ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಬುಧವಾರ ಇಲ್ಲಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷಗಳು ಹೊರಗಿನವರ ತಂದು ಚುನಾವಣೆಗೆ ನಿಲ್ಲಿಸುವ ಪರಿಪಾಟಲು ಬೆಳೆಸಿಕೊಂಡಿದ್ದಾರೆ. ಸ್ಥಳೀಯರಿಗೆ ಟಿಕೆಟ್ ನೀಡಿದರೆ ಗೆಲ್ಲುವ ಸಾಮರ್ಥ್ಯ ಇಲ್ಲವೆಂದುಕೊಂಡರೆ ಹೇಗೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ನ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆದರೂ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಎಸ್.ನಿಜಲಿಂಗಪ್ಪ ಹಾಗೂ ಜಗಳೂರಿನ ಇಮಾಮ್‍ಸಾಬ್ ರವರನ್ನು ಹೊರತುಪಡಿಸಿದರೆ ಬೇರೆ ಯಾರಿಗೂ ಸಹ ಸ್ಥಳೀಯರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿರುವುದಿಲ್ಲ. ಬೇರೆ ಕಡೆಯಿಂದ ಬಂದು ಇಲ್ಲಿ ಗೆದ್ದರೆ ನಮ್ಮ ಸಮಸ್ಯೆ ಹೇಳಿಕೊಳ್ಳು ವುದಕ್ಕೆ ಆಗಲ್ಲ. ಆದ್ದರಿಂದ ಸ್ಥಳೀಯರಿಗೆ ಟಿಕೆಟ್ ಕೊಟ್ಟರೆ ನಮ್ಮ ಸಮಸ್ಯೆ ಹೇಳಿಕೊಳ್ಳಬಹುದು ಎಂದರು.ಲಿಡ್ಕರ್ ಮಾಜಿ ಅಧ್ಯಕ್ಷ ಓ.ಶಂಕರ್ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಸ್ಥಳಿಯರನ್ನು ಆಯ್ಕೆ ಮಾಡಬೇಕು ಅದರಲ್ಲೂ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡುವಂತೆ ಪಕ್ಷದ ಮುಖಂಡರನ್ನು ಒತ್ತಾಯಿಸಿದರು.
ಬೇರೆ ಕಡೆಯಿಂದ ಬಂದು ಸ್ಪರ್ಧಿಸಿ ಗೆದ್ದು ಹೋಗುತ್ತಾರೆ. ಯಾವುದೇ ಅಭಿವೃದ್ಧಿ ಮಾಡಿಲ್ಲ. ಸ್ಥಳೀಯರಾದರೆ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡುತ್ತಾರೆ. ಯಾವುದೇ ಕಾರಣಕ್ಕೂ ಹೊರಗಿನ ಜಿಲ್ಲೆಯವರೆಗೆ ಟಿಕೆಟ್ ನೀಡಬಾರದು ಸ್ಥಳೀಯ ಅಭ್ಯರ್ಥಿ ಡಾ.ತಿಪ್ಪೇಸ್ವಾಮಿರವರಿಗೆ ಟಿಕೆಟ್ ನೀಡಿದರೆ 2 ಲಕ್ಷ ಮತಗಳಿಂದ ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದರು.