ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಯಾಗಿ ವೆನ್ಲಾಕ್, ಲೇಡಿಗೋಷನ್ ಉನ್ನತೀಕರಣ

KannadaprabhaNewsNetwork |  
Published : Nov 03, 2025, 02:45 AM IST
ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಸಚಿವ ದಿನೇಶ್‌ ಗುಂಡೂರಾವ್‌. | Kannada Prabha

ಸಾರಾಂಶ

ವೆನ್ಲಾಕ್‌ನಲ್ಲಿ 70 ಕೋಟಿ ರು. ವೆಚ್ಚದಲ್ಲಿ ಹೊರ ರೋಗಿ ವಿಭಾಗ ಸಿದ್ಧಗೊಳ್ಳುತ್ತಿದೆ. ಕೆಎಂಸಿಯಿಂದ 35 ಕೋಟಿ ರು. ಮೊತ್ತದ ಸೌಲಭ್ಯ ಬರಲಿದೆ. ಲೇಡಿಗೋಷನ್‌ನಲ್ಲಿ ಐಐಸಿಯು ನಿರ್ಮಾಣವಾಗಿದೆ. ಇದೆಲ್ಲವನ್ನು ಬಳಸಿಕೊಂಡು ಇನ್ನಷ್ಟು ಸೌಲಭ್ಯ ಕಲ್ಪಿಸಿ ಉತ್ಕೃಷ್ಟ ಆಸ್ಪತ್ರೆಗಳಾಗಿ ಮಾರ್ಪಡಿಸುತ್ತೇವೆ ಎಂದು ಗುಂಡೂರಾವ್ ಹೇಳಿದ್ದಾರೆ.

ಎಂಫ್ರೆಂಡ್ಸ್‌ನ ಕಾರುಣ್ಯ ಯೋಜನೆ ಉದ್ಘಾಟಿಸಿ ಸಚಿವ ದಿನೇಶ್ ಗುಂಡೂರಾವ್ ಭರವಸೆಕನ್ನಡಪ್ರಭ ವಾರ್ತೆ ಮಂಗಳೂರು

ಕ್ಯಾಥ್‌ಲ್ಯಾಬ್, ಡೇ ಕೇರ್ ಕಿಮೋಥೆರಪಿ ಸಹಿತ ಅತ್ಯಾಧುನಿಕ ಚಿಕಿತ್ಸೆ ನೀಡುತ್ತಿರುವ ವೆನ್ಲಾಕ್ ಜಿಲ್ಲಾಸ್ಪತ್ರೆ ಮತ್ತು ಪ್ರತಿದಿನ 18-20 ಹೆರಿಗೆ ನಡೆಯುತ್ತಿರುವ ಲೇಡಿಗೋಷನ್ ಆಸ್ಪತ್ರೆಗಳು ರಾಜ್ಯಕ್ಕೆ ಮಾದರಿಯಾಗಿದ್ದು, ಇವೆರಡನ್ನೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಜೊತೆಗಾರರಿಗೆ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಾತ್ರಿ ಊಟ ವಿತರಿಸುವ ವಿಸ್ತರಿತ ಕಾರುಣ್ಯ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ವೆನ್ಲಾಕ್‌ನಲ್ಲಿ 70 ಕೋಟಿ ರು. ವೆಚ್ಚದಲ್ಲಿ ಹೊರ ರೋಗಿ ವಿಭಾಗ ಸಿದ್ಧಗೊಳ್ಳುತ್ತಿದೆ. ಕೆಎಂಸಿಯಿಂದ 35 ಕೋಟಿ ರು. ಮೊತ್ತದ ಸೌಲಭ್ಯ ಬರಲಿದೆ. ಲೇಡಿಗೋಷನ್‌ನಲ್ಲಿ ಐಐಸಿಯು ನಿರ್ಮಾಣವಾಗಿದೆ. ಇದೆಲ್ಲವನ್ನು ಬಳಸಿಕೊಂಡು ಇನ್ನಷ್ಟು ಸೌಲಭ್ಯ ಕಲ್ಪಿಸಿ ಉತ್ಕೃಷ್ಟ ಆಸ್ಪತ್ರೆಗಳಾಗಿ ಮಾರ್ಪಡಿಸುತ್ತೇವೆ ಎಂದು ಅವರು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಸರ್ಕಾರದಿಂದ ಊಟ ಕೊಡುತ್ತಿದ್ದೇವೆ. ಆದರೆ ಅವರ ಜತೆಗಿರುವವರಿಗೆ ಕೊಡಲು ಸಾಧ್ಯವಾಗುತ್ತಿಲ್ಲ. ಅವರು ಹೊರಗೆ ಹೋಗುವುದು ಕಷ್ಟ. ಇದನ್ನು ಮನಗಂಡು ವೆನ್ಲಾಕ್ ಆಸ್ಪತ್ರೆಯಲ್ಲಿ 8 ವರ್ಷಗಳಿಂದ ನಿರಂತರ ರಾತ್ರಿ ಊಟ ನೀಡುವ ಎಂಫ್ರೆಂಡ್ಸ್ ಕಾರ್ಯ ಶ್ಲಾಘನೀಯ. ಅದನ್ನು ಲೇಡಿಗೋಷನ್‌ಗೂ ವಿಸ್ತರಿಸಿರುವುದು ಅಭಿಮಾನಪಡುವ ಪುಣ್ಯದ ಕೆಲಸ ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.ರೋಹನ್ ಕಾರ್ಪೊರೇಶನ್ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೇರೊ ಅವರ ಪರವಾಗಿ ನಿರ್ದೇಶಕ ಡಿಯೋನ್ ಮೊಂತೇರೊ ಅವರಿಗೆ ಸಚಿವರು ‘ಕರುಣಾಳು ಕನ್ನಡಿಗ’ ಪ್ರಶಸ್ತಿ ಪ್ರದಾನ ಮಾಡಿದರು. ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸುಜಾಹ್ ಮೊಹಮ್ಮದ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ ಶುಭ ಹಾರೈಸಿದರು.

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ, ಲೇಡಿಗೋಷನ್ ಆರ್‌ಎಂಒ ಡಾ.ಜಗದೀಶ್ ಕೆ., ಎಂಫ್ರೆಂಡ್ಸ್ ಸ್ಥಾಪಕ ರಶೀದ್ ವಿಟ್ಲ, ಕೊಶಾಧಿಕಾರಿ ಝುಬೇರ್ ಬುಳೆರಿಕಟ್ಟೆ, ಟ್ರಸ್ಟಿಗಳಾದ ಅನ್ವರ್ ಹುಸೇನ್, ಶೇಕ್ ಇಸಾಕ್, ಅಬೂಬಕರ್ ಪುತ್ತು, ಡಾ.ಮುಬಶ್ಶಿರ್, ಹಂಝ ಬಸ್ತಿಕೋಡಿ, ಮುಸ್ತಫಾ ಗೋಳ್ತಮಜಲು, ಬಶೀರ್ ಅಹ್ಮದ್, ಇಸ್ಮಾಯಿಲ್ ಕೋಲ್ಪೆ, ಇಬ್ರಾಹಿಂ ನಂದಾವರ, ಹಸೈನಾರ್ ಶಾಫಿ, ಮೊಹಮ್ಮದ್ ಸಫ್ವಾನ್ ವಿಟ್ಲ, ಮುಹಮ್ಮದ್ ಕುಂಞಿ ಟಾಪ್ಕೊ ಇದ್ದರು.

ಎಂಫ್ರೆಂಡ್ಸ್ ಕಾರುಣ್ಯ ವಿಭಾಗದ ಮುಖ್ಯಸ್ಥ ಮೊಹಮ್ಮದ್ ಹನೀಫ್ ಗೋಳ್ತಮಜಲು ಸ್ವಾಗತಿಸಿದರು. ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್ ಎಂ.ಆರ್. ಪ್ರಾಸ್ತಾವಿಕ ಮಾತನಾಡಿದರು. ಎಂಫ್ರೆಂಡ್ಸ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ವಂದಿಸಿದರು. ಬಿ.ಎ.ಮೊಹಮ್ಮದ್ ಅಲಿ ಕಮ್ಮರಡಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ