ರೈತ ಕುಟುಂಬದಿಂದ ಬೆಳೆದು ದೇಶಕ್ಕೆ ಪ್ರಧಾನಿಯಾದವರು

KannadaprabhaNewsNetwork |  
Published : May 19, 2026, 01:15 AM IST
ಬಸವೇಶ್ವರ ವೃತ್ತದಲ್ಲಿ ಕೇಕ್‌ ಕತ್ತರಿಸಿ ಮಾತನಾಡಿದ ಡಿಸಿಸಿ ಬ್ಯಾಂಕ್ ನಿರ್ದೇಶಕ ಗಂಗಾಧರ್ | Kannada Prabha

ಸಾರಾಂಶ

ರೈತರ ಸಮಸ್ಯೆಗಳಿಗೆ ಸದಾ ಸ್ಪಂದಿಸಿದ ದೇವೇಗೌಡರು ಗ್ರಾಮೀಣಾಭಿವೃದ್ಧಿ, ನೀರಾವರಿ ಯೋಜನೆಗಳು ಹಾಗೂ ಬಡವರ ಬದುಕಿನ ಸುಧಾರಣೆಗೆ ವಿಶೇಷ ಆದ್ಯತೆ ನೀಡಿದ ನಾಯಕರು. ಅಧಿಕಾರದಲ್ಲಿದ್ದಾಗಲೂ ಸರಳ ಜೀವನಶೈಲಿಯನ್ನು ಅಳವಡಿಸಿಕೊಂಡು ಜನರೊಂದಿಗೇ ಬೆರೆತು ಬದುಕಿದ ಅವರು ಇಂದಿಗೂ ಯುವ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ. ಇಂತಹ ಮಹಾನ್ ನಾಯಕರು ನಮ್ಮ ಹಾಸನ ಜಿಲ್ಲೆಯವರಾಗಿರುವುದು ಜಿಲ್ಲೆಯ ಜನತೆಗೆ ಹೆಮ್ಮೆ ತರುವ ಸಂಗತಿ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರ ಅವರ 93ನೇ ಜನ್ಮದಿನವನ್ನು ತಾಲೂಕಿನ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಸಾರ್ವಜನಿಕರಿಗೆ ಸಿಹಿ ವಿತರಣೆ, ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ನೀಡುವುದು ಹಾಗೂ ಸಾಮೂಹಿಕ ಅನ್ನಸಂತರ್ಪಣೆ ಹಮ್ಮಿಕೊಳ್ಳುವ ಮೂಲಕ ದೇವೇಗೌಡರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬಸವೇಶ್ವರ ವೃತ್ತದಲ್ಲಿ ಕೇಕ್ ಕತ್ತರಿಸಿ ಮಾತನಾಡಿದ ಡಿಸಿಸಿ ಬ್ಯಾಂಕ್ ನಿರ್ದೇಶಕ ಗಂಗಾಧರ್ ಮಾಜಿ ಪ್ರಧಾನಮಂತ್ರಿ ದೇವೇಗೌಡರು ಅವರು ದೇಶದ ರಾಜಕೀಯ ಇತಿಹಾಸದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ ಅಪರೂಪದ ನಾಯಕರು. ಸಾಮಾನ್ಯ ರೈತ ಕುಟುಂಬದಿಂದ ಬೆಳೆದು ದೇಶದ ಅತ್ಯುನ್ನತ ಹುದ್ದೆಯಾದ ಪ್ರಧಾನಮಂತ್ರಿ ಸ್ಥಾನವನ್ನು ಅಲಂಕರಿಸಿದ ಅವರು, ಸರಳತೆ, ಪ್ರಾಮಾಣಿಕತೆ ಮತ್ತು ಜನಪರ ಆಡಳಿತದ ಮೂಲಕ ಕೋಟ್ಯಾಂತರ ಜನರ ಮನಸ್ಸು ಗೆದ್ದಿದ್ದಾರೆ. ರೈತರ ಸಮಸ್ಯೆಗಳಿಗೆ ಸದಾ ಸ್ಪಂದಿಸಿದ ದೇವೇಗೌಡರು ಗ್ರಾಮೀಣಾಭಿವೃದ್ಧಿ, ನೀರಾವರಿ ಯೋಜನೆಗಳು ಹಾಗೂ ಬಡವರ ಬದುಕಿನ ಸುಧಾರಣೆಗೆ ವಿಶೇಷ ಆದ್ಯತೆ ನೀಡಿದ ನಾಯಕರು. ಅಧಿಕಾರದಲ್ಲಿದ್ದಾಗಲೂ ಸರಳ ಜೀವನಶೈಲಿಯನ್ನು ಅಳವಡಿಸಿಕೊಂಡು ಜನರೊಂದಿಗೇ ಬೆರೆತು ಬದುಕಿದ ಅವರು ಇಂದಿಗೂ ಯುವ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ. ಇಂತಹ ಮಹಾನ್ ನಾಯಕರು ನಮ್ಮ ಹಾಸನ ಜಿಲ್ಲೆಯವರಾಗಿರುವುದು ಜಿಲ್ಲೆಯ ಜನತೆಗೆ ಹೆಮ್ಮೆ ತರುವ ಸಂಗತಿ ಎಂದು ಹೇಳಿದರು.

ಮಾಜಿ ಶಾಸಕ ಜಿ.ಎಸ್. ಪರಮೇಶ್ವರಪ್ಪ ಮಾತನಾಡಿ, “ಸಾಮಾನ್ಯ ರೈತ ಕುಟುಂಬದಿಂದ ದೇಶದ ಪ್ರಧಾನಮಂತ್ರಿವರೆಗೆ ಏರಿದ ದೇವೇಗೌಡರ ಬದುಕು ಯುವ ಪೀಳಿಗೆಗೆ ಪ್ರೇರಣೆಯಾಗಿದೆ. ರಾಜಕೀಯದಲ್ಲಿ ಶ್ರಮ, ನಿಷ್ಠೆ ಮತ್ತು ಜನಪರ ಚಿಂತನೆಯ ಮೂಲಕ ಉನ್ನತ ಸ್ಥಾನ ತಲುಪಬಹುದು ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ ಎಂದು ನುಡಿನಮನ ಸಲ್ಲಿಸಿದರು.ಖ್ಯಾತ ವಕೀಲ ವಿವೇಕ್ ಮಾತನಾಡಿ ರೈತರು, ಕಾರ್ಮಿಕರು ಹಾಗೂ ಶ್ರಮಿಕ ವರ್ಗದ ಧ್ವನಿಯಾಗಿ ದೇವೇಗೌಡರು ಸದಾ ಕೆಲಸ ಮಾಡಿದ್ದಾರೆ. ಈ ವಯಸ್ಸಿನಲ್ಲೂ ರಾಜ್ಯ ಮತ್ತು ದೇಶದ ಅಭಿವೃದ್ಧಿಯ ಬಗ್ಗೆ ಚಿಂತಿಸುವ ಅವರ ಮನೋಭಾವ ಎಲ್ಲರಿಗೂ ಆದರ್ಶ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡರಾದ ಶೇಖರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಶೋಕ್, ಕೆಂಕೆರೆ ಕೇಶವ್, ಬಿಜೆಪಿ ಮುಖಂಡ ಕೆವಿಎನ್ ಶಿವು, ನಗರಸಭೆ ಮಾಜಿ ಅಧ್ಯಕ್ಷ ಬಿ.ಎನ್. ವಿದ್ಯಾಧರ್, ಗಿರೀಶ್, ಬಿ.ಜಿ. ನಿರಂಜನ್, ಲಾಳನಕೆರೆ ಯೋಗೀಶ್ , ಜೆಡಿಎಸ್ ಮುಖಂಡರಾದ ಸತೀಶ್, ರಮೇಶ್, ಕುಡುಕುಂದಿ ಕುಮಾರ್, ನಗರಸಭೆ ಮಾಜಿ ಸದಸ್ಯ ಹರ್ಷವರ್ಧನ್, ಕರವೇ ನಗರಾಧ್ಯಕ್ಷ ಸಂತೋಷ್ ಕುಮಾರ್ ಸೇರಿದಂತೆ ನೂರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಿಪ್ಪಗೊಂಡನಹಳ್ಳಿ ಜಲಾಶಯದ ನೀರು ಪೋಲು
ಕಂದಾಯ ಇಲಾಖೆಯ ಸಾಧನೆಯಲ್ಲಿ ತುಮಕೂರು ಪ್ರಥಮ