ಕನ್ನಡಪ್ರಭ ವಾರ್ತೆ ಮೈಸೂರು
ಹಸಿವು ಮುಕ್ತ ಕರ್ನಾಟಕದ ಉದ್ದೇಶದಿಂದ ಜಾರಿಗೊಳಿಸಿದ್ದ ಅನ್ನಭಾಗ್ಯ ಯೋಜನೆಗೆ ಹೆಚ್ಚಿನ ಹಣ ನೀಡಿ ಕೊಂಡುಕೊಳ್ಳುತ್ತೇವೆ ಎಂದಾಗಲೂ ಕೇಂದ್ರದಿಂದ ಅಕ್ಕಿ ನೀಡದವರು, ಈ ದಿನ ಧರ್ಮದ ಹೆಸರಲ್ಲಿ ಅಕ್ಷತೆಯ ಗಂಟನ್ನು ಮನೆ ಮನೆಗೆ ಕಳಿಸುತ್ತಿರುವುದನ್ನು ನೋಡಿದರೆ ಇವರಿಗೆ ಧರ್ಮದ ನೈಜ ಜವಾಬ್ದಾರಿಯ ಬಗ್ಗೆ ತಿಳುವಳಿಕೆ ಇಲ್ಲ ಎಂಬುದು ಸ್ಪಷ್ಟವಾಗಿ ಕಾಣುತ್ತದೆ ಎಂದು ಅವರು ಕಿಡಿಕಾರಿದ್ದಾರೆ.
ಬಡವರ ಹಸಿವಿಗೆ ನೀಡುವ ಅನ್ನದ ವಿಷಯದಲ್ಲೂ ರಾಜಕೀಯ ಮಾಡುವಂತಹ ಅಮಾನವೀಯ ಪ್ರವೃತ್ತಿ ತೋರಿದ ಬಿಜೆಪಿಗರು ಧರ್ಮದ ಕುರಿತಂತೆ ಮಾತನಾಡುತ್ತಿದ್ದರೆ, ಅದನ್ನು ಕಂಡು ನಗಬೇಕೋ ಅಳಬೇಕೋ ಎಂದು ನನಗೆ ತಿಳಿಯುತ್ತಿಲ್ಲ ಎಂದು ಅವರು ವ್ಯಂಗ್ಯವಾಡಿದ್ದಾರೆ.ಗೇರಮರಡಿ ಘಟನೆ ಸಮಾನತೆ ಮತ್ತು ಭ್ರಾತೃತ್ವಕ್ಕೆ ವಿರುದ್ಧ:
ಶೂಗಳನ್ನೇ ಕೊಂಡುಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಎದುರಿಸುತ್ತಿರುವ ಬಡ ವರ್ಗದ ಜನರು ಇರುವ ಸಮುದಾಯಗಳಲ್ಲೇ ಶಾಲಾ ಶೂಗಳನ್ನು ಧರಿಸಿ ನಡೆಯುವುದು ಮೈಲಿಗೆಗೆ ಕಾರಣವಾಗುತ್ತದೆ ಎಂಬ ಸಂಗತಿಯು ತಲೆ ತಗ್ಗಿಸುವಂತದ್ದು.
ಬಾಬಾ ಸಾಹೇಬರು ಹೇಳಿದಂತೆ ನಮ್ಮ ಜನರು ಅದರಲ್ಲೂ ಮುಖ್ಯವಾಗಿ ಯುವಕರು ಮೌಢ್ಯತೆಯಿಂದ ಹೊರಬಂದು, ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಶಿಕ್ಷಣ ಪಡೆದು ಉತ್ತಮ ರೀತಿಯಲ್ಲಿ ಬೆಳವಣಿಗೆ ಹೊಂದುವತ್ತ ಗಮನಹರಿಸಬೇಕು.
ಇನ್ನು ಮುಂದೆ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಇಂತಹ ಅಸ್ಪೃಶ್ಯತಾ ಆಚರಣೆ ಘಟನೆಗಳು ತಲೆದೋರದಂತೆ ನಮ್ಮ ಅಧಿಕಾರಿ ವರ್ಗವು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಸರ್ಕಾರವೂ ಈ ಕುರಿತಂತೆ ಅಗತ್ಯವಾದ ಅರಿವು ಮೂಡಿಸುವ ಕೆಲಸ ಮಾಡಲಿದೆ ಎಂದು ಈ ಮೂಲಕ ಅಧಿಕಾರಿಗಳಿಗೆ ಸೂಚಿಸುತ್ತೇನೆ ಮತ್ತು ಸಮಾನ ಸಮಾಜದತ ನಿರ್ಮಾಣದ ಆಶಯವನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.