ನಾನೇಕೆ ಪ್ರಧಾನಿ ಮೋದಿ ಸಾವು ಬಯಸಲಿ?

KannadaprabhaNewsNetwork |  
Published : May 04, 2024, 01:30 AM IST
ಕಾಗೆ | Kannada Prabha

ಸಾರಾಂಶ

ನಾನೇಕೆ ಪ್ರಧಾನಿ ಮೋದಿ ಸಾವನ್ನು ಬಯಸಲಿ? ಅವರು ಇನ್ನೂ ನೂರ್ಕಾಲ ಬಾಳಲಿ. ನಾನು ಯಾರನ್ನಾದರೂ ಸಾಯಲಿ ಎಂದರೆ ಸಾಯುತ್ತಾರೆಯೇ ಎಂದು ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಪ್ರಶ್ನಿಸಿದರು.

ಕನ್ನಡಪ್ರಭ ವಾರ್ತೆ ಕಾಗವಾಡನಾನೇಕೆ ಪ್ರಧಾನಿ ಮೋದಿ ಸಾವನ್ನು ಬಯಸಲಿ? ಅವರು ಇನ್ನೂ ನೂರ್ಕಾಲ ಬಾಳಲಿ. ನಾನು ಯಾರನ್ನಾದರೂ ಸಾಯಲಿ ಎಂದರೆ ಸಾಯುತ್ತಾರೆಯೇ ಎಂದು ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಪ್ರಶ್ನಿಸಿದರು.

ತಾಲೂಕಿನ ಗುಂಡೇವಾಡಿಯಲ್ಲಿ ಶುಕ್ರವಾರ ನಡೆದ ‌ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಸತ್ತರೇ ಯಾರೂ ಪ್ರಧಾನಿ ಆಗಲ್ವಾ ಎಂದು ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಅವರು, ಮೊನ್ನೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಆಡು ಭಾಷೆಯಲ್ಲಿ ಮಾತನಾಡಿದ್ದೇನೆ ಹೊರತು ಯಾರಿಗೂ ಅವಮಾನ ಮಾಡುವ ಮತ್ತು ಯಾರ ಸಾವು ಬಯಸಿ ಮಾತನಾಡಿಲ್ಲ. ವಿನಾಕಾರಣ ನನ್ನ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ನಾನು ಮಾತನಾಡಿದ ಉದ್ದೇಶ ಬರೀ ಇಷ್ಟೆ ದೇಶದ ೧೪೦ ಕೋಟಿ ಜನರಲ್ಲಿ ಯಾರಿಗೂ ಪ್ರಧಾನಿಯಾಗುವ ಯೋಗ್ಯತೆ ಇಲ್ಲವೆ ಎಂದು ಪ್ರಶ್ನಿಸಿದ್ದೆ‌. ಆದರೆ, ನಾನು ಸಾವು ಬಯಸಿದ್ದಾಗಿ ಬಿಂಬಿಸುತ್ತಿರುವುದು ನೋವಿನ ಸಂಗತಿ. ಪ್ರಧಾನಿ ವಿರುದ್ಧ ಹೇಳಿಕೆ ನೀಡಿದ್ದಾರೆ. ಹಿಂದು ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿಯವರು ದೂರುತ್ತಿದ್ದಾರೆ‌. ನಾನು ಕೂಡ ಒಬ್ಬ ಹಿಂದು, ನಾನೇನು ಹಿಂದು ವಿರೋಧಿ ಅಲ್ಲ ಎಂದು ಸ್ಪಷ್ಟಪಡಿಸಿದರು.

ಜುಗುಳ ಗ್ರಾಮದಲ್ಲಿಯೂ ಇದೇ ಆಗಿದೆ‌. ನಾನು ಕಾರಿನಲ್ಲಿ ಹೋಗಬೇಕಾದರೇ ಕೆಲವರು ಮುಂದೆ ಬಂದರು. ನನ್ನನ್ನು ನೋಡಿ ಧಿಕ್ಕಾರದ ಘೋಷಣೆ ಕೂಗಿದರು. ನನ್ನ ಕಾರಿಗೆ ಗುದ್ದಿದರು. ನಾನು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮುಂದೆ ನಾನು ಪ್ರಚಾರ ಕಾರ್ಯಕ್ರಮದಲ್ಲಿ ಹಾಸ್ಯಭರಿತವಾಗಿ ಮಾತನಾಡುತ್ತ ವಿದ್ಯುತ್ ಸಂಪರ್ಕ ಕಡಿತದ ಬಗ್ಗೆ ಹೇಳಿದೆ. ಆದರೆ, ಅದನ್ನೂ ತಿರುಚಿ ಜನತೆಗೆ ಬೆದರಿಕೆ ಹಾಕಿ ಮತ ಕೇಳಿದ್ದಾರೆ ಎಂದು ಆರೋಪಿಸಿದರು. ಇದಕ್ಕೆಲ್ಲ ಏನು ಉತ್ತರ ಕೊಡುವುದು ಎಂದರು.

ನಾವು ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಕೊಟ್ಟು ನುಡಿದಂತೆ ನಡೆದಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ, ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ 22ಕ್ಕೂ ಅಧಿಕ ಸ್ಥಾನ ಗೆದ್ದು ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿ, ರಾಜ್ಯದಿಂದ ಆಯ್ಕೆಯಾಗಿ ಹೋದ ಬಿಜೆಪಿಯ 25 ಸಂಸದರು ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ ಬರ, ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪಗಳು ಜರುಗಿದರೂ ಕೂಡ ಕೇಂದ್ರದಿಂದ ಒಂದು ಬಿಡಿಗಾಸು ಅನುದಾನ ತರದೆ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಅದಕ್ಕಾಗಿ ಅಂಥವರಿಗೆ ತಕ್ಕ ಪಾಠ ಕಲಿಸಬೇಕು. ಅದಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.

ಮಾಜಿ ಶಾಸಕ ಕೇಶವಮೂರ್ತಿ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ಆಶಾ ಐಹೊಳಿ, ಪ್ರಶಾಂತರಾವ್ ಐಹೊಳಿ, ದಿಗ್ವಿಜಯ ಪವಾರ ದೇಸಾಯಿ, ವಿಜಯ ಅಕಿವಾಟೆ. ರೇಖಾ ಪುಂಜಪ್ಪಗೊಳ, ಗುಳಪ್ಪ ಜತ್ತಿ, ಶಿವಾನಂದ ಗೊಲಬಾಂವಿ, ರಫಿಕ ಪಟೇಲ, ಸಂತೋಷ ಸಿಂದಗಿ, ಪ್ರಕೃತಿ ಸಿಂದಗಿ, ಸಿದರಾಯ ತೇಲಿ, ರವಿ ಕಾಂಬಳೆ, ಪೂರ್ಣಿಮಾ ಕಾಂಬಳೆ, ಸುರೇಶ ಮೆಂಡಿಗೇರಿ. ಶಂಕರ ಅವಗಡೆ ,ಬಸವರಾಜ ನಾವಿ, ಶರೀಫ ಮುಲ್ಕಾ, ಕಾಡಪ್ಪ ಸಿಂಗಾಡಿ, ಮಹಾಂತಯ್ಯ ಹಿರೇಮಠ ಸೇರಿದಂತೆ ಅನೇಕರು ಇದ್ದರು. ಈ ವೇಳೆ ಬಿಜೆಪಿ ತೊರೆದು ಶಾಸಕ ರಾಜು ಕಾಗೆ ಸಮ್ಮುಖದಲ್ಲಿ ಕೆಲವರು ಕಾಂಗ್ರೆಸ್ ಸೇರ್ಪಡೆಗೊಂಡರು.ನನ್ನದು ಇಪ್ಪತ್ತೈದು ವರ್ಷಗಳ ರಾಜಕೀಯ ಜೀವನ, ನಾನು ಯಾರಿಗೂ ನೋವನ್ನುಂಟು ಮಾಡುವ, ಯಾರಿಗೂ ಕಪ್ಪು ಚುಕ್ಕೆ ತರುವ ಕೆಲಸ ಮಾಡಿಲ್ಲ‌‌, ಮಾಡುವುದೂ ಇಲ್ಲ. ನಾನು ಸಿದ್ದರಾಮಯ್ಯ ಬಗ್ಗೆಯೂ ಮಾತನಾಡುತ್ತೇನೆ. ಸಹಜವಾಗಿಯೇ ಆಡು ಭಾಷೆಯಲ್ಲಿ ಮಾತನಾಡುವುದು ರೂಢಿ‌. ಅದನ್ನೇ ತಿರುಚಿ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರುವುದು ಖಂಡನೀಯ.

-ರಾಜು ಕಾಗೆ, ಕಾಗವಾಡ ಕ್ಷೇತ್ರದ ಶಾಸಕ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ