ಶ್ರೀಶೈಲ ಮಠದ
ಬೆಳಗಾವಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನ.10 ರಂದು ಚುನಾವಣೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಚುನಾವಣೆಯಲ್ಲಿ ಎಂಟ್ರಿಕೊಟ್ಟಿರುವುದರಿಂದ ಅಧ್ಯಕ್ಷ ಸ್ಥಾನ ಯಾರ ಪಾಲಾಗುತ್ತದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.
ಇತ್ತೀಚೆಗೆ ನಿರ್ದೇಶಕರ ಸ್ಥಾನಗಳಗೆ ನಡೆದ ಚುನಾವಣೆಯಲ್ಲಿ ಜಾರಕಿಹೊಳಿ ಮತ್ತು ಕತ್ತಿ- ಸವದಿ ಬಣಗಳ ನಡುವೆ ತೀವ್ರ ಪೈಪೋಟಿ ನಡೆದಿತ್ತು. 13 ಸ್ಥಾನಗಳಲ್ಲಿ ತಮ್ಮ ಬಣಕ್ಕೆ ಗೆಲುವಾಗಿದೆ ಎಂದು ಜಾರಕಿಹೊಳಿ ಬಣ ಘೋಷಿಸಿತ್ತು. ಆದರೆ, ಜಾರಕಿಹೊಳಿ ಬಣದಲ್ಲಿ ಈಗ 11 ನಿರ್ದೇಶಕರು ಗುರುತಿಸಿಕೊಂಡಿದ್ದಾರೆ. ಸಚಿವ ಸತೀಶ ಜಾರಕಿಹೊಳಿ ಜೊತೆಗೆ ಇಬ್ಬರು ಗುರುತಿಸಿಕೊಂಡಿದ್ದಾರೆ. ಕತ್ತಿ- ಸವದಿ ಬಣದಲ್ಲಿ ಮೂವರು ನಿರ್ದೇಶಕರಿದ್ದರು. ಆದರೆ, ಬ್ಯಾಂಕಿನ ಮೇಲೆ ಹಿಡಿತ ಸಾಧಿಸಲು ಮತ್ತೆ ಉಭಯ ಬಣಗಳ ನಾಯಕರ ನಡುವೆ ಕಿತ್ತಾಟ ನಡೆದಿದೆ. ಲಿಂಗಾಯತ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ನೀಡುವುದಾಗಿ ಜಾರಕಿಹೊಳಿ ಬಣ ಘೋಷಿಸಿತ್ತು. ಇಲ್ಲಿ ಏನಿದ್ದರೂ ಕುಟುಂಬ ರಾಜಕೀಯ ಮೇಲುಗೈಸಾಧಿಸಿದ್ದು, ರಾಜಕೀಯ ಪಕ್ಷಗಳು ಗೌನವಾಗಿವೆ. ಆದರೆ, ಡಿಸಿಸಿ ಬ್ಯಾಂಕಿನ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಟ್ರಿಕೊಟ್ಟಿರುವುದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಸವಾಲಾಗಿದೆ. ಹಾಗಾಗೀ, ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದು ತೀವ್ರ ಕುತೂಹಲ ಕೆರಳಿಸುವಂತೆ ಮಾಡಿದೆ.ಲಿಂಗಾಯತರನ್ನು ಸೆಳೆಯಲು ಕತ್ತಿ ಕಸರತ್ತು:
ತಮ್ಮವರೇ ಆಯ್ಕೆಯಾಗುವ ವಿಶ್ವಾಸದಲ್ಲಿ ಬಾಲಚಂದ್ರ:
ಸಭೆಯಲ್ಲಿ ಬ್ಯಾಂಕಿನ ನಿರ್ದೇಶಕರಾದ ಅಣ್ಣಾಸಾಹೇಬ್ ಜೊಲ್ಲೆ, ವಿಶ್ವಾಸ ವೈದ್ಯ, ಬಾಬಾ ಸಾಹೇಬ್ ಪಾಟೀಲ, ಚನ್ನರಾಜ ಹಟ್ಟಿಹೊಳಿ, ಮಹಾಂತೇಶ ದೊಡ್ಡಗೌಡ್ರ, ಅರವಿಂದ ಪಾಟೀಲ, ಅಪ್ಪಾಸಾಹೇಬ ಕುಲಗೋಡೆ, ಅಮರನಾಥ ಜಾರಕಿಹೊಳಿ, ರಾಹುಲ್ ಜಾರಕಿಹೊಳಿ, ನೀಲಕಂಠ ಕಪ್ಪಲಗುದ್ದಿ, ವಿರುಪಾಕ್ಷ ಮಾಮನಿ ಅವರು ಪಾಲ್ಗೊಂಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರೊಂದಿಗೆ ಮತ್ತೊಂದು ಸುತ್ತಿನ ಸಭೆಯ ನಂತರ ಅಧ್ಯಕ್ಷ- ಉಪಾಧ್ಯಕ್ಷರ ಹೆಸರುಗಳು ಅಂತಿಮವಾಗಲಿವೆ.
ಬೆಳಗಾವಿ ಡಿಸಿಸಿ ಬ್ಯಾಂಕಿನ ಮೇಲೆ ಸ್ಪಷ್ಟ ಬಹುಮತ ಹೊಂದಿರುವ ಜಾರಕಿಹೊಳಿ ಬಣ ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಸ್ಥಾನಕ್ಕೆ ಅವಿರೋಧ ಆಯ್ಕೆಗೆ ಕಸರತ್ತು ನಡೆಸಿದೆ. ತಮ್ಮ ಬಣದಿಂದ ಯಾರು ಬೇರೆ ಬಣಕ್ಕೆ ಹೋಗದಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು 11 ನಿರ್ದೇಶಕರೊಂದಿಗೆ ಗೌಪ್ಯ ಸಭೆ ನಡೆಸಿದ್ದಾರೆ. ತಮ್ಮ ಜೊತೆಗೆ ಗುರುಸಿಕೊಂಡಿರುವ ಕಾಗವಾಡ ಶಾಸಕ ರಾಜು ಕಾಗೆ ಮತ್ತು ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ ಅವರೊಂದಿಗೆ ಸಚಿವ ಸತೀಶ ಜಾರಕಿಹೊಳಿ ಸಭೆ ನಡೆಸುವ ಸಾಧ್ಯತೆಗಳಿವೆ.