ಸಿಎಂ ಬದಲಾವಣೆಯಾಗ್ತಾರೆ ಅಂದ್ರೆ ನಾವೇನು ಹೇಳೋದು: ಸತೀಶ್‌ ಜಾರಕಿಹೊಳಿ

KannadaprabhaNewsNetwork |  
Published : Jun 18, 2025, 12:27 AM IST
17ಎಚ್‌ಪಿಟಿ-1 ಸತೀಶ್‌ ಜಾರಕಿಹೊಳಿ | Kannada Prabha

ಸಾರಾಂಶ

ನಮ್ಮದೇ ಸಚಿವ ಸ್ಥಾನ ಉಳಿಸಿಕೊಳ್ಳೋದು ಕಷ್ಟ ಆಗಿದೆ. ಇನ್ನು ಸಿಎಂ ಬದಲಾವಣೆಯಾಗ್ತಾರೆ ಅಂದ್ರೆ ನಾವೇನು ಹೇಳೋದು.

ನಾನೇ ಸಿಎಂರನ್ನು ಭೇಟಿ ಮಾಡಿಸ್ತೀನಿ ಕೇಳಿ ಎಂದ ಸಚಿವಕನ್ನಡಪ್ರಭ ವಾರ್ತೆ ಹೊಸಪೇಟೆ

ನಮ್ಮದೇ ಸಚಿವ ಸ್ಥಾನ ಉಳಿಸಿಕೊಳ್ಳೋದು ಕಷ್ಟ ಆಗಿದೆ. ಇನ್ನು ಸಿಎಂ ಬದಲಾವಣೆಯಾಗ್ತಾರೆ ಅಂದ್ರೆ ನಾವೇನು ಹೇಳೋದು, ನೀವು ಬೆಂಗಳೂರಿಗೆ ಬಂದ್ರೆ ನಾನೇ ಸಿಎಂ ಅವರನ್ನು ಭೇಟಿ ಮಾಡಿಸ್ತೀನಿ ಕೇಳಿ ಎಂದು ಮಾಧ್ಯಮದವರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಕುರಿತು ಬೆಂಗಳೂರಿಗೆ ಬಂದು ಕೇಳಿ, ಹೊಸಪೇಟೆಯಲ್ಲಿ ಕುಂತು ಹೇಳೋಕಾಗೋಲ್ಲ‌. ದಲಿತ ಸಚಿವರು‌, ಶಾಸಕರ ಸಭೆಯನ್ನ ಮುಂದೇನೂ ಮಾಡ್ತೀವಿ. ಈ ಸಭೆಗೂ ಸಿಎಂ ಬದಲಾವಣೆ ವಿಚಾರಕ್ಕೂ ಏನೂ ಸಂಬಂಧವಿಲ್ಲ. ಸಿಎಂ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮುಗಿದ ಅಧ್ಯಾಯ ಎಂದರು. ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ನಿರ್ಣಯ ಕೈಗೊಳ್ಳುತ್ತದೆ. ಸಚಿವ ಸಂಪುಟದ ವಿಷಯದ ಬಗ್ಗೆ ದಿಲ್ಲಿಯಲ್ಲಿ ಕೇಳಬೇಕಾಗುತ್ತದೆ ಎಂದು ಸೂಚ್ಯವಾಗಿ ಹೇಳಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಕೆಲವೊಂದು ಸಲ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿರುತ್ತಾರೆ. ಕೈ ಮೀರಿ ಒಮ್ಮೊಮ್ಮೆ ಘಟನೆಗಳು ನಡೆಯುತ್ತವೆ. ಕೂಡಲೇ ಪೊಲೀಸರು ಕೂಡ ಕ್ರಮ ಕೈಗೊಳ್ಳುತ್ತಾರೆ. ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣದ ಬಗ್ಗೆ ಈಗಾಗಲೇ ತನಿಖೆ ನಡಿಯುತ್ತಿದೆ. ವರದಿ ಬಂದ ಬಳಿಕ ಸರ್ಕಾರ ಕ್ರಮ ವಹಿಸುತ್ತದೆ. ಕಾಲ್ತುಳಿತ ಪ್ರಕರಣದ ಕುರಿತು ಬೆಂಗಳೂರು ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಇನ್ನೊಂದೆಡೆ ಸಿಐಡಿ ತನಿಖೆಯೂ ನಡಿಯುತ್ತಿದೆ. 15 ದಿನಗಳಲ್ಲಿ ವರದಿ ಬರಲಿದೆ. ಬಳಿಕ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಐಪಿಎಸ್ ಅಧಿಕಾರಿ ದಯಾನಂದ ಅವರನ್ನ ಮರು ನೇಮಕ ಮಾಡುವುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಣಯ ತೆಗೆದುಕೊಳ್ಳಲಿದ್ದಾರೆ ಎಂದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ