ಮತದಾರರ ಪಟ್ಟಿ ಪರಿಷ್ಕರಣೆಗೆ ಕಾಂಗ್ರೆಸ್ ವಿರೋಧವೇಕೆ?: ಲಿಂಗರಾಜ ಪಾಟೀಲ

KannadaprabhaNewsNetwork |  
Published : Oct 30, 2026, 02:15 AM IST
ಲಿಂಗರಾಜ ಪಾಟೀಲ | Kannada Prabha

ಸಾರಾಂಶ

ಕರ್ನಾಟಕದಲ್ಲಿ 99,32,303 ಮತದಾರರ ಹೆಸರುಗಳ ಕಡಿತವಾಗಿರುವುದಾಗಿ ವರದಿಯಲ್ಲಿ ಉಲ್ಲೇಖಿಸಿರುವ ಅಂಕಿ-ಅಂಶಗಳ ನಿಖರತೆ ಹಾಗೂ ಹೆಸರು ಕೈಬಿಡಲು ಕಾರಣಗಳನ್ನು ಚುನಾವಣಾ ಆಯೋಗದ ಅಧಿಕೃತ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಬೇಕು.

ಹುಬ್ಬಳ್ಳಿ:

ಕರ್ನಾಟಕದಲ್ಲಿ ಎಸ್‌ಐಆರ್‌ ಪ್ರಕ್ರಿಯೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವುದೇಕೆ ಎಂದು ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ ಪ್ರಶ್ನಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮತದಾರರ ಪಟ್ಟಿ ಪರಿಷ್ಕರಣೆಯಿಂದ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆ ಹೆಚ್ಚಲಿದೆ. ಮೃತಪಟ್ಟವರು, ಸ್ಥಳಾಂತರಗೊಂಡವರು, ಒಂದಕ್ಕಿಂತ ಹೆಚ್ಚು ಕಡೆ ಹೆಸರು ನೋಂದಾಯಿಸಿಕೊಂಡವರು ಹಾಗೂ ಅನರ್ಹರ ಹೆಸರುಗಳನ್ನು ಪರಿಶೀಲಿಸುವುದು ಚುನಾವಣಾ ಆಯೋಗದ ಜವಾಬ್ದಾರಿ. ಇಂತಹ ಲೋಪಗಳನ್ನು ಸರಿಪಡಿಸುವ ಪ್ರಕ್ರಿಯೆಗೆ ರಾಜಕೀಯ ಬಣ್ಣ ಬಳಿಯದೆ ಎಲ್ಲ ಪಕ್ಷಗಳೂ ಸಹಕರಿಸಬೇಕು ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ 99,32,303 ಮತದಾರರ ಹೆಸರುಗಳ ಕಡಿತವಾಗಿರುವುದಾಗಿ ವರದಿಯಲ್ಲಿ ಉಲ್ಲೇಖಿಸಿರುವ ಅಂಕಿ-ಅಂಶಗಳ ನಿಖರತೆ ಹಾಗೂ ಹೆಸರು ಕೈಬಿಡಲು ಕಾರಣಗಳನ್ನು ಚುನಾವಣಾ ಆಯೋಗದ ಅಧಿಕೃತ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಬೇಕು. ಮೃತಪಟ್ಟವರು, ಸ್ಥಳಾಂತರಗೊಂಡವರು, ಪುನರಾವರ್ತಿತ ನೋಂದಣಿ ಹೊಂದಿದವರು ಸೇರಿದಂತೆ ವಿವಿಧ ಕಾರಣಗಳಿಂದ ಕೈಬಿಟ್ಟ ಹೆಸರುಗಳ ವಿವರಗಳನ್ನು ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸತ್ತವರ ಹೆಸರಿನಲ್ಲಿ ಮತದಾನವಾಗಬಾರದು, ನಕಲಿ ಮತದಾರರಿಗೆ ಅವಕಾಶ ಸಿಗಬಾರದು. ಅದೇ ರೀತಿ, ಯಾವುದೇ ಅರ್ಹ ಮತದಾರರ ಹೆಸರೂ ತಪ್ಪಾಗಿ ಪಟ್ಟಿಯಿಂದ ಕೈಬೀಳದಂತೆ ಎಚ್ಚರಿಕೆ ವಹಿಸಬೇಕು. ಅರ್ಹರ ಹೆಸರು ಕೈಬಿಟ್ಟಿದ್ದರೆ ಮರುಸೇರ್ಪಡೆಗೆ ಕಾನೂನುಬದ್ಧ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆಯನ್ನು ವಿರೋಧಿಸುವ ಕಾಂಗ್ರೆಸ್ ನಾಯಕರು ತಮ್ಮ ನಿಲುವನ್ನು ಜನರ ಮುಂದೆ ಸ್ಪಷ್ಟಪಡಿಸಬೇಕು. ರಾಜಕೀಯ ಲಾಭಕ್ಕಿಂತ ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಚುನಾವಣಾ ವ್ಯವಸ್ಥೆಯ ಪಾವಿತ್ರ್ಯ ಕಾಪಾಡುವುದಕ್ಕೆ ಆದ್ಯತೆ ನೀಡಬೇಕು ಎಂದು ಲಿಂಗರಾಜ ಪಾಟೀಲ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು