ಪುತ್ತೂರು : ಧರ್ಮದ ಸಾರವನ್ನು ಅರ್ಥ ಮಾಡಿಕೊಂಡಾಗ ಮನುಷ್ಯ ಮನುಷ್ಯನ ನಡುವೆ ಭೇದ ಹುಟ್ಟಲು ಸಾಧ್ಯವಿಲ್ಲ ಎಂದು ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥ ಲೋಹಿತ್ ಎಸ್.ಕೆ. ಹೇಳಿದರು.ಅವರು ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ನೇತೃತ್ವದಲ್ಲಿ ಇಲ್ಲಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಶುಕ್ರವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ೧೭೨ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.
ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಅಧ್ಯಕ್ಷತೆ ವಹಿಸಿದ್ದರು.ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಸದಸ್ಯ ಮೋಹನ್ ತೆಂಕಿಲ ಪ್ರಾರ್ಥಿಸಿದರು. ಬಿಲ್ಲವ ಸಂಘದ ಉಪಾಧ್ಯಕ್ಷ ಚಿದಾನಂದ ಸುವರ್ಣ ಗೆಣಸಿನಕುಮೇರು ಸ್ವಾಗತಿಸಿದರು. ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ಪುಷ್ಪಾವತಿ ಕೇಕುಡೆ, ಬಿಲ್ಲವ ಸಂಘದ ಜೊತೆ ಕಾರ್ಯದರ್ಶಿ ಪುರುಷೋತ್ತಮ ಬರೆಂಬೆಟ್ಟು, ಕೋಶಾಧಿಕಾರಿ ಜನಾರ್ದನ ಪೂಜಾರಿ ಪದಡ್ಕ, ಮಾಜಿ ಉಪಾಧ್ಯಕ್ಷ ವೇದನಾಥ ಸುವರ್ಣ ಅತಿಥಿಗಳನ್ನು ಗೌರವಿಸಿದರು. ಸಂತೋಷ್ ಕುಮಾರ್ ಮರಕ್ಕಡ ಹಾಗೂ ದೇವಿಕಾ ಬನ್ನೂರು ಕಾರ್ಯಕ್ರಮ ನಿರೂಪಿಸಿದರು.
ಧಾರ್ಮಿಕ ಕಾರ್ಯಕ್ರಮ: ಬ್ರಹ್ಮಶ್ರೀ ನಾರಾಯಣ ಗುರುಗಳ ೧೭೨ನೇ ಜನ್ಮ ದಿನಾಚರಣೆ ಅಂಗವಾಗಿ ಗುರು ಮಂದಿರದಲ್ಲಿ ಬೆಳಗ್ಗೆ ಪ್ರಾರ್ಥನೆ, ಗಣಹೋಮ, ಪಂಚಾಮೃತ ಅಭಿಷೇಕ, ಗುರು ಪೂಜೆ, ಮಧ್ಯಾಹ್ನ ಮಹಾಪೂಜೆ ಕಾರ್ಯಕ್ರಮಗಳು ನವೀನ್ ಶಾಂತಿ ಅಡ್ಯಾಲು ಅವರ ಪೌರೋಹಿತ್ಯದಲ್ಲಿ ನಡೆಯಿತು.