ಕನ್ನಡಪ್ರಭ ವಾರ್ತೆ ಬೆಂಗಳೂರು
ಮಂಗಳವಾರ ಬೆಂಗಳೂರು ಜಲಮಂಡಳಿ, ಸಂಚಾರಿ ಪೊಲೀಸ್, ಬೆಸ್ಕಾಂ, ಕೆಪಿಟಿಸಿಎಲ್, ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ‘ಯೋಜನಾ ವಿಭಾಗ’ದಿಂದ ₹800 ಕೋಟಿ ವೆಚ್ಚದಲ್ಲಿ 64 ಕಿ.ಮೀ ಉದ್ದದ 43 ರಸ್ತೆಗಳು ಹಾಗೂ ‘ರಸ್ತೆ ಮತ್ತು ಮೂಲಸೌಕರ್ಯ ವಿಭಾಗ’ದಿಂದ ₹900 ಕೋಟಿ ವೆಚ್ಚದಲ್ಲಿ 71 ಕಿ.ಮೀ ಉದ್ದದ 56 ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ.
ಒಟ್ಟು 15 ಪ್ಯಾಕೇಜ್ ಪೈಕಿ 13 ಪ್ಯಾಕೇಜ್‌ಗಳು ಈಗಾಗಲೇ ಅಂತಿಮಗೊಂಡಿದ್ದು, ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ. ಇನ್ನೆರಡು ಪ್ಯಾಕೇಜ್‌ಗಳು ಸರ್ಕಾರದ ಹಂತದಲ್ಲಿದೆ. ಶೀಘ್ರ ಕಾಮಗಾರಿ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದರು.ಸ್ಥಳ ವರದಿ ಸಲ್ಲಿಸಿ:
ಕಾಮಗಾರಿ ವೇಳೆಯಲ್ಲಿಯೇ ಕೇಬಲ್, ಕೊಳವೆ ಸೇರಿದಂತೆ ಇನ್ನಿತರೆ ಅಳವಡಿಕೆ ಮಾಡಿಕೊಳ್ಳುವಂತೆ ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇನ್ನಿತರೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ರಸ್ತೆಯ ಎರಡೂ ಬದಿ ಪಾದಚಾರಿ ಮಾರ್ಗದಲ್ಲಿ ಯುಟಿಲಿಟಿಗಾಗಿ ಡಕ್‌ಗಳ ಅಳವಡಿಕೆ ಮಾಡಿಕೊಳ್ಳಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕ ಯಾವುದೇ ಕಾರಣಕ್ಕೂ ರಸ್ತೆ ಕತ್ತರಿಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.ಪ್ರಧಾನ ಅಭಿಯಂತರ ಪ್ರಹ್ಲಾದ್, ಯೋಜನಾ ವಿಭಾಗದ ಮುಖ್ಯ ಅಭಿಯಂತರ ಲೋಕೇಶ್, ಜಲಮಂಡಳಿ ಮುಖ್ಯ ಅಭಿಯಂತರ ಗಂಗಾಧರ್, ವೆಂಕಟೇಶ್, ದೇವರಾಜ್, ಸಂಚಾರ ಪೊಲೀಸ್, ಕೆಪಿಟಿಸಿಎಲ್, ಬೆಸ್ಕಾಂ, ಗೇಲ್ ಗ್ಯಾಸ್, ಇನ್ನಿತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.ಸಂಚಾರ ಬದಲಾವಣೆ