ಹುಬ್ಬಳ್ಳಿ: ಕಾಂಗ್ರೆಸ್ ಅಧಿಕಾರವಿರುವ ಎಲ್ಲೆಡೆಯೂ ಮತಾಂಧ ಶಕ್ತಿಗಳು ಹಾಗೂ ದೇಶದ್ರೋಹಿಗಳಿಗೆ ವಿಶೇಷ ಶಕ್ತಿ ಬರುತ್ತದೆ. ಇದಕ್ಕೆ ಕಾಂಗ್ರೆಸ್ಸಿನ ತುಷ್ಟೀಕರಣ ನೀತಿಯೇ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ಕೇಂದ್ರದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ತಾವೆಂದೂ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಕಾಂಗ್ರೆಸ್ಸಿಗರಿಗೆ ಮನವರಿಕೆಯಾಗಿದೆ. ಹಾಗಾಗಿ ಕೇಂದ್ರ ಸರ್ಕಾರದ ಎಲ್ಲ ನಿರ್ಣಯಗಳನ್ನು ವಿರೋಧಿಸುತ್ತ ಬರುತ್ತಿದ್ದಾರೆ. ಮುಂದೆಯೂ ಅಧಿಕಾರಕ್ಕೆ ಬರುವುದು ಅಸಾಧ್ಯ ಎಂಬ ಹತಾಶೆಯಲ್ಲಿ ಕಾಂಗ್ರೆಸ್ ಒಂದು ದೇಶ- ಒಂದು ಚುನಾವಣೆಗೆ ವಿರೋಧಿಸುತ್ತಿದೆ ಎಂದು ಟೀಕಿಸಿದರು.
ಎಚ್ಚರಿಕೆಯಿಂದ ಮಾತನಾಡಿದಾವಣಗೆರೆಯ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಹಿಂದುಗಳ ಕೊಲೆ ಸಂಚು ರೂಪಿಸಲಾಗಿತ್ತು ಎಂಬ ವಿಚಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಟಿಯಲ್ಲಿಯೇ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿಗಳು ಈ ವಿಷಯದಲ್ಲಿ ಎಚ್ಚರಿಕೆಯಿಂದ ಮಾತನಾಡಬೇಕು. ನಾಗಮಂಗಲ ಗಲಾಟೆಯಲ್ಲಿ ಪಿಎಫ್‌ಐ ಸಂಘಟನೆಗಳು ಪೂರ್ವ ತಯಾರಿ ಮಾಡಿಕೊಂಡಿರುವುದು ಈಗ ಎಲ್ಲೆಡೆ ಬೆಳಕಿಗೆ ಬಂದಿದೆ. ಹಿಂದುಗಳ ಅಂಗಡಿಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಒಂದೇ ದಿನಕ್ಕೆ ಈ ರೀತಿ ದಾಳಿ ಮಾಡಲು ಆಗುತ್ತದೆಯೇ ಎಂದು ಪ್ರಶ್ನಿಸಿದರು. ಇದೊಂದು ಅತ್ಯಂತ ತುಷ್ಟೀಕರಣ ನೀತಿ ಎಂದು ಹರಿಹಾಯ್ದರು.