ಚಂದ್ರಶೇಖರ ನಾಯಕ ಗುಡ್ಡಕಾಯಿ
ಶಿಕ್ಷಣವೆಂದರೆ ಕೇವಲ ಪಾಠ ಹೇಳುವುದಲ್ಲ, ಅದು ಭವಿಷ್ಯದ ಪೀಳಿಗೆಯನ್ನು ರೂಪಿಸುವ ಮಹತ್ತರ ಜವಾಬ್ದಾರಿ. ಇಂತಹ ಜವಾಬ್ದಾರಿಯನ್ನು ಹೊತ್ತು ಹಲವು ವರ್ಷಗಳಿಂದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುವ ತಮ್ಮ ಬದುಕು ಮಾತ್ರ ಇನ್ನೂ ಅತಂತ್ರವಾಗಿಯೇ ಉಳಿದಿದೆ ಎಂಬ ಕೊರಗು ಅತಿಥಿ ಉಪನ್ಯಾಸಕರ ಜೀವ ಹಿಂಡುತಿದೆ.
ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ಕೊರತೆ ನೀಗಿಸುವಲ್ಲಿ ಅತಿಥಿ ಉಪನ್ಯಾಸಕರ ಸೇವೆ ಪ್ರಮುಖವಾಗಿದೆ. ವಿದ್ಯಾರ್ಥಿಗಳಿಗೆ ನಿರಂತರ ಬೋಧಿಸುವುದು, ಶೈಕ್ಷಣಿಕ ಚಟುವಟಿಕೆಗಳನ್ನು ಸುಗಮವಾಗಿ ನಡೆಯಲು ಹಾಗೂ ಉತ್ತಮ ಫಲಿತಾಂಶಕ್ಕೆ ಶ್ರಮಿಸುವ ಮೂಲಕ ಶಿಕ್ಷಣ ವ್ಯವಸ್ಥೆಗೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ಆದರೆ ವರ್ಷಗಳ ಸೇವೆ, ಅನುಭವಕ್ಕೆ ತಕ್ಕಂತೆ ಗೌರವಧನ ಹಾಗೂ ಸೇವಾ ಭದ್ರತೆ ಮಾತ್ರ ಸಿಗುತ್ತಿಲ್ಲ ಎಂಬುದು ಅವರ ಅಳಲು.ಪ್ರಸ್ತುತ ರಾಜ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಲ್ಲಿ ಹಲವರು 10 ರಿಂದ 15 ವರ್ಷಗಳ ಬೋಧನಾ ಅನುಭವ ಹೊಂದಿದ್ದಾರೆ. ಇಷ್ಟೊಂದು ವರ್ಷ ಸೇವೆ ಸಲ್ಲಿಸಿದವರನ್ನು ಪ್ರತಿ ವರ್ಷ ಹೊಸದಾಗಿ ನೇಮಕವಾಗುವ ತಾತ್ಕಾಲಿಕ ಸಿಬ್ಬಂದಿಯಂತೆ ಪರಿಗಣಿಸುವುದು ಎಷ್ಟು ಸರಿ ಎಂಬ ಪ್ರಶ್ನೆ ಎದುರಾಗಿದೆ.
ಭದ್ರತೆ ಮಾತ್ರ ಇಲ್ಲ: ಒಂದೇ ಕಾಲೇಜಿನಲ್ಲಿ ಹಲವು ವರ್ಷ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಪ್ರತಿ ಶೈಕ್ಷಣಿಕ ವರ್ಷದ ಆರಂಭದಲ್ಲೂ ಸೇವೆ ಮುಂದುವರಿಕೆ ಕುರಿತು ಆತಂಕ ಎದುರಾಗುತ್ತದೆ. ಸೇವಾ ಹಿರಿತನ, ವಿದ್ಯಾರ್ಹತೆ ಮತ್ತು ಅನುಭವಕ್ಕೆ ಆದ್ಯತೆ ನೀಡಿ ಸೇವೆಯ ನಿರಂತರತೆ ಕಲ್ಪಿಸಬೇಕು ಎಂಬುದು ಅತಿಥಿ ಉಪನ್ಯಾಸಕರ ಸಂಘದ ಪ್ರಮುಖ ಬೇಡಿಕೆಯಾಗಿದೆ.
ಹಲವು ವರ್ಷಗಳಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಇಂದಿಗೂ ಸೇವಾ ಭದ್ರತೆ ಇಲ್ಲ. 14 ಸಾವಿರ ರು. ಗೌರವಧನದಲ್ಲಿ ಜೀವನ ನಿರ್ವಹಣೆ ಕಷ್ಟವಾಗಿದ್ದು, ಸರ್ಕಾರ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಮಾದರಿಯಲ್ಲಿ ಕನಿಷ್ಠ 30 ಸಾವಿರ ರು. ಗೌರವಧನ, ನಿವೃತ್ತಿ ಸಂದರ್ಭದಲ್ಲಿ ಇಡಿಗಂಟು, ಸೇವಾ ನಿರಂತರತೆ ಹಾಗೂ ಸಾಮಾಜಿಕ ಭದ್ರತೆ ಕಲ್ಪಸಬೇಕು ಎಂದು ಯಾದಗಿರಿ ಅತಿಥಿ ಉಪನ್ಯಾಸಕರ ಸಂಘ ಜಿಲ್ಲಾ ಅಧ್ಯಕ್ಷ ಶರಣಪ್ಪ ಟಿ.ಹೊಸಮನಿ