ಹಣಕಾಸು ಅಪ್ಲಿಕೇಶನ್‌ ವ್ಯಾಪಕ ಬಳಕೆ ಅಭಿವೃದ್ಧಿ ಸಂಕೇತ

KannadaprabhaNewsNetwork |  
Published : Sep 28, 2025, 02:01 AM IST
ಮಾಧ್ಯಮ ಪ್ರತಿನಿಧಿಗಳಿಗೆ ವಾರ್ತಾಲಾಪ ಕಾರ್ಯಾಗಾರ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಕೇಂದ್ರ ಸರ್ಕಾರದ ಡಿಜಿಟಲೀಕರಣದಿಂದ ಯೋಜನೆಗಳ ಲಾಭ ಸುಲಭವಾಗಿ ಎಲ್ಲರಿಗೂ ದೊರೆಯುವಂತಾಗಿದೆ. ಆನ್‌ಲೈನ್ ಹಣಕಾಸು ವಹಿವಾಟು ನಡೆಸುವ ಅಪ್ಲಿಕೇಶನ್‌ಗಳನ್ನು ಜನರು ವ್ಯಾಪಕವಾಗಿ ಬಳಸುತ್ತಿರುವುದು ಅಭಿವೃದ್ಧಿಯ ಸಂಕೇತ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಕೇಂದ್ರ ಸರ್ಕಾರದ ಡಿಜಿಟಲೀಕರಣದಿಂದ ಯೋಜನೆಗಳ ಲಾಭ ಸುಲಭವಾಗಿ ಎಲ್ಲರಿಗೂ ದೊರೆಯುವಂತಾಗಿದೆ. ಆನ್‌ಲೈನ್ ಹಣಕಾಸು ವಹಿವಾಟು ನಡೆಸುವ ಅಪ್ಲಿಕೇಶನ್‌ಗಳನ್ನು ಜನರು ವ್ಯಾಪಕವಾಗಿ ಬಳಸುತ್ತಿರುವುದು ಅಭಿವೃದ್ಧಿಯ ಸಂಕೇತ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ), ಕೇಂದ್ರ ಸಂವಹನ ಇಲಾಖೆ, ಕೂಡಗಿ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ(ಎನ್‌ಟಿಪಿಸಿ), ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸೇರಿದಂತೆ ವಿವಿಧ ಸಂಘಗಳು ವಿಜಯಪುರದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಹಮ್ಮಿಕೊಂಡಿದ್ದ ವಾರ್ತಾಲಾಪ ಕಾರ್ಯಾಗಾರದಲ್ಲಿ ಮಾತನಾಡಿದರು.

ಕೇಂದ್ರ ವಾರ್ತಾ ಶಾಖೆಯ ಹೆಚ್ಚುವರಿ ಮಹಾನಿರ್ದೇಶಕ ಎಸ್.ಜಿ.ರವೀಂದ್ರ ಮಾತನಾಡಿ, ಪತ್ರಕರ್ತರಿಗೆ ಕೇಂದ್ರ ಸರ್ಕಾರದ ಯೋಜನೆಗಳ ಅರಿವು ಮೂಡಿಸುವುದು ವಾರ್ತಾಲಾಪ ಕಾರ್ಯಾಗಾರದ ಮುಖ್ಯ ಉದ್ದೇಶ ಎಂದರು.

ಜಿಲ್ಲಾಧಿಕಾರಿ ಡಾ.ಆನಂದ.ಕೆ ಮಾತನಾಡಿ, ಉತ್ತಮವಾದ ಸಮಾಜ ನಿರ್ಮಾಣದಲ್ಲಿ ಆಡಳಿತ ಹಾಗೂ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಾಗ ಸರ್ಕಾರದ ಯೋಜನೆಗಳನ್ನು ಮತ್ತಷ್ಟು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಮಾಧ್ಯಮಗಳು ಸುದ್ದಿ ಬಿತ್ತರಿಸುವ ಮುನ್ನ ಸಾಮಾಜಿಕ ಜವಾಬ್ದಾರಿ ಪಾಲಿಸಬೇಕು. ಸೂಕ್ಷ್ಮ ಘಟನೆಗಳ ವರದಿಗಾರಿಕೆಯ ವೇಳೆ ಕಾನೂನಿನ ಅರಿವಿನೊಂದಿಗೆ ವರದಿ ಮಾಡಿದಾಗ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ಜಿಪಂ ಸಿಇಒ ರಿಷಿ ಆನಂದ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಗಣನೀಯವಾಗಿದೆ ಎಂದರು.

ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ, ಕೂಡಗಿಯ ಪ್ರಧಾನ ವ್ಯವಸ್ಥಾಪಕ ಸಂತೋಷ ತಿವಾರಿ, ವಿಜಯಪುರ ಸಿಜಿಎಸ್‌ಟಿ ವಿಭಾಗದ ಸಹಾಯಕ ಆಯುಕ್ತ ವೈ.ಸಿ.ಪೂಜಾರಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಂಪತಕುಮಾರ ಗುಣಾರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಕೆನರಾ ಬ್ಯಾಂಕ್ ಮತ್ತು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಬಿ.ಸಿದ್ದಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಸಂಯೋಜಕಿ ಭಾರತಿ ಪಾಟೀಲ, ಹೃದ್ರೋಗ ತಜ್ಞ ಡಾ.ಶಂಕರಗೌಡ ಪಾಟೀಲ ಮಾತನಾಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಪ್ರಕಾಶ ಬೆಣ್ಣೂರ, ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘದ ಅಧ್ಯಕ್ಷ ಈರ್ಫಾನ್ ಶೇಖ, ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷ ಗುರುರಾಜ ಹೂಗಾರ, ರಾಜ್ಯ ಮಹಿಳಾ ಸಂಪಾದಕಿಯರ ಸಂಘದ ಅಧ್ಯಕ್ಷೆ ರಶ್ಮಿ ಪಾಟೀಲ ಸೇರಿದಂತೆ ಮಾಧ್ಯಮದವರು ಉಪಸ್ಥಿತರಿದ್ದರು.

PREV

Recommended Stories

ಅ.4ರಿಂದ ಅಂತಾರಾಜ್ಯ ವಿವಿ ಕಬಡ್ಡಿ ಕ್ರೀಡಾಕೂಟ
ಜಾನಪದ ಕಲೆ ಉಳಿಸಲು ಸಂಘಟನೆಗಳ ಪಾತ್ರ ಪ್ರಮುಖ: ಎಂ.ಎಂ. ವಿರಕ್ತಮಠ