;Resize=(412,232))
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಭಂಡತನದಿಂದ ದಸರಾ ಉದ್ಘಾಟನೆಗೆ ಹೋಗುತ್ತೇನೆ ಎಂದರೆ ಯಾರೂ ಏನು ಮಾಡಲು ಸಾಧ್ಯ. ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ದ್ವೇಷದ ರಾಜಕಾರಣ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕುರಿತು ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್, ಅಧಿಕಾರಿಗಳು ರಾಜಕಾರಣಿಗಳಂತೆ ವರ್ತಿಸಬಾರದು. ಕುಮಾರಸ್ವಾಮಿ ಕೇಂದ್ರದ ಸಚಿವರು. ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಪ್ರಮುಖ ಹುದ್ದೆಯಲ್ಲಿದ್ದಾರೆ. ಅವರು ಈಗಾಗಲೇ ಕೇಂದ್ರಕ್ಕೆ ಈ ಬಗ್ಗೆ ದೂರು ನೀಡಿದ್ದಾರೆ. ಆಗ ಪೊಲೀಸ್ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಲೋಕಾಯುಕ್ತದವರು ಕುಮಾರಸ್ವಾಮಿ, ಯಡಿಯೂರಪ್ಪ ಅವರನ್ನು ಕರೆಯಿಸಿದ್ದಾಗ ವಿಚಾರಣೆಗೆ ಹಾಜರಾಗಿದ್ದಾರೆ. ಅದನ್ನು ಬಿಟ್ಟು ಬೇಕಾಬಿಟ್ಟಿ ಮಾತನಾಡಿ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ಹರಿಹಾಯ್ದರು.ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಹಿಂದಿನ ಯಾವುದೋ ಪ್ರಕರಣದ ಎಫ್ಐಆರ್ ಇಟ್ಟುಕೊಂಡು ದ್ವೇಷದ ರಾಜಕಾರಣ ಮಾಡುತ್ತಿದೆ. ಎಲ್ಲರ ಮೇಲೂ ಎಫ್ಐಆರ್ ಮಾಡಿಸಿ ತೊಂದರೆ ಕೊಡುವುದು ಆರಂಭವಾಗಿದೆ. ಆ ಮೂಲಕ ಮುಡಾ ಹಗರಣದಲ್ಲಿ ಜನರ ಮನಸ್ಸು ಬೇರೆಡೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮೇಲೆ ನ್ಯಾಯಾಧೀಶರ ಸೂಚನೆ ಮೇಲೆ ಎಫ್ಐಆರ್ ಮಾಡಿದ್ದಾರೆ. ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ಪೊಲೀಸರು ಸತ್ಯ ಪರಿಶೀಲನೆ ಮಾಡದೆ ಎಫ್ಐಆರ್ ದಾಖಲಿಸಿದ್ದಾರೆ. ಕೇಂದ್ರ ಸಚಿವರ ಮೇಲೆ ಕ್ರಮ ಕೈಗೊಳ್ಳಬೇಕಾದರೆ ಪ್ರಾಸಿಕ್ಯೂಷನ್ ಅಗತ್ಯವಲ್ಲವೇ? ಎಲೆಕ್ಟ್ರೋಲ್ ಬಾಂಡ್ ದುಡ್ಡು ಕೊಟ್ಟವರು ಯಾರೂ ದೂರು ಕೊಟ್ಟಿಲ್ಲ. ಅವರೇನಾದರೂ ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ ಎಂದು ದೂರು ನೀಡಿದ್ದಾರೆಯೇ? ಎಲೆಕ್ಟ್ರೋಲ್ ಬಾಂಡ್ ಮೂಲಕ ಕಾಂಗ್ರೆಸ್ ಹಾಗೂ ಬೇರೆ ಬೇರೆ ಪಕ್ಷಗಳಿಗೂ ಹಣ ಹೋಗಿದೆ ಎಂದರು.
ವೈಯಕ್ತಿಕ ಹೇಳಿಕೆ
ವಿಭಾಗಿಸುವುದು ಒಳ್ಳೆಯದು