ಕನ್ನಡಪ್ರಭ ವಾರ್ತೆ ಮಂಗಳೂರು
ನಗರದ ವೆನ್ಲಾಕ್ ಮಕ್ಕಳ ಆಸ್ಪತ್ರೆ ಸಭಾಂಗಣದಲ್ಲಿ ಸೋಮವಾರ ಮಂಗಳೂರಿನ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಜೊತೆಗಾರರಿಗೆ ರಾತ್ರಿಯ ಊಟ ನೀಡುವ ಕಾರುಣ್ಯ ಯೋಜನೆಯ ಏಳನೇ ಮತ್ತು ಪುತ್ತೂರಿನಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಕಂಪ್ಯೂಟರ್ ಶಿಕ್ಷಣ ನೀಡುವ ‘ಕ್ಲಾಸ್ ಆನ್ ವ್ಹೀಲ್’ ಯೋಜನೆಯ ಪ್ರಥಮ ವಾರ್ಷಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಎಂಫ್ರೆಂಡ್ಸ್ ಟ್ರಸ್ಟ್ ಚೇರ್‌ಮೆನ್ ಝಕರಿಯಾ ಜೋಕಟ್ಟೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ.ಡಿ.ಎಸ್. ಶಿವಪ್ರಕಾಶ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್ ಮುಖ್ಯ ಅತಿಥಿಯಾಗಿದ್ದರು.
ಜೀವನಪೂರ್ತಿ ಕೊಡುಗೆ:ಕ್ಲಾಸ್ ಆನ್ ವ್ಹೀಲ್ ಯೋಜನೆಯ ನಿರ್ವಹಣೆಗೆ ಮಾಸಿಕ ಒಂದು ಲಕ್ಷ ರು. ಬೇಕಾಗುತ್ತದೆ. ದಾನಿಗಳ ನೆರವಿನಿಂದ ಅದನ್ನು ಭರಿಸಲಾಗುತ್ತದೆ. ಮುಂದೆ ಜೀವನಪೂರ್ತಿ ತಾನು ಕೊಡುಗೆ ನೀಡುವುದಾಗಿ ಝಕರಿಯಾ ಜೋಕಟ್ಟೆ ಘೋಷಿಸಿದರು. ಅದರ ಲಾಂಛನ ಬಿಡುಗಡೆ ಮಾಡಲಾಯಿತು.
ಎಂಫ್ರೆಂಡ್ಸ್ ಟ್ರಸ್ಟ್ ಅಧ್ಯಕ್ಷ ಸುಜಾಹ್ ಮುಹಮ್ಮದ್ ಸ್ವಾಗತಿಸಿದರು. ಕಾರುಣ್ಯ ಯೋಜನೆಯ ಮುಖ್ಯಸ್ಥ ಮುಹಮ್ಮದ್ ಹನೀಫ್ ಗೋಳ್ತಮಜಲು ಪ್ರಾಸ್ತಾವಿಕ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ವಂದಿಸಿದರು. ಕ್ಲಾಸ್ ಆನ್ ವ್ಹೀಲ್ ಯೋಜನೆ ಮುಖ್ಯಸ್ಥ ರಶೀದ್ ವಿಟ್ಲ ನಿರೂಪಿಸಿದರು.