ಪಶ್ಚಿಮ ಪದವೀಧರರ ಕ್ಷೇತ್ರ: ಶೇ. 76.52 ಮತದಾನ

KannadaprabhaNewsNetwork |  
Published : Oct 24, 2026, 02:15 AM IST
ಕಾರವಾರದ ಮತಗಟ್ಟೆಯೊಂದರಲ್ಲಿ ಸಾಲುಗಟ್ಟಿ ನಿಂತಿರುವ ಮತದಾರರು.ಮತಗಟ್ಟೆಗೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಬೆಳಗ್ಗೆ 8ರಿಂದ ಆರಂಭವಾದ ಮತದಾನ ಪ್ರಕ್ರಿಯೆಯಲ್ಲಿ, ಬಿಸಿಲಿನ ತಾಪಮಾನದಿಂದ ರಕ್ಷಿಸಿಕೊಳ್ಳಲು ಆರಂಭದಿಂದಲೇ ಮತಗಟ್ಟೆಗಳಲ್ಲಿ ಸಾಲುಗಟ್ಟಿದ್ದ ಮತದಾರರು, ಶಾಂತಿಯುತವಾಗಿ ಸರದಿಯಲ್ಲಿ ತಮ್ಮ ಮತದಾನ ಹಕ್ಕು ಚಲಾಯಿಸಿದರು.

ಕಾರವಾರ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಮತದಾನದಲ್ಲಿ ಶೇ. 76.52 ಮತದಾರರು ಹಕ್ಕು ಚಲಾಯಿಸಿದರು. ಯಾವುದೇ ಅಹಿತಕರ ಘಟನೆಗಳಿಗೆ ನಡೆಯದೇ, ಸುಗಮ ಮತ್ತು ಶಾಂತಿಯುತವಾಗಿ ಚುನಾವಣೆ ನಡೆಯಿತು.

ಜಿಲ್ಲೆಯಲ್ಲಿ ಬೆಳಗ್ಗೆ 8ರಿಂದ ಆರಂಭವಾದ ಮತದಾನ ಪ್ರಕ್ರಿಯೆಯಲ್ಲಿ, ಬಿಸಿಲಿನ ತಾಪಮಾನದಿಂದ ರಕ್ಷಿಸಿಕೊಳ್ಳಲು ಆರಂಭದಿಂದಲೇ ಮತಗಟ್ಟೆಗಳಲ್ಲಿ ಸಾಲುಗಟ್ಟಿದ್ದ ಮತದಾರರು, ಶಾಂತಿಯುತವಾಗಿ ಸರದಿಯಲ್ಲಿ ತಮ್ಮ ಮತದಾನ ಹಕ್ಕು ಚಲಾಯಿಸಿದರು.

ಕಾರವಾರದ ಸೇಂಟ್ ಮೈಕಲ್ ಶಾಲೆಯಲ್ಲಿನ ಮತಗಟ್ಟೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ತಹಸೀಲ್ದಾರ್ ನಿಶ್ಚಲ್ ನರೋನ್ಹ ಅವರು ಸಾರ್ವಜನಿಕರೊಂದಿಗೆ ಸರದಿಯಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

ಜಿಲ್ಲೆಯಲ್ಲಿ ಬೆಳಗ್ಗೆ 10 ಗಂಟೆಯ ವೇಳೆಗೆ ಶೇ. 10.82ರಷ್ಟು ಮತದಾನವಾಗಿತ್ತು. ಅಂಕೋಲಾ ತಹಸೀಲ್ದಾರ್ ಕಚೇರಿಯ ಮತಗಟ್ಟೆಯಲ್ಲಿ ಮತದಾರರು ಅತ್ಯುತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿದ್ದು ಮಧ್ಯಾಹ್ನ 12ರ ವೇಳಗೆ ಕಚೇರಿಯ ಕಾಂಪೌಂಡ್‌ನ ಹೊರಗೂ ಸರದಿಯಲ್ಲಿ ಮತದಾರರು ನಿಂತಿದ್ದರು. ಕುಮಟಾ ತಹಸೀಲ್ದಾರ್ ಕಚೇರಿಯಲ್ಲಿಯೂ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಮಧ್ಯಾಹ್ನ 12 ಗಂಟೆಗೆ ಜಿಲ್ಲೆಯಲ್ಲಿ ಶೇ. 29.65 ರಷ್ಟು ಮತದಾನವಾಗಿದ್ದು, ಒಟ್ಟು 16039 ಮತದಾರರಲ್ಲಿ 2485 ಪುರುಷರು ಹಾಗೂ 2271 ಮಹಿಳೆಯರು ಮತ ಚಲಾವಣೆ ಮಾಡಿದ್ದರು.ಮಧ್ಯಾಹ್ನ 2 ಗಂಟೆಯ ವೇಳೆಗೆ ಶೇ. 52.09ರಷ್ಟು ಮತದಾನವಾಗಿದ್ದು, ಒಟ್ಟು 4310 ಪುರುಷರು ಹಾಗೂ 4045 ಮಹಿಳೆಯರು ಮತ ಚಲಾವಣೆ ಮಾಡಿದ್ದರು.

ಮತಗಟ್ಟೆಗಳಲ್ಲಿ ವಿಶೇಷಚೇತನ ಮತದಾರರಿಗಾಗಿ ಗಾಲಿ ಕುರ್ಚಿ ವ್ಯವಸ್ಥೆಯನ್ನು ಸಿದ್ಧತೆಯನ್ನು ಮಾಡಲಾಗಿದ್ದು, ಸಾರ್ವಜನಿಕರಿಗೆ ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ತುರ್ತು ವೈದ್ಯಕೀಯ ನೆರವು ನೀಡಲು ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾನಗಲ್ಲ ತಾಲೂಕಿನಲ್ಲಿ ಶೇ. ೮೦.೨೯ ಮತದಾನ
ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ ರೂಪಾಲಿ ನಾಯ್ಕ