ಕನ್ನಡಪ್ರಭ ವಾರ್ತೆ ಮಾಗಡಿ
ಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಜನಸಂಖ್ಯೆಗೆ ಅನುಗುಣವಾಗಿ ಅವರ ಅಭಿವೃದ್ಧಿಗಾಗಿ ಪ್ರತ್ಯೇಕ ಅನುದಾನ ನೀಡುವ ಕಾನೂನನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿತು. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಹಾಗೂ ಕೇಂದ್ರ ಸರ್ಕಾರ ಏಕೆ ಜಾರಿಗೆ ತಂದಿಲ್ಲ ಎಂದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಅನುದಾನವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಬಿಜೆಪಿಯವರು ಸುಳ್ಳು ನುಡಿದರು. ಆದರೆ, 89.62 ಕೋಟಿ ಮೊತ್ತದ ಅವ್ಯವಹಾರವಾಗಿದ್ದು, ಅದರಲ್ಲಿ 56 ಕೋಟಿ ವಸೂಲು ಮಾಡಲಾಗಿದೆ. ಪರಿಶಿಷ್ಟರ ಹಣ ದುರುಪಯೋಗವಾಗಲು ಬಿಡುವುದಿಲ್ಲ. ಅಭಿವೃದ್ಧಿ ನಿಗಮಕ್ಕೆ ಈ ಮುಂಚೆ ನಿಗದಿಪಡಿಸಿರುವಂತೆ ಅನುದಾನವನ್ನು ನೀಡಿ, ಸಮುದಾಯದ ಅಭಿವೃದ್ಧಿಗೆ ಬಳಸಲಾಗುವುದು ಎಂದು ಹೇಳಿದರು.ಮೋದಿಯವರು ಬಂಡವಾಳಶಾಹಿಗಳ ಪರ:
ದೇಶದ ಸ್ವಾತಂತ್ರ್ಯಕ್ಕೆ ದುಡಿದ ನೆಹರೂರವರು ಹಾಗೂ ಇಂದಿರಾಗಾಂಧಿ ಸೇರಿದಂತೆ ಹಲವು ನಾಯಕರು ದೇಶಕ್ಕಾಗಿ ದುಡಿದಿದ್ದಾರೆ. ಮನಮೋಹನ್ ಸಿಂಗ್ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆದರೀಗ ಭಾರತದ ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ. ಹಿಂದೆ 53.11 ಲಕ್ಷ ಕೋಟಿ ಇದ್ದ ಸಾಲದ ಮೊತ್ತ ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರು.ಗೆ ತಲುಪಿದೆ. ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ ಮತ್ತು ಸಾಲ ಮಾಡುತ್ತಾರೆ ಎಂದು ಈ ಬಾರಿ ವೋಟು ನೀಡಲಾಗಿದೆಯೇ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಕಾಂಗ್ರೆಸ್ ಸರ್ಕಾರ ಸದಾ ಬಡಜನರ ಪರವಾಗಿದೆ. ಶಕ್ತಿ ಯೋಜನೆಯಡಿ 3.50 ಕೋಟಿ ಜನ ಉಚಿತವಾಗಿ ಪ್ರಯಾಣಿಸಿದ್ದು, ಇದುವರೆಗೆ 287 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ನಾನು ಬಡವರ ಏಳಿಗೆಗಾಗಿಯೇ ಅಧಿಕಾರದಲ್ಲಿದ್ದೇನೆ. ಸರ್ಕಾರ ಬಡವರು, ಹೈನುಗಾರರು, ದಲಿತರು, ಅಲ್ಪಸಂಖ್ಯಾತರ ಪರವಾಗಿರಲಿದೆ. ರಾಜ್ಯದ ಜನರ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.