ಉದ್ದೇಶ ಸರಿ ಇದ್ದಾಗ ಉನ್ನತ ಅವಕಾಶಗಳು ಹುಡುಕಿಕೊಂಡು ಬರುತ್ತವೆ: ಮುಲ್ಲೈ ಮುಗಿಲನ್

KannadaprabhaNewsNetwork |  
Published : Feb 08, 2025, 12:32 AM IST
ಫೋಟೋ: ೭ಪಿಟಿಆರ್-ಬೀಳ್ಕೊಡುಗೆಪದೋನ್ನತಿಯಾಗಿ ವರ್ಗಾವಣೆಗೊಂಡ ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಅವರನ್ನು ಬೀಳ್ಕೊಡಲಾಯಿತು. | Kannada Prabha

ಸಾರಾಂಶ

ಪುತ್ತೂರು ಉಪವಿಭಾಗಾಧಿಕಾರಿಯಾಗಿ ೧೩ ತಿಂಗಳು ಕರ್ತವ್ಯ ನಿರ್ವಹಿಸಿ ರಾಯಚೂರು ಮಹಾನಗರಪಾಲಿಕೆ ಡೆಪ್ಯೂಟಿ ಕಮಿಷನರ್ ಆಗಿ ವರ್ಗಾವಣೆಗೊಂಡಿರುವ ಜುಬಿನ್ ಮೊಹಪಾತ್ರ ಅವರಿಗೆ ಪುತ್ತೂರು ಉಪವಿಭಾಗ ಮಟ್ಟದಿಂದ ನಗರದ ಸರ್ಕಾರಿ ನೌಕರರ ಸಭಾಭವನದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಪುತ್ತೂರು

ಯುವ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ ಅವರು ಉತ್ತಮ ಮನುಷ್ಯತ್ವ ಹಾಗೂ ಒಳ್ಳೆಯ ದೃಷ್ಟಿಕೋನ ಹೊಂದಿರುವ ವ್ಯಕ್ತಿಯಾಗಿದ್ದು, ಬಡವರ ಹಾಗೂ ಸಮಾಜದ ಬಗ್ಗೆ ಅತೀವ ಕಾಳಜಿ ಹೊಂದಿರುವ ಮತ್ತು ಅತ್ಯಂತ ಕ್ರಿಯಾಶೀಲ ಅಧಿಕಾರಿಯಾಗಿದ್ದಾರೆ. ಉದ್ದೇಶ ಸರಿ ಇದ್ದಾಗ ಉನ್ನತ ಅವಕಾಶಗಳೂ ಹುಡುಕಿಕೊಂಡು ಬರುತ್ತವೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.ಪುತ್ತೂರು ಉಪವಿಭಾಗಾಧಿಕಾರಿಯಾಗಿ ೧೩ ತಿಂಗಳು ಕರ್ತವ್ಯ ನಿರ್ವಹಿಸಿ ರಾಯಚೂರು ಮಹಾನಗರಪಾಲಿಕೆ ಡೆಪ್ಯೂಟಿ ಕಮಿಷನರ್ ಆಗಿ ವರ್ಗಾವಣೆಗೊಂಡಿರುವ ಜುಬಿನ್ ಮೊಹಪಾತ್ರ ಅವರಿಗೆ ಪುತ್ತೂರು ಉಪವಿಭಾಗ ಮಟ್ಟದಿಂದ ನಗರದ ಸರ್ಕಾರಿ ನೌಕರರ ಸಭಾಭವನದಲ್ಲಿ ಹಮ್ಮಿಕೊಳ್ಳಲಾದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಪುತ್ತೂರು ಉಪವಿಭಾಗಕ್ಕೆ ದೊಡ್ಡ ಇತಿಹಾಸವಿದೆ. ಇಲ್ಲಿ ಕರ್ತವ್ಯ ನಿರ್ವಹಿಸಿದ ಹಿರಿಯ ಅಧಿಕಾರಿಗಳು ಪುತ್ತೂರನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ. ಜುಬಿನ್ ಅವರು ಪ್ರೊಬೆಷನರಿ ಸೇವೆಯ ಸಂದರ್ಭದಲ್ಲಿ ಉತ್ತರ ಕನ್ನಡದಲ್ಲಿ ನನ್ನ ಜತೆ ಕೆಲಸ ಮಾಡಿದ್ದಾರೆ. ಆ ಅವಧಿಯಲ್ಲಿಯೇ ೫ ಸಾಧನಾ ಪ್ರಶಸ್ತಿ ಪಡೆದುಕೊಂಡಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಅಭಿನಂದನೆ ಸ್ವೀಕರಿಸಿ ಮಾತನಾಡಿದ ಜುಬಿನ್ ಮೊಹಪಾತ್ರ, ಕಂದಾಯ ಹಾಗೂ ಪೊಲೀಸ್ ಇಲಾಖೆ ಸಮರ್ಪಕವಾಗಿ ಕೆಲಸ ಮಾಡಿದರೆ ಜನರಿಗೆ ಬಹಳಷ್ಟು ಪ್ರಯೋಜನವಾಗುತ್ತದೆ. ಕೆಲವೊಂದು ಬಾರಿ ಮಿತಿಯನ್ನು ಮೀರಿ ಹೋದಾಗ ಮಾತ್ರ ಪ್ರಯೋಜನವಾಗುತ್ತದೆ. ಪುತ್ತೂರಿನಲ್ಲಿ ಆದ ಮೊದಲ ಪೋಸ್ಟಿಂಗ್ ವಿಶೇಷವಾಗಿದೆ ಮತ್ತು ನೆನಪಿನಲ್ಲಿ ಇಟ್ಟುಕೊಳ್ಳುವಂತದ್ದಾಗಿದೆ ಎಂದರು.

ಪುತ್ತೂರು ಕಂದಾಯ ಇಲಾಖೆಯ ಅಧಿಕಾರಿಗಳಾದ ಚಂದ್ರಶೇಖರ್, ಚಂದ್ರ ನಾಯ್ಕ್, ನರಿಯಪ್ಪ, ಸುಲೋಚನಾ ಮೊದಲಾದವರು ಅನುಭವ ಹಂಚಿಕೊಂಡರು. ಉಪವಿಭಾಗದ ಅಧಿಕಾರಿಗಳು, ಸಿಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ವೇದಿಕೆಯಲ್ಲಿ ಜುಬಿನ್ ಅವರ ಸಹಪಾಠಿ ಕೇರಳದ ಪ್ರೊಬೆಷನರಿ ಐಎಎಸ್ ಅಧಿಕಾರಿ ಸಾಯಿಕೃಷ್ಣ, ಪುತ್ತೂರು ಪ್ರೊಬೆಷನರಿ ಉಪವಿಭಾಗಾಧಿಕಾರಿ ಶ್ರವಣ್ ಕುಮಾರ್, ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕ್, ಕಡಬ ತಹಸೀಲ್ದಾರ್ ಪ್ರಭಾಕರ ಖುಜೂರೆ, ಸುಳ್ಯ ತಹಸೀಲ್ದಾರ್ ಮಂಜುಳಾ, ಭೂಮಾಪನಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ಉಪಸ್ಥಿತರಿದ್ದರು.ಪುತ್ತೂರು ತಹಸೀಲ್ದಾರ್ ಪುರಂದರ ಹೆಗ್ಡೆ ಸ್ವಾಗತಿಸಿದರು. ಕಂದಾಯ ನಿರೀಕ್ಷಕ ಗೋಪಾಲ್ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಪೊರ್ದಾಲ್ ಕಾರ್ಯಕ್ರಮ ನಿರ್ವಹಿಸಿದರು.

PREV

Recommended Stories

ಖಾಸಗಿ ಸಂಘಟನೆಗಳಿಗೆ ನಿಷೇಧ ಹೇರಿದ್ದು ಜಗದೀಶ್‌ ಶೆಟ್ಟರ್‌ : ಪರಂ
ಕರ್ನಾಟಕಕ್ಕೆ ₹385 ಕೋಟಿ ಕೇಂದ್ರೀಯ ನೆರೆ ಪರಿಹಾರ