ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‌ಕೋಟ್ ಸಮಾರಂಭ

KannadaprabhaNewsNetwork |  
Published : Nov 02, 2026, 03:45 AM IST
ಚಿತ್ರ :  1ಎಂಡಿಕೆ1 : ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‌ಕೋಟ್ ಸಮಾರಂಭ ನಡೆಯಿತು.  | Kannada Prabha

ಸಾರಾಂಶ

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯಲ್ಲಿ 11ನೇ ಬ್ಯಾಚ್‌ನ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗಾಗಿ ವೈಟ್‌ಕೋಟ್ ಸಮಾರಂಭವು ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.

ಮಡಿಕೇರಿ ; ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯಲ್ಲಿ 11ನೇ ಬ್ಯಾಚ್‌ನ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗಾಗಿ ವೈಟ್‌ಕೋಟ್ ಸಮಾರಂಭವು ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.

ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ.ಲೋಕೇಶ್ ಎ.ಜೆ. ಅವರ ಮಾರ್ಗದರ್ಶನದಲ್ಲಿ ಜರುಗಿದ ಈ ಕಾರ್ಯಕ್ರಮವನ್ನು ಜೀವರಸಾಯನಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಲಾಗಿತ್ತು.ಸಮಾರಂಭದಲ್ಲಿ ನೂತನವಾಗಿ ಪ್ರವೇಶ ಪಡೆದ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಭಾಗವಹಿಸಿದ್ದರು. ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಪಯಣಕ್ಕೆ ನಾಂದಿ ಹಾಡಿದ ಈ ಸಮಾರಂಭವು ಎಲ್ಲರಿಗೂ ಸ್ಮರಣೀಯ ಕ್ಷಣವಾಗಿ ಮೂಡಿಬಂದಿತು.ಕಾರ್ಯಕ್ರಮದಲ್ಲಿ ಜೀವರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರು ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಸಂಸ್ಥೆಯ ವೈದ್ಯಕೀಯ ಪ್ರಾಂಶುಪಾಲರು ಹಾಗೂ ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ವಿಶಾಲ್ ಕುಮಾರ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ವೈಟ್ ಕೋಟ್ ಸಮಾರಂಭದ ಮಹತ್ವ, ವೈದ್ಯಕೀಯ ವಿದ್ಯಾರ್ಥಿಗಳ ಜವಾಬ್ದಾರಿ ಹಾಗೂ ವೈದ್ಯಕೀಯ ವೃತ್ತಿಯಲ್ಲಿರಬೇಕಾದ ಬದ್ಧತೆ ಮತ್ತು ಸೇವಾ ಮನೋಭಾವದ ಕುರಿತು ತಿಳಿಸಿದರು.ಮುಖ್ಯ ಆಡಳಿತಾಧಿಕಾರಿ ರೋಹಿಣಿ, ಸ್ನಾತಕೋತ್ತರ ವಿಭಾಗದ ಪ್ರಾಂಶುಪಾಲರು ಡಾ.ಈಶಾ ಬಿ.ರಾವ್ ಹಾಗೂ ವೈದ್ಯಕೀಯ ಅಧೀಕ್ಷಕರಾದ ಡಾ. ಸೋಮಶೇಖರ್ ಎಚ್.ಕೆ. ಅವರು ನೂತನ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವೈದ್ಯಕೀಯ ವೃತ್ತಿಯಲ್ಲಿ ವೃತ್ತಿಪರತೆ, ಶಿಸ್ತು, ಸಮರ್ಪಣೆ, ಮಾನವೀಯತೆ, ಕರುಣೆ ಹಾಗೂ ರೋಗಿಗಳ ಸೇವೆಯ ಮಹತ್ವ ವಿವರಿಸಿದರು.ಡಾ.ರವಿಕಿರಣ್ ಕಿಸಾನ್ ಅಕ್ಯಾಡೆಮಿಕ್ ರಿಜಿಸ್ಟ್ರಾರ್ ಹಾಗೂ ಡಾ.ರಾಮಚಂದ್ರ ಕಾಮತ್ ಸಮುದಾಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಕಾರ್ಯಕ್ರಮದ ಉದ್ದೇಶ, ಮಹತ್ವ ಹಾಗೂ ಅದರ ಕಾರ್ಯಚಟುವಟಿಕೆಗಳ ಕುರಿತು ತಮ್ಮ ಅಮೂಲ್ಯವಾದ ವಿಚಾರಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ ನೀಡುವುದರ ಜೊತೆಗೆ, ಸಮುದಾಯ ಆರೋಗ್ಯ ಕ್ಷೇತ್ರದಲ್ಲಿ ವೈದ್ಯಕೀಯ ಶಿಕ್ಷಣದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಶುಭ ಹಾರೈಸಿದರು.ಸಮಾರಂಭದ ಅಂಗವಾಗಿ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಗಣ್ಯರು ವೈಟ್‌ಕೋಟ್‌ಗಳನ್ನು ತೊಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಗರ ಮಕ್ಕಳಿಗೆ ಹಳ್ಳಿ ಜೀವನ ಪರಿಚಯಿಸುವ ‘ಗ್ರಾಮಾನುಭವ’ಕ್ಕೆ ಚಾಲನೆ
ಕಡಲ ಜೈವಿಕ ತಂತ್ರಜ್ಞಾನ ನೀತಿಗೆ ಅನುಮೋದನೆ: ರಿಝ್ವಾನ್ ಅರ್ಷದ್