ಕನ್ನಡಪ್ರಭ ವಾರ್ತೆ ಮೈಸೂರುಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸಮಾಧಿ ಇದ್ದ ಸ್ಥಳವನ್ನು ಮುಟ್ಟುಗೋಲು ಹಾಕಿಕೊಂಡು ಸಾಹಸಸಿಂಹ ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನು ಸಂರಕ್ಷಿಸಲು ಮುಂದಾಗಿರುವ ಸರ್ಕಾರದ ನಿಲುವನ್ನು ಸ್ವಾಗತಿಸಿ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳು ಶುಕ್ರವಾರ ಅಗ್ರಹಾರ ವೃತ್ತದಲ್ಲಿ ವಿಷ್ಣುವರ್ಧನ್ ಅವರ ಭಾವಚಿತ್ರ ಹಿಡಿದು ಸಾರ್ವಜನಿಕರಿಗೆ ಸಿಹಿ ಹಂಚಿದರು.ಅಭಿಮಾನಿಗಳ 15 ವರ್ಷಗಳ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ಅಧ್ಯಕ್ಷ ಎಂ.ಡಿ. ಪಾರ್ಥಸಾರಥಿ, 75ನೇ ವರ್ಷದ ಸಂಭ್ರಮ ಸಂದರ್ಭದಲ್ಲಿ ವಿಷ್ಣುವರ್ಧನ್ ಅವರಿಗೆ ಜಯ ಸಿಕ್ಕಿದೆ. ವಿಷ್ಣುವರ್ಧನ್ ವಿಚಾರದಲ್ಲಿ ಪದೇ ಪದೇ ತೊಂದರೆ ಕೊಡುತ್ತಾ ಬಂದಿದ್ದರು. ಅಭಿಮಾನಿಗಳು ಸಹನೆ ಹಾಗೂ ಶಾಂತಿ ರೀತಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆದರೆರಾತ್ರೋರಾತ್ರಿ ಅವರ ಪುಣ್ಯಭೂಮಿಯನ್ನು ಕಿಡಿಗೇಡಿಗಳು ಧ್ವಂಸ ಮಾಡಿಕನ್ನಡದ ಮೇರು ನಟ ವಿಷ್ಣುವರ್ಧನ್ ಅಭಿಮಾನಿಗಳಿಗೆ ನೋವನ್ನುಂಟು ಮಾಡಿದ್ದಾಗಿ ತಿಳಿಸಿದರು.ಆದರೆ ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ ಎಂಬುದಕ್ಕೆ ಉದಾಹರಣೆ. ಈ ಘಟನೆ ಸಾಕ್ಷಿ, ಈ ಸಂದರ್ಭದಲ್ಲಿ ಸರ್ಕಾರಕ್ಕೆ ಅಭಿಮಾನಿಗಳ ಪರ ಅಭಿನಂದನೆ ಸಲ್ಲಿಸುತ್ತೇವೆ. ಈ ಕೂಡಲೇ ಪುಣ್ಯ ಭೂಮಿಯ ಕೆಲಸವನ್ನು ಪ್ರಾರಂಭಿಸಿ ನಿಮ್ಮೊಡನೆ ಎಂದಿಗೂ ವಿಷ್ಣು ಅಭಿಮಾನಿಗಳು ಇರುತ್ತೇವೆ ಎಂದು ಹೇಳಿದರುಈ ವೇಳೆ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ಅಧ್ಯಕ್ಷ ಎಂ.ಡಿ. ಪಾರ್ಥಸಾರಥಿ, ಕನ್ನಡ ಸಾಹಿತ್ಯ ಪರಿಷತ್‌ಮಾಜಿ ಅಧ್ಯಕ್ಷ ಎಂ. ಚಂದ್ರಶೇಖರ್, ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮ್, ಜೆಡಿಎಸ್ ಕಾರ್ಯಧ್ಯಕ್ಷ ಎಸ್. ಪ್ರಕಾಶ್ ಪ್ರಿಯದರ್ಶನ್, ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್.ಎನ್. ರಾಜೇಶ್, ಮಡಿವಾಳ ಸಂಘದ ರಾಜ್ಯಾಧ್ಯಕ್ಷ ರವಿ, ಸಂತೋಷ್, ಕುಮಾರ್ ಆರಾಧ್ಯ, ರಂಗನಾಥ್, ಅಭಿ, ಲಕ್ಷ್ಮಣ್, ಮಹದೇವ್, ಜಗದೀಶ್, ನಾಗೇಶ್, ಕಿರಣ್ ಮೊದಲಾದವರು ಇದ್ದರು.