ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಯಡಿಯೂರಪ್ಪ ಮೇಲೆ ಪೋಕ್ಸೊ ಕೇಸ್ ನಡೆಯುತ್ತಿದೆ. ವಿಜಯೇಂದ್ರ ಮೇಲೂ ಕೇಸ್ ಇದೆ, ಹೀಗಿರುವಾಗ ಅವರಿಗೆ ಪಾದಯಾತ್ರೆ ನಡೆಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಅವರು ಕಳೆದುಕೊಂಡ ಭೂಮಿಯನ್ನು ವಾಪಸ್ ಪಡೆದಿದ್ದಾರೆ ಅಷ್ಟೇ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕಾನೂನಿನಡಿ ತಪ್ಪು ತೋರಿಸಲಿ. ಅಧಿಕಾರ ದುರುಪಯೋಗದ ಬಗ್ಗೆ ತೋರಿಸಲಿ ನೋಡೋಣ ಎಂದರು.ಪಾದಯಾತ್ರೆ ಮಾಡಲು ಅಧಿಕೃತವಾಗಿ ಅನುಮತಿ ನೀಡಲು ಸಹಜವಾಗಿ ಆಗುವುದಿಲ್ಲ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರಿಗೆ ಅವಕಾಶ ಇದೆ. ಹಾಗಾಗಿ ನಿರ್ಬಂಧ ವಿಧಿಸಿ ಪಾದಯಾತ್ರೆಗೆ ಅವಕಾಶ ಕೊಡಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.ಕೇಂದ್ರ ಸರ್ಕಾರ ಐಟಿ, ಇಡಿ ಎಲ್ಲವನ್ನೂ ದುರುಪಯೋಗಪಡಿಸಿಕೊಳ್ಳುತ್ತಿದೆ. ಏನಾದರೂ ಮಾಡಿ ಸರ್ಕಾರ ಉರುಳಿಸಲು ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ಶೇ.95ರಷ್ಟು ಇಡಿ, ಐಟಿ ದಾಳಿಗಳು ವಿರೋಧ ಪಕ್ಷದ ಮೇಲೆಯೇ ಆಗಿವೆ. ಈಗ ಸಿಎಂ ಸಿದ್ದರಾಮಯ್ಯ ಅವರನ್ನು ಹೇಗಾದರೂ ಮಾಡಿ ಜೈಲಿಗೆ ಹಾಕಬೇಕೆಂದು ಇಷ್ಟೆಲ್ಲ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮಳೆಹಾನಿ ಪರಿಹಾರ ವಿಚಾರದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್, ಅಶೋಕ್ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ರಾಜ್ಯ ಹಾಗೂ ಕೇಂದ್ರದ ಪರಿಹಾರ ಸೇರಿಸಿ ಹಾನಿಯಾದ ಮನೆಗಳಿಗೆ 50 ಸಾವಿರ ರು. ನೀಡುತ್ತಿದ್ದೇವೆ. ಬಿಜೆಪಿಯವರು ಹಿಂದೆ ಕೊಟ್ಟ 5 ಲಕ್ಷ ರು. ಯೋಜನೆಯಲ್ಲಿ ಭಾರೀ ಅವ್ಯವಹಾರ ಆಗಿದೆ. ಕೆಲವರು ಸಣ್ಣಪುಟ್ಟ ಹಾನಿಗೆ 5 ಲಕ್ಷ ರು. ಪರಿಹಾರ ಪಡೆದಿದ್ದಾರೆ. ನಮ್ಮ ಸರ್ಕಾರ ಆ ಯೋಜನೆ ತೆಗೆದು ಬೇರೆ ಯೋಜನೆ ತಂದಿದ್ದೇವೆ. ಆರ್.ಅಶೋಕ್ ಗೆ ಅದೆಲ್ಲಾ ಗೊತ್ತಿಲ್ಲ ಅನಿಸುತ್ತದೆ ಎಂದು ಲೇವಡಿ ಮಾಡಿದರು.