ರಾಜೀನಾಮೆ ಹಿಂಪಡೆಯಲು ಕಾರಣವೇನು? ಬಹಿರಂಗಪಡಿಸಿ: ಅನಿಲ್ ಪಸರ್ಗಿ

KannadaprabhaNewsNetwork |  
Published : Sep 22, 2026, 01:30 AM IST
ಚಿತ್ರ 21ಬಿಡಿಆರ್53 | Kannada Prabha

ಸಾರಾಂಶ

ಅಧಿಕಾರದ ಮೋಹ ನಮಗಿಲ್ಲ, ರೈತರು ಹಾಗೂ ಕಾರ್ಮಿಕರ ಪರವಾಗಿದ್ದೇವೆ ಎಂದು ಹೇಳಿಕೊಳ್ಳುವ ಮಾಜಿ ಸಚಿವ ರಾಜಶೇಖರ ಪಾಟೀಲ್ ಅವರು, ತಮ್ಮ ಪುತ್ರ ಅಭಿಷೇಕ ಪಾಟೀಲ್ ಅವರ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹಾಗೂ ಸದಸ್ಯತ್ವದ ರಾಜೀನಾಮೆಯನ್ನು ಏಕೆ ಹಿಂಪಡೆದಿದ್ದಾರೆ ಎಂಬುದನ್ನು ಕ್ಷೇತ್ರದ ಜನತೆಗೆ ಸ್ಪಷ್ಟಪಡಿಸಬೇಕೆಂದು ಬಿಜೆಪಿ ಮಂಡಲ ಅಧ್ಯಕ್ಷ ಅನಿಲ್ ಪಸರ್ಗಿ ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಹುಮನಾಬಾದ್

ಅಧಿಕಾರದ ಮೋಹ ನಮಗಿಲ್ಲ, ರೈತರು ಹಾಗೂ ಕಾರ್ಮಿಕರ ಪರವಾಗಿದ್ದೇವೆ ಎಂದು ಹೇಳಿಕೊಳ್ಳುವ ಮಾಜಿ ಸಚಿವ ರಾಜಶೇಖರ ಪಾಟೀಲ್ ಅವರು, ತಮ್ಮ ಪುತ್ರ ಅಭಿಷೇಕ ಪಾಟೀಲ್ ಅವರ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹಾಗೂ ಸದಸ್ಯತ್ವದ ರಾಜೀನಾಮೆಯನ್ನು ಏಕೆ ಹಿಂಪಡೆದಿದ್ದಾರೆ ಎಂಬುದನ್ನು ಕ್ಷೇತ್ರದ ಜನತೆಗೆ ಸ್ಪಷ್ಟಪಡಿಸಬೇಕೆಂದು ಬಿಜೆಪಿ ಮಂಡಲ ಅಧ್ಯಕ್ಷ ಅನಿಲ್ ಪಸರ್ಗಿ ಆಗ್ರಹಿಸಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಮಂಡಲ ವತಿಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಂದರ್ಭದಲ್ಲಿ ವ್ಯಾಪಕ ಪ್ರಚಾರ ಪಡೆದುಕೊಂಡಿದ್ದರು. ಆದರೆ ಇದೀಗ ರಾಜೀನಾಮೆ ಹಿಂಪಡೆಯುವ ಮೂಲಕ ಅಧಿಕಾರದ ಮೇಲಿನ ಆಸೆಯನ್ನು ತೋರಿಸಿದ್ದಾರೆ ಎಂದು ಆರೋಪಿಸಿದರು.

ರೈತರ ಹಿತದ ಹೆಸರಿನಲ್ಲಿ ರಾಜೀನಾಮೆ ನೀಡಿದ್ದರೆ, ಅದನ್ನು ಹಿಂಪಡೆಯಲು ಕಾರಣವೇನು ಎಂಬುದನ್ನು ಬಹಿರಂಗಪಡಿಸಬೇಕು. ಈ ವಿಚಾರದಲ್ಲಿ ರೈತರು ಹಾಗೂ ಕ್ಷೇತ್ರದ ಜನರಿಗೆ ಸ್ಪಷ್ಟ ಮಾಹಿತಿ ನೀಡುವ ಜವಾಬ್ದಾರಿ ಮಾಜಿ ಸಚಿವರ ಮೇಲಿದೆ ಎಂದರು.

ಕಾರ್ಖಾನೆ ಆರಂಭವಾಗದಿರುವುದರಿಂದ ಕಾರ್ಮಿಕರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮಕ್ಕಳ ಶಾಲಾ ಶುಲ್ಕ ಕಟ್ಟಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ ಅವರು, ಕಾರ್ಖಾನೆ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಯೇ ತಮ್ಮ ಗುರಿಯಾಗಿದೆ.

ಕ್ಷೇತ್ರದ ಪ್ರಮುಖ ಸಮಸ್ಯೆಗಳ ಕುರಿತು ಧ್ವನಿ ಎತ್ತಲು ಶಾಸಕ ಡಾ.ಸಿದ್ದು ಪಾಟೀಲ್ ಅವರನ್ನು ಕ್ಷೇತ್ರದ ಜನತೆ ಆಯ್ಕೆ ಮಾಡಿದ್ದಾರೆ. ಜನರ ಋಣ ತೀರಿಸುವ ನಿಟ್ಟಿನಲ್ಲಿ ಯಾವುದೇ ಹಿಂಜರಿಕೆಯಿಲ್ಲದೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೆ ಮಾಜಿ ಸಚಿವರು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ. ತಮ್ಮದೇ ಸರ್ಕಾರ ಹಾಗೂ ಅಧಿಕಾರಿಗಳು ಇರುವುದರಿಂದ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಅನುಮಾನವಿದ್ದರೆ ಪರಿಶೀಲನೆ ನಡೆಸಿ, ಲೋಪ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನುಬದ್ಧವಾಗಿ ದೂರು ನೀಡಲಿ. ಅದನ್ನು ಬಿಟ್ಟು ಜನರಲ್ಲಿ ಗೊಂದಲ ಮೂಡಿಸುವ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷಕ್ಕಾಗಿ ಹಗಲಿರುಳು ದುಡಿಯುತ್ತಿರುವ ಕಾರ್ಯಕರ್ತರಿಗೆ ನಾಮನಿರ್ದೇಶನ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲೆ ಚರ್ಚೆ ನಡೆಯುತ್ತಿದೆ. ಹಿಂದೆ ಸುಭಾಷ ಕಲ್ಲೂರ ಅವರು ಶಾಸಕರಾಗಿದ್ದ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಹಿಡಿದು ಜಿಲ್ಲಾ ಮಟ್ಟದ ವಿವಿಧ ಸಂಸ್ಥೆಗಳವರೆಗೆ 86 ನಾಮನಿರ್ದೇಶನಗಳನ್ನು ಮಾಡಲಾಗಿತ್ತು. ಆದರೆ ಈಗ ಕೆಲವರಿಗೆ ಮಾತ್ರ ನಾಮನಿರ್ದೇಶನ ಮಾಡಲಾಗಿದೆ ಎಂದು ಅವರು ಆರೋಪಿಸಿದರು.

ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಮೋಹಳೆ, ರವಿ ಹೊಸಳ್ಳಿ, ಪುರಸಭೆ ಸದಸ್ಯ ರಮೇಶ ಕಲ್ಲೂರ, ಸಂತೋಷ ಸಂಗಮ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಡ್ಡಾಯ..ವೈಜ್ಞಾನಿಕ ಪ್ರಸ್ತಾವನೆ ಸಲ್ಲಿಕೆಯಲ್ಲಿ ರಾಜ್ಯ ಹಿಂದೆ: ಡಾ.ಧನಂಜಯ ಸರ್ಜಿ
ನವೀನ ಮಾದರಿಯ ಕೃಷಿ ಪದ್ಧತಿಯಿಂದ ಹೆಚ್ಚು ಲಾಭ: ಡಾ. ತುಷಾರ್ ಕಾಂತಿ ಬೆಹರಾ