಲ್ಲಿ ಸ್ವಾಗತ ಸಮಾರಂಭ ಆಯೋಜಿಸಿದೆ.

ಬೆಳಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್‌ಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಕೆ.ವೇಲಾ, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಎನ್.ಪ್ರವೀಣ್‌ಕುಮಾರ್, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಎಸ್‌ಟಿಎಫ್‌ಸಿ-1 ಆದ ಶ್ರೀರಾಮ ನಾರಾಯಣ ಹೆಗಡೆ, ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಶಿವಪ್ಪ ಗಂಗಪ್ಪ ಸಲಗರೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ, ಪ್ರಧಾನ ಸಿವಿಲ್ ನ್ಯಾಯಾಧೀಶ, ಜೆಎಂಎಫ್‌ಸಿ ಆದ ಎಚ್.ಡಿ.ಗಾಯತ್ರಿ ಆಗಮಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು, ಮುಖ್ಯ ನ್ಯಾಯಿಕ ದಂಡಾಧಿಕಾರಿ ಎಚ್.ಕೆ.ರೇಷ್ಮಾ, 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು, ಜೆಎಂಎಫ್‌ಸಿ ಆದ ವಿ.ಎಲ್. ಅಮರ್, 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು, ಜೆಎಂಎಫ್‌ಸಿ ಆದ ಸಿ.ನಾಗೇಶ್, 3ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು, ಜೆಎಂಎಫ್‌ಸಿ ಆದ ಕೆ.ಲತಾ, 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು, ಜೆಎಂಎಫ್‌ಸಿ ಆದ ಕೆ.ಎನ್.ಕಿಶೋರ್‌ ಕುಮಾರ್, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು, ಜೆಎಂಎಫ್‌ಸಿ ಆದ ಎಂ.ಪದ್ಮಾ, 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು, ಜೆಎಂಎಫ್‌ಸಿ ಆದ ಅಚ್ಚಪ್ಪ ದೊಡ್ಡ ಬಸವರಾಜ್ ಅವರಿಗೆ ಸ್ವಾಗತ ಸಮಾರಂಭ ಆಯೋಜಿಸಲಾಗಿದೆ ಎಂದು ಜಿಲ್ಲಾ ವಕೀಲರ ಸಂಘ ತಿಳಿಸಿದೆ.

- - - (ಸಾಂದರ್ಭಿಕ ಚಿತ್ರ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕರಗಕ್ಕೆ ವಿಶ್ವಪ್ರಸಿದ್ಧಿ ಪಡೆದ ಧರ್ಮರಾಯ ದೇಗುಲ ಚಿನ್ನ ಕಳವು
ಸಿ.ಟಿ.ರವಿ ‘ಪಾಕ್‌ ನಾಲಿಗೆ’ ಹೇಳಿಕೆಗೆ ಸದನವೇ ಬಲಿ