ಯಕ್ಷಗಾನವನ್ನು ರಾಜ್ಯ ಕಲೆಯಾಗಿ ಅಧಿಕೃತವಾಗಿ ಸರ್ಕಾರ ಘೋಷಿಸಬೇಕು ಎಂಬುದು ಕಲಾವಿದರು, ಕಲಾ ಪ್ರೇಮಿಗಳು ಸೇರಿದಂತೆ ನಮ್ಮೆಲ್ಲರ ಒತ್ತಾಸೆ. ಈ ನಿಟ್ಟಿನಲ್ಲಿ ಸಂಸ್ಕೃತಿ ಸಚಿವರ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಕೂಡಾ ಅರ್ಪಿಸಿದ್ದೇವೆ, ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸುವ ನಿರೀಕ್ಷೆ ಇದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.
ಉಡುಪಿ: ಯಕ್ಷಗಾನವನ್ನು ರಾಜ್ಯ ಕಲೆಯಾಗಿ ಅಧಿಕೃತವಾಗಿ ಸರ್ಕಾರ ಘೋಷಿಸಬೇಕು ಎಂಬುದು ಕಲಾವಿದರು, ಕಲಾ ಪ್ರೇಮಿಗಳು ಸೇರಿದಂತೆ ನಮ್ಮೆಲ್ಲರ ಒತ್ತಾಸೆ. ಈ ನಿಟ್ಟಿನಲ್ಲಿ ಸಂಸ್ಕೃತಿ ಸಚಿವರ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಕೂಡಾ ಅರ್ಪಿಸಿದ್ದೇವೆ, ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸುವ ನಿರೀಕ್ಷೆ ಇದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.
ಕರ್ನಾಟಕ ಯಕ್ಷಗಾನ ಅಕಾಡೆಮಿ ಸೋಮವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ 2026ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ, ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.ಯಕ್ಷಗಾನಕ್ಕೆ ರಾಜ್ಯ ಕಲೆಯ ಮನ್ನಣೆ ಸಿಕ್ಕಿದರೆ ಅದರ ಉಳಿವು ಹಾಗೂ ಬೆಳವಣಿಗೆಗೆ ಅನುಕೂಲವಾಗಲಿದೆ, ಮುಂದೆ ಸರ್ಕಾರದಿಂದ ಹೆಚ್ಚಿನ ಅನುದಾನ ದೊರಕಿ, ಕಲೆ, ಕಲಾವಿದರ ಶ್ರೇಯಸಿಗೆ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲೂ ಅವಕಾಶವಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಅಕಾಡೆಮಿಯ ಶಿಫಾರಸನ್ನು ಮಾನ್ಯ ಮಾಡುವ ಭರವಸೆ ತಮಗಿದೆ ಎಂದು ಅವರು ಹೇಳಿದರು.ಸರ್ಕಾರದ ಅನುದಾನ ಬಳಸಿಕೊಂಡು ಯಕ್ಷಗಾನ ಕ್ಷೇತ್ರದ ಎಲ್ಲರನ್ನೂ ಮುಟ್ಟುವ ಕೆಲಸ ಮಾಡಿದ ತೃಪ್ತಿ ನನಗಿದೆ. 15 ಜನ ಅಕಾಡೆಮಿ ಸದಸ್ಯರು ಪೂರ್ಣ ಸಹಕಾರ ನೀಡಿದ್ದಾರೆ. ಅಕಾಡೆಮಿ ಅಧ್ಯಕ್ಷನಾಗಿ ಕಳೆದ. 2 ವರ್ಷ 3 ತಿಂಗಳ ಅವಧಿಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ, 80-85 ವರ್ಷ ಮೇಲ್ಪಟ್ಟ ಹಿರಿಯ ಕಲಾವಿದರನ್ನು ಗುರುತಿಸಿ ಗೌರವ ಕೊಡಲು ಪ್ರಯತ್ನ ಪಟ್ಟಿದ್ದೇವೆ ಎಂದು ಅವರು ತಿಳಿಸಿದರು.
ಡಿಜಿಟಲೀಕರಣ-ಬಿಳಿಮಲೆ: ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ವಿಜ್ಞಾನ, ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿರುವ ಕಾಲಘಟ್ಟದಲ್ಲಿ ಸರ್ಕಾರ ಯಕ್ಷಗಾನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಅಂತರ್ಜಾಲದ ಮೂಲಕ ವಿಶ್ವದೆಲ್ಲೆಡೆ ಇರುವ ಆಸಕ್ತರಿಗೆ ತಲುಪಿಸುವ ಮಹತ್ವಾಕಾಂಕ್ಷೆಯ ಕಾರ್ಯಕ್ಕೆ ಮುಂದಾಗಿದೆ ಎಂದರು.ಪ್ರಶಸ್ತಿ ಪುರಸ್ಕೃತರ ಪರವಾಗಿ ಮಾತನಾಡಿದ 2026ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತಾ ಪ್ರಸಂಗಕರ್ತ ಎಂ.ಕೆ. ರಮೇಶ್ ಆಚಾರ್ಯ, ಅಕಾಡೆಮಿಯಿಂದ ಯಕ್ಷಗಾನ ಬೆಳೆಸುವ ಜತೆಗೆ ಸಂರಕ್ಷಣೆ ಮಾಡುವ ಕೆಲಸ ನಡೆಯುತ್ತಿರುವುದು ಸಂತಸ ತಂದಿದೆ ಎಂದರು.ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಕಲ್ಮನೆ ಎ.ಎಸ್.ನಂಜಪ್ಪ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಡಾ.ಗೊಲ್ಲಹಳ್ಳಿ ಶಿವಪ್ರಸಾದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ. ಕೆ.ಎಂ.ವಸುಂಧರಾ, ಅಕಾಡೆಮಿ ರಿಜಿಸ್ಟ್ರಾರ್ ನಮ್ರತಾ ಎನ್. ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.