ಹಿಜಾಬ್ ಅವಕಾಶ ನೀಡುವ ಸರ್ಕಾರ, ಕಾಲುಂಗುರ, ತಾಳಿ ತೆಗೆಸಿದ್ಯಾಕೆ?

KannadaprabhaNewsNetwork |  
Published : Nov 09, 2023, 01:00 AM ISTUpdated : Nov 09, 2023, 01:01 AM IST
8ಕೆಪಿಎಲ್26 ವಿಪ ಸದಸ್ಯೆ ಹೇಮಲತಾ ನಾಯಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ನೇಮಕಾತಿ ಪರೀಕ್ಷೆಯ ವೇಳೆಯಲ್ಲಿ ಹಿಜಾಬ್‌ಗೆ ಅವಕಾಶ ನೀಡಿರುವ ಅಧಿಕಾರಿಗಳು ಮಾಂಗಲ್ಯ ಮತ್ತು ಕಾಲುಂಗುರ ತೆಗೆಸುವ ಮೂಲಕ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಆರೋಪಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಕಲಬುರಗಿಯಲ್ಲಿ ಪರೀಕ್ಷಾ ಕೊಠಡಿಗೆ ಹೋಗುವ ಮುನ್ನ ಕಾಲುಂಗುರ ಮತ್ತು ಮಾಂಗಲ್ಯವನ್ನು ತೆಗೆಸಿದ್ದಾರೆ. ಇದು ಅಕ್ಷಮ್ಯ ಅಪರಾಧವಾಗಿದ್ದು, ಅಂಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.

ಕೊಪ್ಪಳ: ನೇಮಕಾತಿ ಪರೀಕ್ಷೆಯ ವೇಳೆಯಲ್ಲಿ ಹಿಜಾಬ್‌ಗೆ ಅವಕಾಶ ನೀಡಿರುವ ಅಧಿಕಾರಿಗಳು ಮಾಂಗಲ್ಯ ಮತ್ತು ಕಾಲುಂಗುರ ತೆಗೆಸುವ ಮೂಲಕ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಆರೋಪಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಕಲಬುರಗಿಯಲ್ಲಿ ಪರೀಕ್ಷಾ ಕೊಠಡಿಗೆ ಹೋಗುವ ಮುನ್ನ ಕಾಲುಂಗುರ ಮತ್ತು ಮಾಂಗಲ್ಯವನ್ನು ತೆಗೆಸಿದ್ದಾರೆ. ಇದು ಅಕ್ಷಮ್ಯ ಅಪರಾಧವಾಗಿದ್ದು, ಅಂಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.

ಪತಿ ತೀರಿಕೊಂಡಾಗ ಮಹಿಳೆ ಮಾಂಗಲ್ಯ ತೆಗೆಯುತ್ತಾಳೆ. ಇನ್ನು ಆಪರೇಶನ ಥಿಯೇಟರ್‌ಗೆ ಹೋಗುವ ಮುನ್ನ ತೆಗೆಯುತ್ತಾಳೆ. ಅದರ ಹೊರತಾಗಿ ಮಹಿಳೆಯರು ಇವಗಳನ್ನು ತೆಗೆಯುವುದಿಲ್ಲ. ಇದು ಅವರಿಗೆ ಅತ್ಯಂತ ನೋವಿನ ಸಂಗತಿಯಾಗಿದೆ. ಇಂಥ ನೋವನ್ನು ಮಹಿಳೆಯರಿಗೆ ಪರೀಕ್ಷಾ ಅಧಿಕಾರಿಗಳು ನೀಡಿದ್ದು, ಸರ್ಕಾರದ ಕುಮ್ಮಕ್ಕು ಇರುವುದರಿಂದಲೇ. ಅಷ್ಟೇ ಅಲ್ಲ, ಇದೇ ಪರೀಕ್ಷಾ ಕೊಠಡಿಗೆ ಹಿಜಾಬ್ ಹಾಕಿಕೊಂಡು ಹೋಗುವುದಕ್ಕೆ ಅವಕಾಶ ನೀಡುವುದು ಎಂದರೆ ಏನು ಅರ್ಥ? ಅಷ್ಟಕ್ಕೂ ಮಾಂಗಲ್ಯ ಮತ್ತು ಕಾಲುಂಗುರಗಳು ಇರುವುದರಿಂದ ಪರೀಕ್ಷೆಯಲ್ಲಿ ನಕಲು ಮಾಡಲು ಹೇಗೆ ಸಾಧ್ಯವಾಗುತ್ತದೆ? ನಕಲು ಸೇರಿದಂತೆ ಪರೀಕ್ಷಾ ಅಕ್ರಮಗಳನ್ನು ಕಟ್ಟುನಿಟ್ಟಾಗಿ ತಡೆಯಲಿ. ಆದರೆ, ಮಹಿಳೆಯರನ್ನು ಈ ರೀತಿ ಶೋಷಣೆ ಮಾಡುವುದು ಸರಿಯಲ್ಲ ಎಂದರು.

ಕಾಂಗ್ರೆಸ್ ಆಡಳಿತದಲ್ಲಿ ಮಹಿಳೆಯರಿಗೆ ಅಪಮಾನವಾಗುತ್ತಲೇ ಇದೆ. ಈ ಹಿಂದೆ ಸರ್ಕಾರಿ ನೌಕರಿ ಪಡೆಯಲು ಮಹಿಳೆಯರು ಮಂಚ ಏರಬೇಕು ಎಂದು ಪ್ರೀಯಾಂಕ್ ಖರ್ಗೆ ಹೇಳಿ ಅಪಮಾನಿಸಿದ್ದರು. ಕಾಂಗ್ರೆಸ್ ಮುಖಂಡ ಅಧೀರ್ ಚೌಧರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಕರೆದು ಅಪಮಾನ ಮಾಡಿದ್ದರು. ಹೀಗೆ ಕಾಂಗ್ರೆಸ್ ಮುಖಂಡರು, ಸರ್ಕಾರ ಮಹಿಳೆಯರಿಗೆ ಅಪಮಾನ ಮಾಡುತ್ತಲೇ ಇದೆ ಎಂದು ಕಿಡಿಕಾರಿದರು.

ಬಿಜೆಪಿ ರಾಜ್ಯ ಕಾರ್ಯದರ್ಶಿ ಶೋಭಾ ನಗರಿ ಹಾಗೂ ನಗರ ಬಿಜೆಪಿ ಘಟಕದ ಅಧ್ಯಕ್ಷೆ ಗೀತಾ ಪಾಟೀಲ್ ಇದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ