ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಕೋಟೆಬೆಟ್ಟದ ಶ್ರೀಕಂಬದನರಸಿಂಹಸ್ವಾಮಿ ದೇವಾಲಯದ ಬಳಿ ಪ್ರವಾಸೋದ್ಯಮ ಇಲಾಖೆಯ 2 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ಯಾತ್ರಿ ನಿವಾಸ ಕಟ್ಟಡ ಉದ್ಘಾಟಿಸಿ ಮಾತನಾಡಿ, ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕೋಟಬೆಟ್ಟವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಭಕ್ತರಿಗೆ ಅನುಕೂಲ ಮಾಡಿಕೊಡಬೇಕೆಂಬುದು ನನ್ನ ಕನಸಾಗಿತ್ತು ಎಂದರು.
ಅದಕ್ಕಾಗಿಯೇ ಕಳೆದ 2016ರಲ್ಲಿ ನಾನು ಶಾಸಕನಾಗಿದ್ದ ಅವಧಿಯಲ್ಲಿ ಯಾತ್ರಿ ನಿವಾಸ ಕಟ್ಟಡಕ್ಕೆ ಸೇರಿದಂತೆ ತಾಲೂಕಿನ ಕೆ.ಮಲ್ಲೇನಹಳ್ಳಿ, ಬೋಗಾದಿ, ಹುಲಿಕೆರೆ ಹಾಗೂ ತುಪ್ಪದಮಡು ಸಮೀಪ ವಿದ್ಯಾರ್ಥಿ ನಿಲಯಗಳಿಗೂ ಶಂಕುಸ್ಥಾಪನೆ ನೆರವೇರಿಸಲಾಗಿತ್ತು ಎಂದರು.ಕಳೆದ 5 ವರ್ಷದಲ್ಲಿ ಹೊಸ ಕಟ್ಟಡಗಳನ್ನು ಮಂಜೂರು ಮಾಡಿಸುವುದಿರಲಿ, ನಾನು ಶಂಕುಸ್ಥಾಪನೆ ಮಾಡಿದ್ದ ಕಟ್ಟಡಗಳಲ್ಲಿ ಬಾಕಿ ಉಳಿದಿದ್ದ ಸಣ್ಣ ಪುಟ್ಟ ಕೆಲಸಗಳಿಗೆ ಕೊರತೆಯಿದ್ದ ಅನುದಾನ ಮಂಜೂರು ಮಾಡಿಸಿ ಅವುಗಳನ್ನು ಉದ್ಘಾಟಿಸಲು ಅಂದಿನ ಶಾಸಕರಿಗೆ ಆಗಿಲ್ಲ. ಅಂದು ಎಚ್.ಡಿ.ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿದ್ದರೂ ಕೂಡ ಕೋಟೆಬೆಟ್ಟದ ಯಾತ್ರಿ ನಿವಾಸ ಕಟ್ಟಡದ ಕಾಂಪೌಂಡ್‌ಗೆ ಅನುದಾನ ನೀಡಲಿಲ್ಲ ಎಂದು ಕುಟುಕಿದರು.
ದೇವಲಾಪುರ ಹೋಬಳಿಯ ಹಲವು ರಸ್ತೆ ಅಭಿವೃದ್ಧಿಗೆ 30 ಕೋಟಿ ರು. ಅನುದಾನ ಮಂಜೂರು ಮಾಡಿಸಿದ್ದೇನೆ. ಇನ್ನೂ 100 ಕೋಟಿ ಕೊಟ್ಟರೂ ಹಾಳಾಗಿರುವ ರಸ್ತೆಗಳನ್ನು ತಕ್ಷಣಕ್ಕೆ ಅಭಿವೃದ್ಧಿ ಪಡಿಸಲು ಆಗುವುದಿಲ್ಲ. ಹಾಗಾಗಿ ಹಂತ ಹಂತವಾಗಿ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಅಗತ್ಯ ಕ್ರಮವಹಿಸಲಾಗುವುದು. ತಾಲೂಕಿನ ಜನರು ಯಾರ ಅವಧಿಯಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯುತ್ತವೆ ಎಂಬುದನ್ನು ಅರ್ಥೈಸಿಕೊಳ್ಳಬೇಕು ಎಂದರು.
ಈ ವೇಳೆ ತಹಸೀಲ್ದಾರ್ ಜಿ.ಆದರ್ಶ, ತಾಪಂ ಇಒ ಸತೀಶ್, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ರಾಘವೇಂದ್ರ, ಕೆಆರ್‌ಐಡಿಎಲ್ ಇಇ ಸೋಮಶೇಖರ್, ಎಇಇ ಚೈತ್ರ, ಎಇಗಳಾದ ಶರತ್, ರೇಖೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ವಿ.ದಿನೇಶ್, ಪುರಸಭೆ ಸದಸ್ಯ ಸಂಪತ್‌ಕುಮಾರ್, ನರಸಿಂಹಮೂರ್ತಿ ಸೇರಿದಂತೆ ಹಲವರು ಇದ್ದರು.