ನಕ್ಸಲರ ಬಂದೂಕುಗಳು ಏನಾದವು?: ಸರ್ಕಾರಕ್ಕೆ ಸುನಿಲ್‌ಕುಮಾರ್‌ ಪ್ರಶ್ನೆ

KannadaprabhaNewsNetwork |  
Published : Jan 11, 2025, 12:45 AM IST
ಸುನಿಲ್‌ | Kannada Prabha

ಸಾರಾಂಶ

ನಕ್ಸಲ್ ಶರಣಾಗತಿ ವಿಚಾರದಲ್ಲಿ ಬಿಜೆಪಿ ಪಕ್ಷದ ಕಾರ್ಯದರ್ಶಿ ಮಾಜಿ ಸಚಿವ ವಿ. ಸುನಿಲ್ ಕುಮಾರ್, ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಚಾರದಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಕಾರ್ಕಳ: ನಕ್ಸಲ್ ಶರಣಾಗತಿ ವಿಚಾರದಲ್ಲಿ ಬಿಜೆಪಿ ಪಕ್ಷದ ಕಾರ್ಯದರ್ಶಿ ಮಾಜಿ ಸಚಿವ ವಿ. ಸುನಿಲ್ ಕುಮಾರ್, ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಚಾರದಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.ನಕ್ಸಲ್ ಶರಣಾಗತಿ ವಿಚಾರದಲ್ಲಿ ಪ್ರಶ್ನೆಗಳಿವೆ, ಪ್ರಶ್ನಿಸುತ್ತೇವೆ. ಉತ್ತರಿಸಬೇಕಾದವರಿಗೆ ಉತ್ತರದಾಯಿತ್ವ ಇದೆ ಎಂದು ಭಾವಿಸಿದ್ದೇನೆ.

- ಮೊದಲನೆಯದಾಗಿ ಈ ನಕ್ಸಲ್ ಶರಣಾಗತಿ ಡ್ರಾಮಾ ಇಷ್ಟು ಕ್ಷಿಪ್ರವಾಗಿ ಅಂತ್ಯ ಕಂಡಿದ್ದು ಹೇಗೆ? ಇದ್ದಕ್ಕಿದ್ದಂತೆ ಸಿದ್ದರಾಮಯ್ಯ ಸ್ವಯಂ ಪ್ರೇರಿತವಾಗಿ ಕೊಟ್ಟ ಕರೆಗೆ ನಕ್ಸಲರು ಇಷ್ಟು ವೇಗವಾಗಿ ಸ್ಪಂದಿಸುತ್ತಾರೆಂದರೆ ಇದೊಂದು ಪೂರ್ವ ಯೋಜಿತ ಸ್ಟೇಜ್ ಶೋ ಅಲ್ಲವೇ?

- ನಕ್ಸಲರೇನೋ ಶರಣಾದರು, ಆದರೆ ಅವರ ಬಳಿ ಇದ್ದ ಬಂದೂಕುಗಳು ಏನಾದವು? ಶರಣಾಗತಿ ಪ್ರಕ್ರಿಯೆ ಎಂದರೆ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಬೇಕಲ್ಲವೇ? ಇಲ್ಲೇಕೆ ಈ ನಿಯಮ ಪಾಲಿಸಿಲ್ಲ?- ಹಾಗಾದರೆ ಈ ಶಸ್ತ್ರಾಸ್ತ್ರಗಳನ್ನು ಯಾರಿಗೆ ನೀಡಲಾಗಿದೆ? ಬೇಕಾಬಿಟಿ ಕಾಡಿನಲ್ಲಿ ಎಸೆದು ಬರಲು ಸಾಧ್ಯವಿಲ್ಲ. ಹಾಗಾದರೆ ಯಾವ ನಗರ ನಕ್ಸಲರ ಮನೆಯಲ್ಲಿ ಈ ಬಂದೂಕನ್ನು ಗುಬ್ಬಿಗೂಡು ಕಟ್ಟುವುದಕ್ಕೆ ಇಟ್ಟಿದ್ದೀರಿ?- ನಕ್ಸಲ್ ವಿಕ್ರಮ್ ಗೌಡ ಎನ್‌ಕೌಂಟರ್ ಬಗ್ಗೆ ಈಗ ಅನುಮಾನ ಹೆಚ್ಚಿದೆ. ಆತ ಶರಣಾಗತಿ ಪ್ಯಾಕೇಜ್ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ. ಹೀಗಾಗಿ ಶರಣಾಗತಿ ಪ್ರಹಸನದ ರುವಾರಿಗಳೇ ವಿಕ್ರಮ್ ಗೌಡನ ಇರುವಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿರಲೂಬಹುದಲ್ಲವೇ? ಹೀಗಾಗಿ ಈ ಬಗ್ಗೆ ತನಿಖೆ ಅನಿವಾರ್ಯ.-ಕರ್ನಾಟಕ ನಕ್ಸಲ್ ಚಳುವಳಿಯಿಂದ ಮುಕ್ತವಾಗಿದೆ ಎಂದು ಸರ್ಕಾರ ಯಾವ ಮಾನದಂಡದ ಆಧಾರದಿಂದ ಹೇಳುತ್ತಿದೆ? ಈ ಬಗ್ಗೆ ಎಎನ್‌ಎಫ್ ಕಮಾಂಡರ್ ಅಥವಾ ಪೊಲೀಸ್ ಮಹಾನಿರ್ದೇಶಕರು ಅಧಿಕೃತ ಘೋಷಣೆ ಮಾಡಬಲ್ಲರೇ?- ಅದೇ ರೀತಿ ಅರಣ್ಯದಂಚಿನ ನಿವಾಸಿಗಳ ಪುನರ್ವಸತಿಗೆ ರಾಜ್ಯ ಸರ್ಕಾರ ಇದುವರೆಗೆ ಎಷ್ಟು ಹಣ ಖರ್ಚು ಮಾಡಿದೆ ಎಂಬುದನ್ನೂ ಸ್ಪಷ್ಟಪಡಿಸಿ ಎಂದು ಕಾಂಗ್ರೆಸ್ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ