ಅಧಿಕಾರ ಇರಲಿ, ಇಲ್ಲದಿರಲಿ ಜನರ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್

KannadaprabhaNewsNetwork |  
Published : Jun 10, 2025, 05:56 AM IST
9ಕೆಎಂಎನ್ ಡಿ20 | Kannada Prabha

ಸಾರಾಂಶ

ನಾನು ರಾಜಕೀಯಕ್ಕೆ ಬರಬೇಕೆಂದು ಕನಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಕೋವಿಡ್ ಸಂದರ್ಭದಲ್ಲಿ ಕ್ಷೇತ್ರದ ಜನರಿಗೆ ಏನಾದರೂ ಸಹಾಯ ಮಾಡಬೇಕೆಂದು ಸಮಾಜ ಸೇವೆ ಮಾಡಲು ಮುಂದಾದೆ. ನನ್ನ ಸೇವೆ ಮೆಚ್ಚಿ ಮೊದಲ ಚುನಾವಣೆಯಲ್ಲೆ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಹೀಗಾಗಿ ಅವರಿಗೆ ಕೃತಜ್ಞನಾಗಿದ್ದೇನೆ.

ಕನ್ನಡಪ್ರಭ ವಾರ್ತೆ ಮದ್ದೂರು

ಕೆ.ಎಂ.ಉದಯ್ ಅಭಿಮಾನಿಗಳ ಬಳಗದಿಂದ ಹುಟ್ಟುಹಬ್ಬದ ಅಂಗವಾಗಿ ಶಾಸಕ ಕೆ.ಎಂ.ಉದಯ್‌ಗೆ ಬೆಳ್ಳಿ ಗಧೆ ನೀಡಿ ಅಭಿನಂದಿಸಲಾಯಿತು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ಅಭಿಮಾನಿಗಳ ಬಳಗದಿಂದ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸೈನಿಕರ ಕುಟುಂಬದವರಿಗೆ ಸನ್ಮಾನ ಸಮಾರಂಭದಲ್ಲಿ ಶಾಸಕರನ್ನು ಅಭಿನಂದಿಸಲಾಯಿತು.

ನಂತರ ಶಾಸಕ ಕೆ.ಎಂ.ಉದಯ್ ಮಾತನಾಡಿ, ಅಧಿಕಾರ ಇರಲಿ, ಇಲ್ಲದಿರಲಿ ನನ್ನ ಜೀವನದ ಕೊನೆಯುಸಿರಿರೋ ತನಕ ಕ್ಷೇತ್ರದ ಜನರ ಸೇವೆಯನ್ನು ನಿರಂತರವಾಗಿ ಮಾಡುತ್ತೇನೆ ಎಂದರು.

ನಾನು ರಾಜಕೀಯಕ್ಕೆ ಬರಬೇಕೆಂದು ಕನಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಕೋವಿಡ್ ಸಂದರ್ಭದಲ್ಲಿ ಕ್ಷೇತ್ರದ ಜನರಿಗೆ ಏನಾದರೂ ಸಹಾಯ ಮಾಡಬೇಕೆಂದು ಸಮಾಜ ಸೇವೆ ಮಾಡಲು ಮುಂದಾದೆ. ನನ್ನ ಸೇವೆ ಮೆಚ್ಚಿ ಮೊದಲ ಚುನಾವಣೆಯಲ್ಲೆ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಹೀಗಾಗಿ ಅವರಿಗೆ ಕೃತಜ್ಞನಾಗಿದ್ದೇನೆ ಎಂದರು.

ಕ್ಷೇತ್ರದ ಜನರು ನನಗೆ ತೋರುತ್ತಿರುವ ಪ್ರೀತಿ ವಿಶ್ವಾಸಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಾನು ಮತ್ತು ನನ್ನ ಇಡೀ ಕುಟುಂಬ ಋಣಿಯಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದು ಹಾಗೂ ಜನರ ಕಷ್ಟ ಸುಖಗಳಲ್ಲಿ ನಿರಂತರವಾಗಿ ನಿಲ್ಲುವುದಾಗಿ ಭರವಸೆ ವ್ಯಕ್ತಪಡಿಸಿದರು.

ಸರ್ಕಾರದಿಂದ ಜತೆಗೆ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್‌ನಿಂದ ನಿರಂತರವಾಗಿ ಬಡವರು, ಆರ್ಥಿಕವಾಗಿ ಹಿಂದುಳಿದವರು, ದೀನದಲಿತರು, ಅಲ್ಪಸಂಖ್ಯಾತರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವರ್ಗದವರ ಪರ ಹಲವಾರು ಸಮಾಜ ಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಂಡು ಜನರಿಗೆ ಅನುಕೂಲ ಕಲ್ಪಿಸುತ್ತಿದ್ದೇನೆ ಎಂದರು.

ತಿಮ್ಮದಾಸ್ ಗ್ರೂಪ್ ಮಾಲೀಕ ಸಿ.ಟಿ.ಶಂಕರ್ ಮಾತನಾಡಿ, ಶಾಸಕ ಕೆ.ಎಂ.ಉದಯ್ ಅವರು ಹೆಚ್ಚು ಮಾತನಾಡದೆ ಮೌನ ಸಾಧಕರಾಗಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳನ್ನು ಮಾಡುವ ಮೂಲಕ ರಾಜ್ಯಕ್ಕೆ ಮಾದರಿಯಾಗಿ ತಾಲೂಕನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು ಮಾತನಾಡಿ, ಶಾಸಕ ಕೆ.ಎಂ.ಉದಯ್ ಅವರು ಸದಾ ಕಾಲ ಕ್ಷೇತ್ರದ ಜನರಿಗೆ ಸುಲಭವಾಗಿ ಸಿಗುವ ಮೂಲಕ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದಾರೆ. ಸರ್ಕಾರದಿಂದ ಅತಿ ಹೆಚ್ಚು ಅನುದಾನ ತಂದು ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

ನಂತರ ಸಂಗೀತ ನಿರ್ದೇಶಕ ಗುರುಕಿರಣ್, ಗಾಯಕರಾದ ಹೇಮಂತ್, ಇಂದು ನಾಗರಾಜ್ ಸೇರಿದಂತೆ ಹಲವು ಪ್ರಸಿದ್ಧ ಗಾಯಕರು ನಡೆಸಿಕೊಟ್ಟ ರಸಮಂಜರಿ ಕಾರ್ಯಕ್ರಮ ನೆರದಿದ್ದ ಜನರನ್ನು ರಂಜಿಸಿತು. ತರುವಾಯ ವಿವಿಧ ಸಂಘಟನೆಗಳ ಮುಖಂಡರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶಾಸಕ ಕೆ.ಎಂ.ಉದಯ್ ಅವರಿಗೆ ಭಾರಿ ಗಾತ್ರದ ಹೂವಿನ ಹಾರ ಹಾಕಿ ಅಭಿನಂದಿಸಿ ಹುಟ್ಟುಹಬ್ಬದ ಶುಭಾಶಯ ಹೇಳಿದರು.

ಸಮಾರಂಭದಲ್ಲಿ ಸಮಾಜ ಸೇವಕಿ, ಶಾಸಕರ ಪತ್ನಿ ವಿನುತಾ ಕೆ.ಎಂ.ಉದಯ್, ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ಪುರಸಭಾ ಅಧ್ಯಕ್ಷೆ ಕೋಕಿಲಾ ಅರುಣ್, ಉಪಾಧ್ಯಕ್ಷ ಪ್ರಸನ್ನಕುಮಾರ್, ಮನ್ಮುಲ್ ನಿರ್ದೇಶಕ ಹರೀಶ್, ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಮೋಹನ್ ಕುಮಾರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ನಿರ್ದೇಶಕ ಪಿ.ಸಂದರ್ಶ, ಟಿಎಪಿಸಿಎಂಎಸ್ ಉಪಾಧ್ಯಕ್ಷ ಗೊರವನಹಳ್ಳಿ ರಾಘವ, ಮಾಜಿ ಗ್ರಾಪಂ ಅಧ್ಯಕ್ಷ ಮಧು ಕುಮಾರ್, ಮುಖಂಡರಾದ ಬಸವರಾಜು, ಅಜ್ಜಹಳ್ಳಿ ರಾಮಕೃಷ್ಣ, ಕಂಠಿ ಸುರೇಶ್, ಸಿಪಾಯಿ ಶ್ರೀನಿವಾಸ್, ಮಮತಾ ಶಂಕರೇಗೌಡ, ಮಹದೇವಯ್ಯ, ಪೈರೋಜ್ ಹಾಗೂ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?