ಪಾಲಿಕೆ ವ್ಯಾಪ್ತಿ ವಿಸ್ತರಿಸಿದ್ದು ಯಾಕೆ?

KannadaprabhaNewsNetwork |  
Published : Nov 11, 2025, 03:15 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ 35 ವಾರ್ಡಗಳಲ್ಲಿ‌ ಈಗಿರುವ ಪ್ರದೇಶಗಳಲ್ಲೇ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮರೀಚಿಕೆಯಾಗಿದ್ದು, ಅದನ್ನೇ ಅಭಿವೃದ್ಧಿಯನ್ನು ಮಾಡಲಾಗುತ್ತಿಲ್ಲ. ಇದರ ಮಧ್ಯೆ ಮತ್ತೆ ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯನ್ನು ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿ ವಿಸ್ತರಣೆ ಮಾಡಿದ್ದು ಬೇಸರದ ಸಂಗತಿಯಾಗಿದೆ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ರವೀಂದ್ರ ಲೋಣಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ವಿಜಯಪುರ

ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ 35 ವಾರ್ಡಗಳಲ್ಲಿ‌ ಈಗಿರುವ ಪ್ರದೇಶಗಳಲ್ಲೇ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮರೀಚಿಕೆಯಾಗಿದ್ದು, ಅದನ್ನೇ ಅಭಿವೃದ್ಧಿಯನ್ನು ಮಾಡಲಾಗುತ್ತಿಲ್ಲ. ಇದರ ಮಧ್ಯೆ ಮತ್ತೆ ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯನ್ನು ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿ ವಿಸ್ತರಣೆ ಮಾಡಿದ್ದು ಬೇಸರದ ಸಂಗತಿಯಾಗಿದೆ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ರವೀಂದ್ರ ಲೋಣಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ವ್ಯಾಪ್ತಿಯನ್ನು ವಿಸ್ತರಿಸುವ ಬಗ್ಗೆ ಯಾರೊಂದಿಗೂ ಚರ್ಚೆ ನಡೆಸದೇ ಪಾಲಿಕೆಯ ವ್ಯಾಪ್ತಿಯನ್ನು ಸುತ್ತಮುತ್ತಲಿನ 10ಕ್ಕೂ ಅಧಿಕ ಹಳ್ಳಿಗಳಿಗೆ ವಿಸ್ತರಿಸಿದ್ದು ನಮಗೆ ಆಶ್ಚರ್ಯ ತಂದಿದೆ. ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಹಣಕಾಸಿನ ತೊಂದರೆಯಿದೆ. ಜೊತೆಗೆ ಶೇಕಡ 25ರಷ್ಟು ಮಾತ್ರ ಸಿಬ್ಬಂದಿಯಿದ್ದು, ಅಧಿಕಾರಿಗಳ ಕೊರತೆಯೂ ಇದೆ. ಇಂತಹದ್ದರಲ್ಲಿ ಪಾಲಿಕೆ ವ್ಯಾಪ್ತಿ ವಿಸ್ತರಿಸುವ ಅಗತ್ಯವಿರಲಿಲ್ಲ.‌ ನಗರದ 16ನೇ ವಾರ್ಡ್, ಆಶ್ರಮ ಏರಿಯಾ, ಬಾಗಲಕೋಟೆ ರಸ್ತೆ ಸೇರಿದಂತೆ ಬಹುತೇಕ ಕಡೆಗಳಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲ. ಕೋಟೆಗೋಡೆ ಒಳಭಾಗದಲ್ಲಿ ಸ್ಟಾರ್ಮ್ ವಾಟರ್ ಡ್ರೈನೇಜ್ ಸಿಸ್ಟಮ್ ಇಲ್ಲದೆ, ಸರಿಯಾದ ನೀರಿನ ವ್ಯವಸ್ಥೆ ಇಲ್ಲದೆ ಮತ್ತು ಲೋಕೋಪಯೋಗಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಮನ್ವಯತೆ ಇಲ್ಲದೆ ಸಮಸ್ಯೆಗಳು ಸಂಭವಿಸುತ್ತಿವೆ. ನಗರದಲ್ಲಿ ಸಂಚಾರ ಸಮಸ್ಯೆಯಾಗಿದೆ. ಇದೆಲ್ಲವನ್ನೂ ಸರಿಪಡಿಸುವ ಕೆಲಸ‌ ಮಹಾನಗರ ಪಾಲಿಕೆ ಮಾಡಿಲ್ಲ. ಪಾಲಿಕೆ ವಿಸ್ತರಣೆ ಆಗುವುದರಿಂದ ನಗರ, ಜಿಲ್ಲೆಯ ಅಭಿವೃದ್ಧಿ ದೃಷ್ಠಿಯಿಂದ ಸರಿಯೋ ಅಥವಾ ಇದರಿಂದ ಬಾಧಕಗಳಾಗುತ್ತೆವೆಯೋ ನೋಡಬೇಕಿತ್ತು. 1995ರಲ್ಲಿ ವಿಜಯಪುರ ನಗರದಸಭೆ ವ್ಯಾಪ್ತಿಯು ವಿಸ್ತರಣೆಯಾಗಿತ್ತು. ನಂತರದಲ್ಲಿ ಈಗ ವ್ಯಾಪ್ತಿಯನ್ನು ವಿಸ್ತರಣೆ ಮಾಡಿದ್ದಾರೆ. ಇದು ಆತುರದ ನಿರ್ಧಾರವಾಗಿದ್ದು, ಇದನ್ನು ನಾನು ಖಂಡಿಸುತ್ತೇನೆ ಎಂದು ಅವರು ಹೇಳಿದರು.ಹಲವು ಪಂಚಾಯತಿ ವ್ಯಾಪ್ತಿಗಳಲ್ಲಿರುವ ಹಳ್ಳಿಗಳನ್ನು ಪೂರ್ತಿಯಾಗಿ ಪಾಲಿಕೆ ವ್ಯಾಪ್ತಿಗೆ ತೆಗೆದುಕೊಳ್ಳುತ್ತಾರೋ ಅಥವಾ ಯಾವ ಯಾವ ಸರ್ವೇ ನಂಬರ್ ಗಳುಳ್ಳವಾಯ್ದ ಕೆಲವು ಭಾಗಗಳನ್ನು ಮಾತ್ರವೇ ತೆಗೆದುಕೊಳ್ಳುತ್ತಾರೋ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಕ್ರಮಬದ್ಧವಾದ ಚರ್ಚೆಗಳನ್ನು ನಡೆಸದೇ ಸರ್ಕಾರ ಈ ರೀತಿಯಾಗಿ ಏಕಾಏಕಿ ಪಾಲಿಕೆಯ ವ್ಯಾಪ್ತಿಯನ್ನು ವಿಸ್ತರಣೆ ಮಾಡಿದ್ದು ಯಾಕೆ..? ಎಂಬುದನ್ನು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಂ.ಬಿ.ಪಾಟೀಲ ಅವರು ಸ್ಪಷ್ಟಪಡಿಸಬೇಕು. ನಗರದಲ್ಲಿರುವ 84 ಐತಿಹಾಸಿಕ ಸ್ಮಾರಕಗಳನ್ನು ಅಭಿವೃದ್ಧಿ ಮಾಡದೆ ನಗರ ವ್ಯಾಪ್ತಿಯನ್ನು ವಿಸ್ತರಣೆ ಮಾಡಿರುವುದನ್ನು ಗಮನಿಸಿದರೆ ಇದು ರಿಯಲ್ ಎಸ್ಟೇಟ್ ಉದ್ಯಮವನ್ನು ಬೆಳೆಸುವ ಉದ್ದೇಶ ಮತ್ತು ಭೂಮಿಯ ಬೆಲೆಯನ್ನು ಹೆಚ್ಚಳ ಮಾಡುವ ಉದ್ದೇಶದಿಂದ ಈ ತಂತ್ರ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವರು, ವಿಜಯಪುರ ಮಹಾನಗರ ಪಾಲಿಕೆ ಅಧಿಕಾರಿಗಳು, ಸದಸ್ಯರು ಹಾಗೂ ನಗರದ ಜನತೆಯ ಸಭೆಯನ್ನು ಕರೆದು, ಯಾಕೆ ನಗರದ ವ್ಯಾಪ್ತಿಯನ್ನು ವಿಸ್ತರಿಸಲಾಗಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಕೊಟ್ಟು ಆಮೇಲೆ ಅಭಿವೃದ್ಧಿಪಡಿಸಬೇಕು ಎಂದು ತಿಳಿಸಿದರು.ಕೋಟ್‌ಕ್ರಮಬದ್ಧವಾದ ಚರ್ಚೆಗಳನ್ನು ನಡೆಸದೇ ಸರ್ಕಾರ ಈ ರೀತಿಯಾಗಿ ಏಕಾಏಕಿ ಪಾಲಿಕೆಯ ವ್ಯಾಪ್ತಿಯನ್ನು ವಿಸ್ತರಣೆ ಮಾಡಿದ್ದು ಯಾಕೆ..? ಎಂಬುದನ್ನು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಂ.ಬಿ.ಪಾಟೀಲ ಅವರು ಸ್ಪಷ್ಟಪಡಿಸಬೇಕು. ನಗರದಲ್ಲಿರುವ 84 ಐತಿಹಾಸಿಕ ಸ್ಮಾರಕಗಳನ್ನು ಅಭಿವೃದ್ಧಿ ಮಾಡದೆ ನಗರ ವ್ಯಾಪ್ತಿಯನ್ನು ವಿಸ್ತರಣೆ ಮಾಡಿರುವುದನ್ನು ಗಮನಿಸಿದರೆ ಇದು ರಿಯಲ್ ಎಸ್ಟೇಟ್ ಉದ್ಯಮವನ್ನು ಬೆಳೆಸುವ ಉದ್ದೇಶ ಮತ್ತು ಭೂಮಿಯ ಬೆಲೆಯನ್ನು ಹೆಚ್ಚಳ ಮಾಡುವ ಉದ್ದೇಶದಿಂದ ಈ ತಂತ್ರ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಲಿದೆ.ರವೀಂದ್ರ ಲೋಣಿ, ಮಹಾನಗರ ಪಾಲಿಕೆಯ ಮಾಜಿ ಸದಸ್ಯ

PREV

Recommended Stories

ಜಿಲ್ಲೆಯ ಜನತೆಗೆ ಭೂಕಂಪನದ ಆತಂಕ ನಿವಾರಿಸಿ
ಹಿರಿತನದ ಆಧಾರದ ಮೇಲೆ ಸೂಕ್ತ ಸ್ಥಾನ ನೀಡಿ ಗೌರವಿಸಬೇಕು