ಕನ್ನಡಪ್ರಭ ವಾರ್ತೆ ಕೋಲಾರ
ಅವರು ಪತ್ರಿಕಾ ಹೇಳಿಕೆಯಲ್ಲಿ, ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ ಪಕ್ಷವು ಡಾ. ಅಂಬೇಡ್ಕರ್ ಅವರನ್ನು ನಿರಂತರವಾಗಿ ಅವಮಾನಿಸುತ್ತಾ ಬಂದಿದೆ ಎಂಬುದು ಇಡೀ ದೇಶದ ಜನತೆಗೆ ಗೊತ್ತಿರುವ ವಿಚಾರವಾಗಿದೆ. ಅಂಬೇಡ್ಕರ್‌ರನ್ನು ಚುನಾವಣೆಯಲ್ಲಿ ಸೋಲಿಸಿದ್ದು, ಪಂಡಿತ್ ನೆಹರು ನೇತೃತ್ವದ ಕಾಂಗ್ರೆಸ್ ಪಕ್ಷವೇ. ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿ ನೀಡಲು ಬಿಜೆಪಿ ಬೆಂಬಲಿತ ಸರ್ಕಾರ ಅಧಿಕಾರಕ್ಕೆ ಬರಬೇಕಾಯಿತು. ಈ ಐತಿಹಾಸಿಕ ಸತ್ಯವನ್ನು ಕಾಂಗ್ರೆಸ್ಸಿಗರು ಮೊದಲು ಅರ್ಥಮಾಡಿಕೊಳ್ಳಬೇಕು ಎಂದು ಕೆಂಬೋಡಿ ನಾರಾಯಣ ಸ್ವಾಮಿ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿರುವ ಕೆಲವು ದಲಿತ ಮುಖಂಡರು ಅಂಬೇಡ್ಕರ್ ಹೆಸರನ್ನು ಕೇವಲ ದಲಿತ ಪ್ಲೇ ಕಾರ್ಡ್ ನಂತೆ ಬಳಸಿಕೊಳ್ಳುತ್ತಿದ್ದಾರೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಂದ ಹಿಡಿದು ರಾಜ್ಯ ಮತ್ತು ಜಿಲ್ಲಾ ಮಟ್ಟದವರೆಗಿನ ನಾಯಕರು ಅಂಬೇಡ್ಕರ್ ಅವರಿಗೆ ಆಗುತ್ತಿರುವ ಅವಮಾನದ ಬಗ್ಗೆ ಎಂದಿಗೂ ಬಹಿರಂಗವಾಗಿ ಧ್ವನಿ ಎತ್ತಲಿಲ್ಲ. ಇದು ದೇಶದ ಬಡ ದಲಿತ ಸಮುದಾಯಕ್ಕೆ ಮಾಡಿದ ಅವಮಾನವಲ್ಲವೇ ಎಂದು ಪ್ರಶ್ನಿಸಿದ್ದಾರೆ.ಇಂದು ಜಿಲ್ಲೆಯಲ್ಲಿ ಕೆಲವು ಮುಖಂಡರು ಭ್ರಷ್ಟಾಚಾರ ಆರೋಪದಲ್ಲಿರುವ ಮಾಜಿ ಸಚಿವರ ಪರವಾಗಿ ದಲಿತ ಕಾರ್ಡ್ ಬಳಸಿಕೊಂಡು ಹೋರಾಟ ಮಾಡುತ್ತಿರುವುದು ಸಂವಿಧಾನ ರಚಿಸಿದ ಅಂಬೇಡ್ಕರ್‌ರಿಗೆ ಮಾಡುವ ದ್ರೋಹವಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.