ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು?

KannadaprabhaNewsNetwork |  
Published : Apr 26, 2024, 12:47 AM IST
ಅಅಅ | Kannada Prabha

ಸಾರಾಂಶ

ಬೆಳಗಾವಿ: ಎನ್‌ಡಿಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಮೋದಿಯವರು. ಆದರೆ, ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಅವರು ಹೇಳಬೇಕು. ಪ್ರಧಾನಿ ಯಾರು ಆಗುತ್ತಾರೆ ಎಂಬುವುದರ ಕುರಿತು ಅವರಲ್ಲೇ ಗೊಂದಲವಿದೆ ಎಂದು ರಾಜ್ಯ ಬಿಜೆಪಿ ವಕ್ತಾರೆ ಮಾಳ್ವಿಕಾ ಅವಿನಾಶ ವ್ಯಂಗ್ಯವಾಡಿದರು.ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.26 ರಂದು ದಕ್ಷಿಣ ಕರ್ನಾಟದ 14 ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಅಲ್ಲಿನ ಜನ ಉತ್ತಮ ಬೆಂಬಲ ನೀಡುತ್ತಿದ್ದಾರೆ

ಕನ್ನಡಪ್ರಭ ವಾರ್ತೆ ಬೆಳಗಾವಿ

ಎನ್‌ಡಿಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಮೋದಿಯವರು. ಆದರೆ, ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಅವರು ಹೇಳಬೇಕು. ಪ್ರಧಾನಿ ಯಾರು ಆಗುತ್ತಾರೆ ಎಂಬುವುದರ ಕುರಿತು ಅವರಲ್ಲೇ ಗೊಂದಲವಿದೆ ಎಂದು ರಾಜ್ಯ ಬಿಜೆಪಿ ವಕ್ತಾರೆ ಮಾಳ್ವಿಕಾ ಅವಿನಾಶ ವ್ಯಂಗ್ಯವಾಡಿದರು.ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.26 ರಂದು ದಕ್ಷಿಣ ಕರ್ನಾಟದ 14 ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಅಲ್ಲಿನ ಜನ ಉತ್ತಮ ಬೆಂಬಲ ನೀಡುತ್ತಿದ್ದಾರೆ. 2ನೇ ಹಂತದಲ್ಲಿ ಉತ್ತರ ಕರ್ನಾಟಕದ ಭಾಗದ 14 ಸ್ಥಾನಕ್ಕೆ ಮೇ 7 ರಂದು ಮತದಾನ ನಡೆಯಲಿದೆ. ಇಲ್ಲಿಯೂ ಜನ ಉತ್ತಮ ಬೆಂಬಲ ಸೂಚಿಸುತ್ತಿದ್ದಾರೆ.‌ 2014ರ ಮುಂಚೆ ಭಾರತದಲ್ಲಿ ಸಾಕಷ್ಟು ಭ್ರಷ್ಟಾಚಾರ ಇತ್ತು. ಆದರೆ, 2014ರ ನಂತರ ಮೋದಿ ಸರ್ಕಾರದಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್‌ ಪಾಟೀಲ ಮಾತನಾಡಿ, ಪ್ರಧಾನಿ ಮೋದಿಯವರು ಕೈಗೊಂಡಿದ್ದ ಬೆಳಗಾವಿ ಪ್ರವಾಸದ ಸಮಯದಲ್ಲಿ ಬದಲಾವಣೆ ಆಗಿದೆ. ಏ.28ರ ಬದಲಾಗಿ ಏ.27 ರಂದೇ ಬೆಳಗಾವಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಮೋದಿಯವರ ಕಾರ್ಯಕ್ರಮದ ಸಮಯ ಬದಲಾಗಿದೆ. ಏ.28 ರಂದು ಬೆಳಗ್ಗೆ 12 ಗಂಟೆಗೆ ವೇದಿಕೆ ಕಾರ್ಯಕ್ರಮ ಆಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಏ.28 ರಂದು 10 ಗಂಟೆ ವೇದಿಕೆ ಕಾರ್ಯಕ್ರಮ ನಡೆಯಲಿದೆ.‌ ಮಹಾರಾಷ್ಟ್ರದಿಂದ ರಸ್ತೆ ಮೂಲಕ ಬೆಳಗಾವಿಗೆ ಏ.27 ರಂದು ಬಂದು ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಮೋದಿಯವರು ವಾಸ್ತವ್ಯ ಹೂಡಲಿದ್ದಾರೆ ಎಂದು ವಿವರಿಸಿದರು.

ಈ ವೇಳೆ ಬಿಜೆಪಿ ಬಿಜೆಪಿ ಮಹಾನಗರ ಅಧ್ಯಕ್ಷೆ ಗೀತಾ ಸುತಾರ, ಭಾರತಿ ಮಗದುಮ,ಎಫ್ ಎಸ್ ಸಿದ್ದನಗೌಡ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

-------------------

ಕೋಟ್‌...

ಕಳೆದ 10 ವರ್ಷಗಳಲ್ಲಿ ಭಾರತದ ಆರ್ಥಿಕತೆ 5ನೇ ಸ್ಥಾನಕ್ಕೆ ಬಂದಿದೆ. ಕೋವಿಡ್ ಇದ್ದರೂ ದೇಶ ಅಭಿವೃದ್ಧಿ ಸಾಧಿಸಿದೆ. ಮೋದಿಯವರು ಪ್ರಧಾನಿಯಾದ ಬಳಿಕ ಕೆಲವೆ ವರ್ಷಗಳಲ್ಲಿ ಭಾರತವನ್ನು 3 ಅತೀ ದೊಡ್ಡ ಆರ್ಥಿಕ ದೇಶವನ್ನು ಮಾಡುವ ಗುರಿ ಹೊಂದಿದ್ದಾರೆ. ಮೋದಿಯವರ ಆಡಳಿತದಲ್ಲಿ ಬೆಳಗಾವಿಯಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ. ಹಾಗಾಗಿ ಜಗದೀಶಗ ಶೆಟ್ಟರ್ ಅವರನ್ನು ಬೆಳಗಾವಿ ಕ್ಷೇತ್ರದಲ್ಲಿ ಗೆಲ್ಲಿಸಬೇಕು.

-ಮಾಳವಿಕಾ ಅವಿನಾಶ, ರಾಜ್ಯ ಬಿಜೆಪಿ ವಕ್ತಾರೆ.ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವಗೌಡ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಅನೇಕರು ಆಗಮಿಸಲಿದ್ದಾರೆ.

-ಸುಭಾಷ್‌ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷರು.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ